Homeಮುಖಪುಟಕೊನೆಗೂ ಗ್ರಾ.ಪಂ ಚುನಾವಣೆಗೆ ದಿನಾಂಕ ನಿಗಧಿ: ಇಂದಿನಿಂದಲೇ ನೀತಿ ಸಂಹಿತೆ ಜಾರಿ!

ಕೊನೆಗೂ ಗ್ರಾ.ಪಂ ಚುನಾವಣೆಗೆ ದಿನಾಂಕ ನಿಗಧಿ: ಇಂದಿನಿಂದಲೇ ನೀತಿ ಸಂಹಿತೆ ಜಾರಿ!

ಡಿಸೆಂಬರ್ 22 ಮತ್ತು 27 ರಂದು ರಾಜ್ಯದ 5,762 ಗ್ರಾಮಪಂಚಾಯ್ತಿಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 30 ರಂದು ಫಲಿತಾಂಶ ಘೋಷಣೆಯಾಗಲಿದೆ.

- Advertisement -
- Advertisement -

ಕೊರೊನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನಿಗಧಿ ಮಾಡಿದೆ. ಡಿಸೆಂಬರ್ 22 ಮತ್ತು 27 ರಂದು ರಾಜ್ಯದ 5,762 ಗ್ರಾಮಪಂಚಾಯ್ತಿಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 30 ರಂದು ಫಲಿತಾಂಶ ಘೋಷಣೆಯಾಗಲಿದೆ.

ಇಂದು ಸುದ್ದಿಗೋಷ್ಠಿ ನಡೆಸಿದ ರಾಜ್ಯ ಚುನಾವಣಾ ಆಯುಕ್ತ ಬಸವರಾಜ್ “ರಾಜ್ಯದ ಪ್ರತಿ ಜಿಲ್ಲೆಗಳಲ್ಲಿಯೂ ಎರಡೂ ಹಂತದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 22 ರಂದು ರಾಜ್ಯದ 113 ತಾಲ್ಲೂಕುಗಳ 2,930 ಗ್ರಾ.ಪಂ ಗಳಿಗೆ ಚುನಾವಣೆ ನಡೆಯಲಿದೆ. ಅದೇ ರೀತಯಲ್ಲಿ ಡಿಸೆಂಬರ್ 27 ರಂದು 113 ತಾಲ್ಲೂಕುಗಳ 2,832 ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲಾಗುವುದು. ಡಿಸೆಂಬರ್ 30 ರಂದು ಮತ ಎಣಿಕೆ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತಿ ಜಾರಿಯಾಗಲಿದೆ” ಎಂದರು.

ಇದಕ್ಕಾಗಿ ಅಂದಾಜು 5847 ಚುನಾವಣಾಧಿಕಾರಿಗಳನ್ನು ಮತ್ತು 6085 ಸಹಾಯಕ ಚುನವಣಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಕೋವಿಡ್ ಹಿನ್ನೆಲೆಯಲ್ಲಿ 45,000 ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಸಹಾಯ ಪಡೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.


ಇದನ್ನೂ ಓದಿ; ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...