Homeಮುಖಪುಟಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು ಮೈತ್ರಿ...

ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು ಮೈತ್ರಿ ಪಕ್ಷ!

ದೇಶದಾದ್ಯಂತ ವ್ಯಕ್ತವಾಗಿರುವ ಬೆಂಬಲವನ್ನ ಗಮನದಲ್ಲಿಟ್ಟುಕೊಂಡು, ಇತ್ತೀಚೆಗೆ ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳನ್ನು ತಕ್ಷಣವೇ ಹಿಂಪಡೆಯಬೇಕು. ಕೇಂದ್ರವು ಸ್ವಾಮಿನಾಥನ್ ಆಯೋಗದ ಎಲ್ಲಾ ಶಿಫಾರಸುಗಳನ್ನು ಜಾರಿಗೆ ತರಬೇಕು.

- Advertisement -
- Advertisement -

ಕೃಷಿ ಮಸೂದೆಗಳನ್ನು ವಿರೋಧಿಸಿ ಅಕಾಲಿ ದಳ ಈಗಾಗಲೇ ಆಡಳಿತಾರೂಢ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದಿದೆ. ಈಗ ಮತ್ತೊಂದು ಮೈತ್ರಿ ಪಕ್ಷ ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟ (ಎನ್‌ಡಿಎ) ತೊರೆಯುವುದಾಗಿ ಲೋಕತಾಂತ್ರಿಕ್ ಪಕ್ಷ ಬೆದರಿಕೆ ಹಾಕಿದೆ.

ದೆಹಲಿ ಚಲೋಗೆ ಕಾರಣವಾಗಿರುವ ವಿವಾದಿತ ಕೃಷಿ ಮಸೂದೆಗಳ ಕುರಿತು ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಮುಖ್ಯಸ್ಥ, ರಾಜಸ್ಥಾನ ಸಂಸದ ಹನುಮಾನ್ ಬೆನಿವಾಲ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಜೊತೆಗೆ, ಪ್ರತಿಭಟನೆಗಳ ಬಗ್ಗೆ ರೈತರೊಂದಿಗೆ ಡಿಸೆಂಬರ್ 3 (ಗುರುವಾರ) ರಂದು ಮಾತುಕತೆ ನಡೆಸುವ ಬದಲು ತಕ್ಷಣವೇ ಮಾತುಕತೆ ನಡೆಸಿ ಎಂದು ಕೇಂದ್ರ ಸರ್ಕಾರಕ್ಕೆ ಹನುಮಾನ್ ಬೆನಿವಾಲ್ ಆಗ್ರಹಿಸಿದ್ದಾರೆ. ಗುರುವಾರ ಮಂತ್ರಿ ಮಂಡಲದ ಜೊತೆಗೆ ಅಮಿತ್ ಶಾ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: ದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

“ಅಮಿತ್ ಶಾ ಜೀ, ನಡೆಯುತ್ತಿರುವ ರೈತರ ಆಂದೋಲನಕ್ಕೆ ದೇಶದಾದ್ಯಂತ ವ್ಯಕ್ತವಾಗಿರುವ ಬೆಂಬಲವನ್ನ ಗಮನದಲ್ಲಿಟ್ಟುಕೊಂಡು, ಇತ್ತೀಚೆಗೆ ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳನ್ನು ತಕ್ಷಣವೇ ಹಿಂಪಡೆಯಬೇಕು. ಕೇಂದ್ರವು ಸ್ವಾಮಿನಾಥನ್ ಆಯೋಗದ ಎಲ್ಲಾ ಶಿಫಾರಸುಗಳನ್ನು ಜಾರಿಗೆ ತರಬೇಕು ಮತ್ತು ದೆಹಲಿಯಲ್ಲಿ ರೈತರೊಂದಿಗೆ ತಕ್ಷಣ ಸಂವಾದವನ್ನು ನಡೆಸಬೇಕು” ಎಂದು ಬೆನಿವಾಲ್ ಟ್ವೀಟ್ ಮಾಡಿದ್ದಾರೆ.

ಇನ್ನೊಂದು ಟ್ವೀಟ್‌ನಲ್ಲಿ, “ರಾಷ್ಟ್ರೀಯ ಲೋಕತಾಂತ್ರಿಕ್ ಪಾರ್ಟಿ (ಆರ್‌ಎಲ್‌ಪಿ)ಯು ಎನ್​ಡಿಎಯ ಘಟಕವಿರಬಹುದು. ಆದರೆ ಇದಕ್ಕೆ ಶಕ್ತಿ ಬಂದಿರುವುದು ರೈತರು ಮತ್ತು ಸೈನಿಕರಿಂದ. ಈ ವಿಚಾರದಲ್ಲಿ ತ್ವರಿತ ಕ್ರಮ ಕೈಗೊಳ್ಳದಿದ್ದರೆ ಇದ್ದಲ್ಲಿ, ನಾವು ರೈತರ ಹಿತದೃಷ್ಟಿಯಿಂದಾಗಿ ಎನ್​ಡಿಯ ಜೊತೆಗಿನ ಸಹಭಾಗಿತ್ವದ ಕುರಿತು ಮರುಚಿಂತನೆ ಮಾಡಬೇಕಾಗುತ್ತದೆ” ಎಂದು ಗುಡುಗಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಬೆಂಬಲ: ಗೂರ್ಖಾ ಜನಮುಕ್ತಿ ಮೋರ್ಚಾ

ಸೆಪ್ಟೆಂಬರ್‌ನಲ್ಲಿ ಕೃಷಿ ಮಸೂದೆಗಳನ್ನು ಅಂಗೀಕರಿಸಿದ ಕಾರಣ ಬಿಜೆಪಿ ತನ್ನ ಹಳೆಯ ಮಿತ್ರ ಪಕ್ಷಗಳಲ್ಲಿ ಒಂದಾದ ಶಿರೋಮಣಿ ಅಕಾಲಿ ದಳವನ್ನು ಕಳೆದುಕೊಂಡಿದೆ. ಇದರ ಬೆನ್ನಲ್ಲೇ ಈಗ ರಾಷ್ಟ್ರೀಯ ಲೋಕತಾಂತ್ರಿಕ್ ಪಾರ್ಟಿಯ ಹನುಮಾನ್ ಬೆನಿವಾಲ್ ಎನ್‌ಡಿಎ ತೊರೆಯುವ ಬೆದರಿಕೆ ಹಾಕಿದ್ದಾರೆ.

ರಾಜಸ್ಥಾನದ 10-15 ಲೋಕಸಭಾ ಸ್ಥಾನಗಳಲ್ಲಿ ಪ್ರಭಾವ ಹೊಂದಿರುವ, ರಾಜಕೀಯವಾಗಿ ಪ್ರಬಲವಾಗಿರುವ ಜಾಟ್ ಸಮುದಾಯದಿಂದ ಆರ್‌ಎಲ್‌ಪಿಗೆ ಭಾರಿ ಬೆಂಬಲವಿದೆ.  ಕಳೆದ ರಾಜಸ್ಥಾನ ಚುನಾವಣೆಯಲ್ಲಿ ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿತ್ತು.

ಬಿಜೆಪಿ ಆಡಳಿತದ ಹರಿಯಾಣ ಸೇರಿದಂತೆ ನೆರೆಯ ರಾಜ್ಯ ಸರ್ಕಾರಗಳು ರೈತರ ವಿರುದ್ಧ ಯಾವುದೇ ದಬ್ಬಾಳಿಕೆಯ ನೀತಿಯನ್ನು ಅಳವಡಿಸಿಕೊಳ್ಳಬಾರದು ಎಂದು ಬೆನಿವಾಲ್ ಹೇಳಿದ್ದರು. ಈ ಹಿಂದೆ, ರಾಜಸ್ಥಾನದ ಲಕ್ಷಾಂತರ ರೈತರೊಂದಿಗೆ ದೆಹಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ಅವರು ಸುಳಿವು ನೀಡಿದ್ದರು.

’ಪೊಲೀಸರು ಮತ್ತು ಸರ್ಕಾರಗಳು ರೈತರ ವಿರುದ್ಧ ದಬ್ಬಾಳಿಕೆಯ ನೀತಿಯನ್ನು ಅಳವಡಿಸಿಕೊಂಡರೆ, ಆರ್‌ಎಲ್‌ಪಿ ರಾಜಸ್ಥಾನ ಸೇರಿದಂತೆ ದೇಶಾದ್ಯಂತ ರೈತರ ಪರವಾಗಿ ರ್‍ಯಾಲಿಗಳನ್ನು ನಡೆಸಲಿದೆ” ಎಂದು ಗುರುವಾರ ಹೇಳಿದ್ದರು.


ಇದನ್ನೂ ಓದಿ: ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...