Homeಚಳವಳಿರೈತರಿಗೆ ಬೆಂಬಲ ಸೂಚಿಸಿ ಜಾನುವಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಾಸಕನ ರಾಜೀನಾಮೆ

ರೈತರಿಗೆ ಬೆಂಬಲ ಸೂಚಿಸಿ ಜಾನುವಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಾಸಕನ ರಾಜೀನಾಮೆ

ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಮುಖ್ಯಸ್ಥ ಹನುಮಾನ್ ಬೆನಿವಾಲ್, ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುವುದಾಗಿ ಬೆದರಿಕೆ ಹಾಕಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಜಮಾಯಿಸಿರುವ ರೈತರಿಗೆ ದೇಶಾದ್ಯಂತ ಜನರು ತಮ್ಮ ಬೆಂಬಲ ನೀಡುತ್ತಿದ್ದಾರೆ. ರಾಜಕೀಯ ನಾಯಕರೂ ಸಹ ಅನ್ನದಾತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಈಗ ಹರಿಯಾಣ ಸ್ವತಂತ್ರ ಶಾಸಕ ಸೋಂಬೀರ್ ಸಾಂಗ್ವಾನ್ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಜ್ಯ ಜಾನುವಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸೋಂಬೀರ್ ಸಾಂಗ್ವಾನ್ ಅವರು ಪಕ್ಷೇತರ ಶಾಸಕರಾಗಿದ್ದು, ಹರಿಯಾಣ ರಾಜ್ಯದ ಬಿಜೆಪಿ-ಜೆಜೆಪಿ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಬರೆದ ತಮ್ಮ ರಾಜೀನಾಮೆ ಪತ್ರದಲ್ಲಿ, “ನಾನು ರೈತರನ್ನು ಬೆಂಬಲಿಸಿ ನನ್ನ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಇಡೀ ದೇಶದ ರೈತರಂತೆಯೇ, ನನ್ನ ವಿಧಾನಸಭಾ ಕ್ಷೇತ್ರ ದಾದ್ರಿಯ ರೈತರೂ ಈ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ, ಅವರಿಗೆ ಬೆಂಬಲ ನೀಡುವುದು ನನ್ನ ನೈತಿಕ ಕರ್ತವ್ಯವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು…

ಜೊತೆಗೆ, “ನನ್ನ ಆತ್ಮಸಾಕ್ಷಿ ಮಾತು ಕೇಳಿದ ನಂತರ ನಾನು ರೈತರಿಗೆ ಸಂಪೂರ್ಣ ಬೆಂಬಲ ನೀಡಿದ್ದೇನೆ” ಎಂದು ಶಾಸಕ ಸೋಂಬೀರ್ ಸಾಂಗ್ವಾನ್ ಪತ್ರದಲ್ಲಿ ಬರೆದಿದ್ದಾರೆ.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯನ್ನು ಬೆಂಬಲಿಸಲು ಹರಿಯಾಣದ ಅನೇಕ ಬೆಂಬಲಿಗರೊಡನೆ ರೈತರ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಲು ಮತ್ತು ರಾಷ್ಟ್ರ ರಾಜಧಾನಿಗೆ ಮೆರವಣಿಗೆ ನಡೆಸಲು ನಿರ್ಧರಿಸಿದ್ದೇನೆ ಎಂದು ಶಾಸಕ ಸಾಂಗ್ವಾನ್ ಹೇಳಿದ್ದಾರೆ.

ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಮುಖ್ಯಸ್ಥ, ರಾಜಸ್ಥಾನ ಸಂಸದ ಹನುಮಾನ್ ಬೆನಿವಾಲ್, ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟ (ಎನ್‌ಡಿಎ) ತೊರೆಯುವುದಾಗಿ ಬೆದರಿಕೆ ಹಾಕಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಅಕಾಲಿ ದಳ ಈಗಾಗಲೇ ಆಡಳಿತಾರೂಢ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದಿದೆ.


ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ : ಕರ್ನಾಟಕದ 14 ಸೇರಿ ದೇಶದ 93 ಕ್ಷೇತ್ರಗಳಲ್ಲಿ ಇಂದು ಮತದಾನ

0
ದೇಶದಲ್ಲಿ ಇಂದು ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ಕರ್ನಾಟಕದ 14 ಸೇರಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಕರ್ನಾಟಕದ ಚಿಕ್ಕೋಡಿ, ಬೆಳಗಾವಿ,...