Homeಚಳವಳಿಕೃಷಿ ಕಾಯ್ದೆಗಳ ಬಗ್ಗೆ ಸಮಿತಿ ರಚಿಸುವ ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ರೈತ ಮುಖಂಡರು: ಪ್ರತಿಭಟನೆ ಮುಂದುವರಿಕೆ

ಕೃಷಿ ಕಾಯ್ದೆಗಳ ಬಗ್ಗೆ ಸಮಿತಿ ರಚಿಸುವ ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ರೈತ ಮುಖಂಡರು: ಪ್ರತಿಭಟನೆ ಮುಂದುವರಿಕೆ

ಸರ್ಕಾರದ ಮುಖಂಡರು ಎಂಎಸ್‌ಪಿಯನ್ನು ಮುಂದುವರಿಸುವುದಾಗಿ ಹೇಳಿಕೆ ನೀಡುತ್ತಿದ್ದಾರೆ. ಇದನ್ನು ಮಸೂದೆಯಲ್ಲಿ ಸೇರಿಸುವಲ್ಲಿ ಏನು ಸಮಸ್ಯೆ? ಎಂದು ಅಜಯ್ ಚೌತಲಾ ಪ್ರಶ್ನಿಸಿದ್ದಾರೆ.

- Advertisement -
- Advertisement -

ಮೂವರು ಕೇಂದ್ರ ಸಚಿವರೊಂದಿಗಿನ ಇಂದಿನ ರೈತ ಮುಖಂಡರ ಸಭೆಯಲ್ಲಿ ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಕೇಂದ್ರದ ಪ್ರಸ್ತಾಪವನ್ನು ರೈತ ಮುಖಂಡರು ತಿರಸ್ಕರಿಸಿದ್ದಾರೆ.

ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ಸಂಪೂರ್ಣ ಹಿಂಪಡೆಯಬೇಕು ಮತ್ತು ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೊಳಿಸಬೇಕು ಎಂಬ ರೈತರ ಹಕ್ಕೊತ್ತಾಯಕ್ಕೆ ಕೇಂದ್ರ ಸರ್ಕಾರ ಒಪ್ಪಿಲ್ಲ. ಬದಲಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಎಪಿಎಂಸಿ ಮಂಡಿಗಳ ಬಗೆಗಿನ ಕಳವಳವನ್ನು ಹೋಗಲಾಡಿಸಲು ಪ್ರಯತ್ನಿಸುವುದಾಗಿ ಕೇಂದ್ರದ ಪರ ಸಚಿವರು ಹೇಳಿದ್ದಾರೆ. ಇದನ್ನು ತಿರಸ್ಕರಿಸಿರುವ ರೈತರು ಪ್ರತಿಭಟನೆ ಮುಂದುವರಿಸುವುದಾಗಿ ಘೋಷಿಸಿದ್ದಾರೆ.

ಕೃಷಿ ಸಚಿವ ನರೇಂದ್ರ ತೋಮರ್, ಪಿಯೂಷ್ ಗೋಯಲ್ ಮತ್ತು ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಅವರು 35 ಸದಸ್ಯರ ರೈತರ ತಂಡದೊಂದಿಗೆ ಇಂದು ಮಧ್ಯಾಹ್ನ 3 ಗಂಟೆಯಿಂದ ದೆಹಲಿಯ ವಿಜ್ಞಾನ ಭವನದಲ್ಲಿ ಸಭೆ ನಡೆಯುತ್ತಿದೆ.

ದೆಹಲಿ ಚಲೋದ ಏಳು ಸದಸ್ಯರ ರೈತರ ಸಮಿತಿಯ ಭಾಗವಾಗಿದ್ದ ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರು ಇಂದಿನ ಮಾತುಕತೆಗೆ ಹಾಜರಾಗುವ ಬಗ್ಗೆ ಕೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಅವರು ಸರ್ಕಾರದ ಮಾತುಕತೆಯಿಂದ ಹಿಂದೆ ಸರಿದಿದ್ದರು. ರಾಜಕೀಯ ಕಾರ್ಯಕರ್ತರು ಇರಬಾರದು ಎಂದು ಕೇಂದ್ರ ಹೇಳುತ್ತಿದೆ. ನನ್ನಿಂದ ಅಡ್ಡಿಯಾಗುವುದ ಬೇಡ, ಮಾತುಕತೆ ಮುಂದುವರಿಯಬೇಕು ಎಂದು ಯಾದವ್ ಹೇಳಿದ್ದಾರೆ.

ಇದು ಕೇಂದ್ರ ಸರ್ಕಾರದೊಂದಿಗೆ ರೈತರ ಮೂರನೇ ಮಾತುಕತೆಯಾಗಿದೆ. ಕಳೆದೆರೆಡು ಮಾತುಕತೆಗಳು ವಿಫಲಗೊಂಡಿದ್ದವು. ಇಂದಿನ ಸಭೆ ಮುಂದುವರೆಯುತ್ತಿದ್ದರು ಇದು ಸಹ ವಿಫಲವಾಗುವ ಸಂಭವವಿದೆ.

ಸರ್ಕಾರದ ಮುಖಂಡರು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯನ್ನು ಮುಂದುವರಿಸುವುದಾಗಿ ಹೇಳಿಕೆ ನೀಡುತ್ತಿದ್ದಾರೆ. ಇದನ್ನು ಮಸೂದೆಯಲ್ಲಿ ಸೇರಿಸುವಲ್ಲಿ ಏನು ಸಮಸ್ಯೆ? ಎಂದು ಜನನಾಯಕ್ ಜನತಾ ಪಕ್ಷದ(ಜೆಜೆಪಿ) ಸಂಸ್ಥಾಪಕ ಅಜಯ್ ಚೌತಲಾ ಪ್ರಶ್ನಿಸಿದ್ದಾರೆ.

ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳಿಗೆ ಗುರುವಾರದೊಳಗೆ ಸರ್ಕಾರ ಒಪ್ಪದಿದ್ದರೆ ಮಹಾರಾಷ್ಟ್ರದಿಂದ ದೆಹಲಿಗೆ ಮೆರವಣಿಗೆ ಪ್ರಾರಂಭಿಸುವುದಾಗಿ ಮಹಾರಾಷ್ಟ್ರ ರೈತ ಗುಂಪುಗಳು ಕೇಂದ್ರಕ್ಕೆ ಎಚ್ಚರಿಕೆ ನೀಡಿವೆ.


ಇದನ್ನೂ ಓದಿ: ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಕೆನಡಾ ಪ್ರಧಾನಿ: ಅನಪೇಕ್ಷಿತ, ಅನಗತ್ಯ ಎಂದ ಭಾರತ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...