Homeಕರ್ನಾಟಕಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಜಾರಿಗೊಳಿಸಿಲ್ಲ? ಕರ್ನಾಟಕದಲ್ಲಿಯೇ ಏಕೆ?

- Advertisement -
- Advertisement -

ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್‌ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಹಾಗೂ ಸಂತೋಷ್ ಅವರು ಈಶ್ವರಪ್ಪ ಅವರನ್ನು ಬಳಸಿಕೊಂಡು ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

“ನಾವು ಕರೆದರೂ ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸುತ್ತಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಅವರು ನನ್ನನ್ನು ಕರೆದೂ ಇಲ್ಲ, ನಾನು ಬರುತ್ತೇನೆ ಅಥವಾ ಬರುವುದಿಲ್ಲ ಎಂದು ಅವರಿಗೆ ಹೇಳಿಲ್ಲ. ಈಶ್ವರಪ್ಪ ಈ ವಿಚಾರದಲ್ಲಿ ಸುಳ್ಳು ಹೇಳಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

“ಮೋದಿಯವರು ಪ್ರಧಾನಿಯಾಗಿ ಆರೂವರೆ ವರ್ಷಗಳಾದವು. ಗೊಂಡ, ರಾಜಗೊಂಡ ಸಮುದಾಯದವರು ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಆ ಬಗ್ಗೆ ಈಶ್ವರಪ್ಪ ಅವರು ಏಕೆ ಆದೇಶ ಮಾಡಿಸಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅನ್ನದಾತರ ಹೋರಾಟದ ಪರವಾಗಿ ನಾವಿದ್ದೇವೆ: ಸಿದ್ದರಾಮಯ್ಯ

“ಆರ್‌ಎಸ್ಎಸ್ ನವರು ಎಂದೂ ಮೀಸಲಾತಿ ಪರ ಇಲ್ಲ. ಹಾವನೂರು ಆಯೋಗ, ವೆಂಕಟಸ್ವಾಮಿ ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಮತ್ತು ಮಂಡಲ್ ವರದಿಯನ್ನು ಅವರು ಸ್ವಾಗತ ಮಾಡಿದರೇ? ಎಲ್ಲಾ ಸಂದರ್ಭದಲ್ಲಿಯೂ ವಿರೋಧ ಮಾಡಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿವೆ. ಆರ್‌ಎಸ್‌ಎಸ್ ಸ್ಥಾಪಕರಾದ ಹೆಡಗೆವಾರ್ ಆಗಲಿ, ಎಂ.ಎಸ್ ಗೋಲವಾಲ್ಕಾರ್ ಇಲ್ಲವೇ ಇತರ ಆರ್‌ಎಸ್‌ಎಸ್ ನಾಯಕರು ಎಂದಾದರೂ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಪರ ಹೋರಾಟ ಮಾಡಿದ್ದಾರೆಯೇ?” ಎಂದು ಪ್ರಶ್ನಿಸಿದ್ದಾರೆ.

“ಕುರುಬರ ನಾಯಕ ನಾನೇ ಎಂದು ಈಶ್ವರಪ್ಪ ಹೇಳಿಕೊಳ್ಳಲಿ. ಅದಕ್ಕೆ ನನ್ನ ತಕರಾರು ಇಲ್ಲ. ನಾಯಕ ಯಾರೆಂದು ಜನ ತೀರ್ಮಾನ ಮಾಡುತ್ತಾರೆ, ನಾವೇ ಘೋಷಿಸಿಕೊಳ್ಳುವುದಲ್ಲ. ಕುರುಬರನ್ನು ಎಸ್ಟಿಗೆ ಸೇರಿಸುವ ಮೊದಲು ಎಸ್ಟಿ ಮೀಸಲಾತಿಯನ್ನು ಶೇ. 3ರಿಂದ ಕನಿಷ್ಠ ಶೇ. 20ಕ್ಕೆ ಹೆಚ್ಚಿಸಬೇಕು. ಅದಕ್ಕೂ ಹೋರಾಟ ಮಾಡಬೇಕಿದೆ. ವಾಲ್ಮೀಕಿ ಸಮುದಾಯದವರು ಮೀಸಲಾತಿಯನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ಹೋರಾಟ ಮಾಡುತ್ತಿದ್ದಾರೆ. ಮೀಸಲು ಪ್ರಮಾಣ ಶೇ. 3ರಷ್ಟೇ ಇದ್ದರೆ ಕುರುಬ ಸಮುದಾಯವನ್ನು ಎಸ್‌ಟಿ ಗೆ ಸೇರಿಸಿದರೆ ಏನು ಲಾಭ?” ಎಂದು ಅವರು ಕೇಳಿದ್ದಾರೆ.

“ಕುರುಬ ಸಮುದಾಯದ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇದ್ದರೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿ ಆಧಾರಿತ ವರದಿಯನ್ನು ರಾಜ್ಯ ಬಿಜೆಪಿ ಸರ್ಕಾರ ಒಪ್ಪಿಕೊಳ್ಳಲಿ. ಕುರುಬರ ಬಗ್ಗೆ ಈಶ್ವರಪ್ಪ ಅವರಿಗೆ ಇದ್ದಕ್ಕಿದ್ದಂತೆ ಕಾಳಜಿ ಬಂದಿದೆ. ಕಾಗಿನೆಲೆ ಮಠ ಸ್ಥಾಪನೆ ಸಂದರ್ಭದಲ್ಲಿ ಈಶ್ವರಪ್ಪ ಅವರು ಎಲ್ಲಿದ್ದರು. ಆಗ ಅವರು ಪತ್ತೆಯೇ ಇರಲಿಲ್ಲ. ಈಗ ಸ್ವಾಮೀಜಿಗಳನ್ನು ಕರೆದುಕೊಂಡು ಹೋರಾಟ ನಡೆಸುತ್ತಿದ್ದಾರೆ. ಮಠದ ಉದ್ಘಾಟನಾ ಸಭೆಗೂ ಅವರು ಆಗ ಬಂದಿರಲಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರ ದಿವಾಳಿಯಾಗಿದೆ, ವೃದ್ಧಾಪ್ಯ ವೇತನ ನೀಡಲು ಕೂಡಾ ಹಣವಿಲ್ಲ: ಸಿದ್ದರಾಮಯ್ಯ

“ಉಡುಪಿಯ ಕನಕ ಗೋಪುರ ಕೆಡವಿದಾಗ ಈಶ್ವರಪ್ಪ ಎಲ್ಲಿ ಹೋಗಿದ್ದರು? ಯಾವ ಮೀಸಲಾತಿ ಪರ ಅವರು ಹೋರಾಟ ಮಾಡಿದ್ದಾರೆ? ರಾಜ್ಯ ಸಭಾ ಸದಸ್ಯರಾಗಿದ್ದ ರಾಮಾ ಜೋಯಿಸರು ಹಿಂದುಳಿದ ವರ್ಗದವರ ಮೀಸಲು ವಿರೋಧಿಸಿದಾಗ ಎಲ್ಲಿದ್ದರು. ಬಿಜೆಪಿಯಲ್ಲಿ ಆಗ ಈಶ್ವರಪ್ಪ ಇದ್ದರಲ್ಲವೇ? ಏಕೆ ವಿರೋಧ ಮಾಡಲಿಲ್ಲ ಈಗ ಇದ್ದಕ್ಕಿಂದ್ದರೆ ಈಶ್ವರಪ್ಪ ಅವರಿಗೆ ಕುರುಬರ ಮೇಲೆ ಪ್ರೀತಿ ಬಂದಿದೆ. ಅವರು ಹೋರಾಟ ಮಾಡಲಿ. ಬೇಡ ಎನ್ನುವುದಿಲ್ಲ. ಮೊದಲು ಬೀದರ್, ಕಲಬರಗಿ, ಯಾದಗಿರಿಯ ಗೊಂಡ, ರಾಜಗೊಂಡ ಸಮುದಾಯವನ್ನು ಎಸ್ಟಿಗೆ ಸೇರಿಸುವ ಕುರಿತು ಆದೇಶ ಜಾರಿ ಮಾಡಿಸಲಿ” ಎಂದು ಆಗ್ರಹಿಸಿದ್ದಾರೆ.

“ಈಶ್ವರಪ್ಪ ಅವರು ಎಂದೂ ಮೀಸಲಾತಿ ಪರ ಹೋರಾಟ ಮಾಡಿದವರಲ್ಲ. ಸದನದಲ್ಲಿಯೂ ಧ್ವನಿ ಎತ್ತಿದವರಲ್ಲ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಈಶ್ವರಪ್ಪ ಅವರು ಎಲ್ಲಿ ಬಿಟ್ಟರು? ಹೀಗೆ ಸ್ವಾರ್ಥಕ್ಕಾಗಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಕುರುಬ ಸಮುದಾಯವನ್ನು ಒಡೆಯಲು ಆರ್‌ಎಸ್ಎಸ್ ನವರು ಈಶ್ವರಪ್ಪ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಆರ್‌ಎಸ್‌ಎಸ್ ಕೈವಾಡದ ಬಗ್ಗೆ ನನಗೆ ಗೊತ್ತಿರಲಿಲ್ಲ. ಈಶ್ವರಪ್ಪ ಅವರೇ ಹೇಳಿದ ಮೇಲೆ ನನಗೂ ತಿಳಿದದ್ದು. ಈಶ್ವರಪ್ಪ ಅವರು ಸ್ವಂತ ಬುದ್ಧಿಯಿಂದ ಹೋರಾಟ ಶುರು ಮಾಡಿದ್ದಲ್ಲ, ಆರ್‌ಎಸ್‌ಎಸ್, ಬಿಜೆಪಿಯವರ ಹುನ್ನಾರವಿದೆ” ಎಂದು ಎಂದ ಅವರು ತಿಳಿಸಿದ್ದಾರೆ.

ಗೋಹತ್ಯೆ ನಿಷೇಧ ಬಿಜೆಪಿ ಆಡಳಿತದ ಗೋವಾದಲ್ಲಿ ಯಾಕಿಲ್ಲ?

“ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಜಾರಿಗೊಳಿಸಿಲ್ಲ? ಕರ್ನಾಟಕದಲ್ಲಿಯೇ ಏಕೆ? ಕಾಯ್ದೆ ಜಾರಿಯಾದರೆ ತಾವು ಕಷ್ಟ ನಷ್ಟಕ್ಕೆ ಈಡಾಗುತ್ತೇವೆ ಎಂಬ ಭಯದಿಂದ ಮುಸ್ಲಿಂ ಸಮುದಾಯದ ಮುಖಂಡರು ನನ್ನ ಬಳಿಗೆ ಬಂದಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಲ್ಲಿ ನಾವು ವಿರೋಧಿಸಲಿದ್ದೇವೆ. ಉತ್ತರ ಪ್ರದೇಶದಲ್ಲಿ ಜಾರಿಯಿರುವ ಲವ್ ಜಿಹಾದ್ ತಡೆ ಕಾನೂನು ಅಸಂವಿಧಾನಿಕ. ನಿಗದಿತ ವಯೋಮಾನಕ್ಕೆ ಮೇಲ್ಪಟ್ಟ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾಗುವ ವ್ಯಕ್ತಿಯನ್ನು ಮಧುವೆಯಾಗುವ ಸ್ವಾತಂತ್ರ್ಯ ಇದೆ. ಯಾವುದೇ ಒಂದು ಜಾತಿ ಇಂತಹುದೇ ಜಾತಿ – ಧರ್ಮದ ಹುಡುಗ ಅಥವಾ ಹುಡುಗಿಯನ್ನು ವಿವಾಹವಾಗಬೇಕೆಂಬ ಕಾನೂನು ನಮ್ಮ ಸಂವಿಧಾನದಲ್ಲಿ ಇಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ನ ಒಳ ಒಪ್ಪಂದದಿಂದ ಉಪಚುನಾವಣೆಯನ್ನು ಗೆಲ್ಲಲಾಗಿದೆ: ಸಿದ್ದರಾಮಯ್ಯ

“ಲವ್ ಜಿಹಾದ್ ನಿಷೇಧದಂತಹ ಕಾನೂನು ಜಾರಿಗೊಳಿಸಲು ಸಂವಿಧಾನ ಅವಕಾಶ ನೀಡಲ್ಲ, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ಕಾಯ್ದೆ ವಜಾಗೊಳ್ಳಲಿದೆ. ಇಂತಹಾ ಕಾಯ್ದೆಗಳಿಗೆ ಅವಕಾಶವಿಲ್ಲ ಎಂದು ಅಲಹಾಬಾದ್ ಹಾಗೂ ಕರ್ನಾಟಕದ ಉಚ್ಚ ನ್ಯಾಯಾಲಯಗಳು ಹೇಳಿವೆ. ಹಾಗಾಗಿ ಕಾಯ್ದೆ ಜಾರಿ ಅಸಾಧ್ಯ” ಎಂದು ಅವರು ತಿಳಿಸಿದ್ದಾರೆ.

“ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯೂ ಸೇರಿದಂತೆ ಬಿಜೆಪಿ ಹಾಗೂ ಆರ್.ಎಸ್.ಎಸ್ ನಾಯಕರು ನಮ್ಮಲ್ಲಿರುವ ಮಾನವೀಯತೆಯನ್ನು ನೋಡಿ ಕಲಿಯಬೇಕು. ಡಿ.ಕೆ ಶಿವಕುಮಾರ್ ಅವರಿಗೆ ನೀವು ಕಿವಿಮಾತು ಹೇಳುವುದೇನೋ ಸರಿ, ಆದರೆ ಅವರು ಯಾವಾಗ ಮಾನವೀಯತೆ, ಮನುಷ್ಯತ್ವವನ್ನು ಕಲಿಯುವುದು? ನಾನೂ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಬಿಜೆಪಿಯ ಯಾವ ನಾಯಕರು ಈ ಕೆಲಸ ಮಾಡಿದ್ದಾರೆ? ಪಶು ಸಾಕಾಣಿಕೆ ಬಗ್ಗೆ ಅವರಿಗೇನು ಗೊತ್ತಿದೆ? ಹಸು- ಎತ್ತುಗಳಿಗೆ ವಯಸ್ಸಾದ ಮೇಲೆ ಅವನ್ನು ರೈತರು ಏನು ಮಾಡಬೇಕು? ಬಿಜೆಪಿಯವರ ಮನೆ ಬಾಗಿಲಿಗೆ ಕೊಂಡುಹೋಗಿ ಬಿಟ್ಟು ಬರಬೇಕೇ?” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿದ್ದಾರೆ.

ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...