Homeಕರೋನಾ ತಲ್ಲಣಮಾಸ್ಕ್ ಧರಿಸದಿದ್ದವರು ಕೊರೊನಾ ಕೇಂದ್ರಗಳಲ್ಲಿ ಸೇವೆ ಸಲ್ಲಿಸಲಿ- ಗುಜರಾತ್ ಹೈಕೋರ್ಟ್

ಮಾಸ್ಕ್ ಧರಿಸದಿದ್ದವರು ಕೊರೊನಾ ಕೇಂದ್ರಗಳಲ್ಲಿ ಸೇವೆ ಸಲ್ಲಿಸಲಿ- ಗುಜರಾತ್ ಹೈಕೋರ್ಟ್

ಮಾಸ್ಕ್​ ಧರಿಸದ್ದಕ್ಕೆ ದಂಡ ಕಟ್ಟುವುದರ ಜೊತೆಗೆ ಕೊರೊನಾ ಆರೈಕೆ ಕೇಂದ್ರಗಳಲ್ಲಿ ಸಮುದಾಯ ಸೇವೆಯನ್ನೂ ಸಲ್ಲಿಸಬೇಕು. 

- Advertisement -
- Advertisement -

ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿ ಸಿಕ್ಕಿಬಿದ್ದವರನ್ನು ಕೊರೊನಾ ವೈರಸ್ ಆರೈಕೆ ಕೇಂದ್ರಗಳಲ್ಲಿ ಸಮುದಾಯ ಸೇವೆ ಮಾಡಲು ಕಡ್ಡಾಯಗೊಳಿಸುವಂತೆ ಗುಜರಾತ್ ಹೈಕೋರ್ಟ್ ಬುಧವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಮಾಸ್ಕ್ ಧರಿಸದೆ ಓಡಾಡುವವರ ದಂಡದ ಮೊತ್ತವನ್ನು ಹೆಚ್ಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಈ ಆದೇಶ ನೀಡಿದೆ. ಮಾಸ್ಕ್​ ಧರಿಸದ್ದಕ್ಕೆ ದಂಡ ಕಟ್ಟುವುದರ ಜೊತೆಗೆ ಸಮುದಾಯ ಸೇವೆಯನ್ನೂ ಸಲ್ಲಿಸಬೇಕು.

ಕೊರೊನಾ ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಯು 5 ರಿಂದ 15 ದಿನಗಳವರೆಗೆ, ದಿನಕ್ಕೆ 4 ರಿಂದ 6 ಗಂಟೆಗಳ ಕಾಲ ಸಮುದಾಯ ಸೇವೆ ಮಾಡಬೇಕಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಜೆ.ಬಿ.ಪಾರ್ಡಿವಾಲಾ ಅವರ ನ್ಯಾಯಪೀಠ ಹೇಳಿದೆ.

ಜೊತೆಗೆ, “ನಿಯಮ ಉಲ್ಲಂಘಿಸಿದವರಿಗೆ ನೀಡಲಾಗುವ ಕೆಲಸಗಳು, ವೈದ್ಯಕೀಯೇತರ ಸ್ಪರೂಪದ್ದಾಗಿರಬೇಕು. ಸ್ವಚ್ಛತಾ ಕಾರ್ಯ, ಮನೆಗೆಲಸ, ಅಡುಗೆ ಮಾಡುವುದು ಮತ್ತು ಬಡಿಸಲು ಸಹಾಯ ಮಾಡುವುದು, ದಾಖಲೆ ತಯಾರಿಕೆ, ದತ್ತಾಂಶ ಸಂಗ್ರಹಣೆ ಇತ್ಯಾದಿಗಳನ್ನು ನೀಡಬೇಕು” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು

ಕೊರೊನಾ ಸಂಬಂಧಿತ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ದಂಡ ವಿಧಿಸುವುದನ್ನು ಮುಂದುವರಿಸಲಾಗುವುದು ಎಂದಿರುವ ನ್ಯಾಯಪೀಠ, ಸಮುದಾಯ ಕೇಂದ್ರಗಳಲ್ಲಿ ಸೇವೆಯನ್ನು ಶಿಕ್ಷೆಯಾಗಿ ವಿಧಿಸುವ ನೀತಿಯನ್ನು ತರಲು ಗುಜರಾತ್ ಸರ್ಕಾರಕ್ಕೆ ಆದೇಶಿಸಿದೆ.

ಪ್ರಸ್ತಾವನೆಯನ್ನು ಕಾರ್ಯಗತಗೊಳಿಸಲು ಸರ್ಕಾರ ಬಯಸಿದೆ ಆದರೆ ಅದನ್ನು ಜಾರಿಗೊಳಿಸುವುದು ಒಂದು ಸವಾಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು.

ದೇಶದಲ್ಲಿ ಗುಜರಾತ್ ಅತಿಹೆಚ್ಚು ಕೊರೊನಾ ಪೀಡಿತ ರಾಜ್ಯಗಳಲ್ಲಿ ಒಂದಾಗಿದೆ. ಇದು ಈವರೆಗೆ 2 ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಕಳೆದ ತಿಂಗಳು ಸೋಂಕು ಹೆಚ್ಚಳದ ಮಧ್ಯೆ, ಗುಜರಾತ್ ಅಹಮದಾಬಾದ್‌ನಲ್ಲಿ ರಾತ್ರಿ ಕರ್ಫ್ಯೂ ಹಾಕಲಾಗಿತ್ತು. ರಾಜ್‌ಕೋಟ್, ಸೂರತ್ ಮತ್ತು ವಡೋದರಾದಲ್ಲೂ ಇದೇ ರೀತಿಯ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ.

ನಿನ್ನೆಯಷ್ಟೇ ’ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ’ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ. ಆದರೆ ನವೆಂಬರ್ 24 ರಂದು ರಾಜ್ಯಗಳನ್ನುದ್ದೇಶಿಸಿ ಮಾತನಾಡಿದ ದೇಶದ ಪ್ರಧಾನಿ, ದೇಶದ ಪ್ರತಿಯೊಬ್ಬ ಪ್ರಜೆಗೆ ವ್ಯಾಕ್ಸೀನ್ ತಲುಪಲಿದೆ. ಅದಕ್ಕಾಗಿ ಎಲ್ಲಾ ವ್ಯವಸ್ಥೆ ನಡೆದಿದೆ ಎಂದು ಭರವಸೆ ನೀಡಿದ್ದರು.


ಇದನ್ನೂ ಓದಿ: ಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...