Homeಅಂತರಾಷ್ಟ್ರೀಯಹಾಂಕಾಂಗ್‌‌ನ ಪ್ರಜಾಪ್ರಭುತ್ವ ಹೋರಾಟಗಾರನಿಗೆ 13.5 ತಿಂಗಳು ಶಿಕ್ಷೆ ಘೋಷಣೆ

ಹಾಂಕಾಂಗ್‌‌ನ ಪ್ರಜಾಪ್ರಭುತ್ವ ಹೋರಾಟಗಾರನಿಗೆ 13.5 ತಿಂಗಳು ಶಿಕ್ಷೆ ಘೋಷಣೆ

- Advertisement -
- Advertisement -

2019 ರಲ್ಲಿ ಕಾನೂನು ಬಾಹಿರ ಸರ್ಕಾರಿ ವಿರೋಧಿ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದಾರೆಂದು ಆರೋಪಿಸಿ ಹಾಂಕಾಂಗ್‌ನ ಪ್ರಮುಖ ಪ್ರಜಾಪ್ರಭುತ್ವ ಹೋರಾಟಗಾರರಲ್ಲಿ ಒಬ್ಬರಾದ 24 ವರ್ಷದ ಜೋಶುವಾ ವಾಂಗ್ ಅವರಿಗೆ 13.5 ತಿಂಗಳು ಜೈಲು ಶಿಕ್ಷೆ ಘೋಷಿಸಲಾಗಿದೆ. ಈ ವರ್ಷದಲ್ಲಿ ಪ್ರತಿಪಕ್ಷದ ವ್ಯಕ್ತಿಯೊಬ್ಬರಿಗೆ ನೀಡುತ್ತಿರುವ ಅತ್ಯಂತ ಕಠಿಣ ಶಿಕ್ಷೆ ಇದಾಗಿದೆ.

ಕಳೆದ ವರ್ಷದ ಜೂನ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿದ್ದಾಗ ನಗರದ ಪೊಲೀಸ್ ಪ್ರಧಾನ ಕಚೇರಿಯ ಬಳಿ ಕಾನೂನುಬಾಹಿರ ಸಭೆಯನ್ನು ಆಯೋಜಿಸಿ ಪ್ರಚೋದಿಸಿದ್ದಾಗಿ ವಾಂಗ್ ತಪ್ಪೊಪ್ಪಿಕೊಂಡಿದ್ದರು ಎನ್ನಲಾಗಿದ್ದು, ಅದಕ್ಕಾಗಿ ಅವರಿಗೆ ಮೂರು ವರ್ಷಗಳ ಶಿಕ್ಷೆ ಘೋಷಣೆಯಾಗಿದೆ.

ಇದನ್ನೂ ಓದಿ: ’ಪ್ರಜಾಪ್ರಭುತ್ವ ಪ್ರಶ್ನಿಸುವ ಹಕ್ಕು ನೀಡಿದೆ’: ಭೋಜ್‌ಪುರಿ ಗಾಯಕಿ ಹಾಡುಗಳು ವೈರಲ್

ಸುಮಾರು 100 ಬೆಂಬಲಿಗರು ಶಿಕ್ಷೆ ಘೋಷಣೆಯ ಮುಂಚೆಯೇ ನ್ಯಾಯಾಲಯದೊಳಗೆ ಜಮಾಯಿಸಿದ್ದರಾದರೂ, ಚೀನಾ ಪರ ಒಂದು ಸಣ್ಣ ಗುಂಪು ಹೊರಗೆ ಒಟ್ಟುಗೂಡಿ, ಜೋಶುವಾಗೆ ಭಾರಿ ಜೈಲು ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

ಜೋಶುವಾ ತಮ್ಮ ವಕೀಲರ ಮೂಲಕ ನೀಡಿದ ಹೇಳಿಕೆಯಲ್ಲಿ, “ಇದು ಹೋರಾಟದ ಅಂತ್ಯವಲ್ಲ, ನಮ್ಮ ಮುಂದೆ ಮತ್ತೊಂದು ಸವಾಲಿನ ಯುದ್ಧ ಭೂಮಿಯಿದೆ. ನಾವು ಈಗ ಅನೇಕ ಧೈರ್ಯಶಾಲಿ ಪ್ರತಿಭಟನಾಕಾರರೊಂದಿಗೆ ಜೈಲಿನೊಳಗೆ ಯುದ್ಧಕ್ಕೆ ಜೊತೆಯಾಗುತ್ತಿದ್ದೇವೆ. ಪ್ರಜಾಪ್ರಭುತ್ವ ಮತ್ತು ಹಾಂಕಾಂಗ್‌‌ನ ಸ್ವಾತಂತ್ರ್ಯದ ಈ ಹೋರಾಟ ಹೆಚ್ಚು ಗೋಚರಿಸದಿದ್ದರೂ, ಅತ್ಯಗತ್ಯವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಮ್ಮ ಪ್ರಜಾಪ್ರಭುತ್ವ ದೇಶ ಹಳ್ಳ ಹಿಡಿಯ ಹೊರಟಿರುವುದು ನಮ್ಮ ಜನರಿಗೆ ಗೋಚರಿಸುತ್ತಿಲ್ಲವೆ?

ಜೋಶುವಾ ಅವರ ದೀರ್ಘಕಾಲದ ಸಹೋದ್ಯೋಗಿಗಳಾದ ಆಗ್ನೆಸ್ ಚೌ(23) ಮತ್ತು ಇವಾನ್ ಲ್ಯಾಮ್(26) ಕ್ರಮವಾಗಿ ಒಟ್ಟು 10 ಮತ್ತು 7 ತಿಂಗಳುಗಳ ಕಾಲ ಜೈಲುವಾಸ ಅನುಭವಿಸಿದ್ದರು.

ಇದನ್ನೂ ಓದಿ: ಪ್ರಜಾಪ್ರಭುತ್ವ ಏರಬಹುದಾದ ಎತ್ತರ ತೋರಿಸಿಕೊಟ್ಟ ನ್ಯೂಜಿಲ್ಯಾಂಡ್ ಪ್ರಧಾನಿ ’ಜಸಿಂಡಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...