Homeಮುಖಪುಟಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಪ್ರಬಲ ಸ್ಥಳ ನಾಗ್ಪುರದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ. ಅಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳು ಮುನ್ನಡೆ ಸಾಧಿಸಿವೆ.

- Advertisement -
- Advertisement -

ಕಳೆದ ವರ್ಷ ಶಿವಸೇನೆಯೊಂದಿಗಿನ ಗುದ್ದಾಟದಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿಗೆ ಮತ್ತೊಮ್ಮೆ ಮುಖಭಂಗವಾಗಿದೆ. ಮಹಾರಾಷ್ಟ್ರದ ವಿಧಾನಪರಿಷತ್ತಿನ ಶಿಕ್ಷಕ- ಪದವೀಧರ ಕ್ಷೇತ್ರದ 6 ಸ್ಥಾನಗಳಲ್ಲಿ ಆಡಳಿತರೂಢ ಮಹಾವಿಕಾಸ್ ಅಘಾಡಿ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ ಬಿಜೆಪಿ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಒಂದು ಸ್ಥಾನದಲ್ಲಿ ಸ್ವತಂತ್ರ ಅಭ್ಯರ್ಥಿ ಜಯಗಳಿಸಿದ್ದಾರೆ.

ಬಿಜೆಪಿಯು 4 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಶಿವಸೇನೆಯು ಒಂದು ಸ್ಥಾನದಲ್ಲಿ ಸ್ಪರ್ಧಿಸಿ ಹಿನ್ನಡೆ ಸಾಧಿಸಿದರೆ ಅದರ ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ತಲಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಎರಡರಲ್ಲಿಯೂ ಮುನ್ನಡೆ ಸಾಧಿಸಿವೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಪ್ರಬಲ ಸ್ಥಳ ನಾಗ್ಪುರದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ. ಅಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳು ಮುನ್ನಡೆ ಸಾಧಿಸಿವೆ.


ಇದನ್ನೂ ಓದಿ: ಹೈದರಾಬಾದ್ ಪಾಲಿಕೆ ಚುನಾವಣೆ: 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

0
ಜಾರಿ ನಿರ್ದೇಶನಾಲಯವು (ಇಡಿ) ಕಾನೂನಿನ ಚೌಕಟ್ಟಿಗೆ ಒಳಪಟ್ಟಿದೆ ಮತ್ತು ಸಾಮಾನ್ಯ ನಾಗರಿಕರ ವಿರುದ್ಧ ಬಲಪ್ರದರ್ಶನ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಹೇಳಿದ್ದು, ನೀವು ಕಾನೂನಿಗಿಂತ ಮೇಲಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಮಧ್ಯಂತರ...