ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್’ (GHMC) ಚುನಾವಣೆ ಫಲಿತಾಂಶ ಇನ್ನೆನು ಹೊರ ಬೀಳಲಿದೆ. ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (TRS), ಬಿಜೆಪಿ ಮತ್ತು ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ನಡುವೆ ತ್ರಿಕೋನ ಸ್ಪರ್ಧೆ ನಡೆಯತ್ತಿದೆ.
ತೆಲುಗು ಪತ್ರಿಕೆ ಸಾಕ್ಷಿ ವರದಿ ಪ್ರಕಾರ ಇಲ್ಲಿಯವರೆಗೆ, ಆಡಳಿತರೂಢ ಟಿಆರ್‌ಎಸ್ 33 ವಾರ್ಡ್‌ಗಳಲ್ಲಿ ಗೆಲುವು ಮತ್ತು 28 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಎಐಎಂಐಎಂ 30 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದು, 9 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 22 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿ, 21 ವಾರ್ಡ್‌ಗಳಲ್ಲಿ ಮುನ್ನಡೆ ದಾಖಲಿಸಿದೆ. ಕಾಂಗ್ರೆಸ್ 2 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ.
150 ವಾರ್ಡ್‌ಗಳ ಹೈದರಾಬಾದ್ ಪಾಲಿಕೆ ಚುನಾವಣೆಗೆ ಡಿ.1ರಂದು ಮತದಾನ ನಡೆದಿತ್ತು. ಇಂದು ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾದ್ದು, ಕೆಲವು ಹೊತ್ತಲ್ಲೇ ಫಲಿತಾಂಶ ಪ್ರಕಟವಾಗಲಿದೆ.
ಈ ಬಾರಿ ಹೈದರಾಬಾದ್ ಪಾಲಿಕೆ ಚುನಾವಣೆ ದೇಶಾದ್ಯಂತ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು. ಪಾಲಿಕೆ ಚುನಾವಣೆ ಪ್ರಚಾರಕ್ಕೆ ಬಿಜೆಪಿಯ ಘಟಾನುಘಟಿ ನಾಯಕರೇ ಕಣಕ್ಕಿಳಿದಿದ್ದರು. ಗೃಹ ಸಚಿವ ಅಮಿತ್ ಶಾ ಕೂಡ ಕಣಕ್ಕೆ ಇಳಿದಿದ್ದರು. ಸದ್ಯ ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಇದನ್ನೂ ಓದಿ: ಕೃಷಿ ಕಾಯ್ದೆಗಳ ತಿದ್ದುಪಡಿಗೆ ಕೇಂದ್ರದ ಒಪ್ಪಿಗೆ: ಹಿಂತೆಗೆದುಕೊಳ್ಳಬೇಕೆಂದು ಪಟ್ಟು ಹಿಡಿದ ರೈತರು!
They did not mention anything about what the Centre has done for the development of Hyderabad. The TRS will form the government in the Greater Hyderabad Municipal Corporation (GHMC) elections this time by 100%: Telangana Minister Talasani Srinivas Yadav https://t.co/GZ5qKsX77m
— ANI (@ANI) December 4, 2020
ಎಎನ್‌ಐ ಜೊತೆಗೆ ಮಾತನಾಡಿರುವ ತೆಲಂಗಾಣ ಸಚಿವ ತಲಸಾನಿ ಶ್ರೀನಿವಾಸ್ ಯಾದವ್, ದೇಶದಲ್ಲಿ ರೈತರ ಪ್ರತಿಭಟನೆ ಸೇರಿದಂತೆ ಹಲವು ಸಮಸ್ಯೆಗಳು ಇರುವಾಗ, ಕೇಂದ್ರ ನಾಯಕರು ಸ್ಥಳೀಯ ಚುನಾವಣೆ ಪ್ರಚಾರಕ್ಕೆ ಬಂದದ್ದು ಯಾಕೆ ಎಂದು ತಿಳಿಯುತ್ತಿಲ್ಲ ಎಂದಿದ್ದಾರೆ.
’ಕೇಂದ್ರ ಸರ್ಕಾರ ಹೈದರಾಬಾದ್ ಅಭಿವೃದ್ಧಿಗೆ ಏನು ಮಾಡಿದೆ ಎಂಬುದರ ಬಗ್ಗೆ ಅವರು ಚುನಾವಣಾ ಪ್ರಚಾರದಲ್ಲಿ ಏನನ್ನೂ ಉಲ್ಲೇಖಿಸಲಿಲ್ಲ. ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯಲ್ಲಿ ಟಿಆರ್‌ಎಸ್ ಈ ಬಾರಿ 100% ರಷ್ಟು ಸರ್ಕಾರ ರಚಿಸಲಿದೆ’ ಎಂದಿದ್ದಾರೆ.


