Homeಮುಖಪುಟಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು

ಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು

ಹಾಗಾಗಿ ಮಂಗಳವಾರ ಭಾರತ್ ಬಂದ್ ನಡೆಸಲಿದ್ದೇವೆ. ದೆಹಲಿಯ ಪ್ರತಿ ರಸ್ತೆಗಳನ್ನು, ಪ್ರತಿ ಟೋಲ್‌ಗಳನ್ನು ಬಂದ್ ಮಾಡುತ್ತೇವೆ ಎಂದು ಎಂದು ರೈತರು ಗುಡುಗಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಬೇಕೆಂದು ದೆಹಲಿಯಲ್ಲಿ ಕಳೆದ 9 ದಿನಗಳಿಂದ ಹೋರಾಡುತ್ತಿರುವ ರೈತರು ಇನ್ನು ಮುಂದೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತೀರ್ಮಾನಿಸಿ ಹೋರಾಟವನ್ನು ತೀವ್ರಗೊಳಿಸಲು ಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ್ದಾರೆ.

ಸರ್ಕಾರದ ಜೊತೆ ಮಾತುಕತೆಯಿಂದ ಪ್ರಯೋಜನವಿಲ್ಲ. ಅವರು ಕಾಯ್ದೆಗಳನ್ನು ವಾಪಸ್ ಪಡೆಯಲು ಮುಂದಾಗುತ್ತಿಲ್ಲ. ಹಾಗಾಗಿ ಹೋರಾಟ ತೀವ್ರಗೊಳಿಸುವುದು ಅನಿವಾರ್ಯ. ಹಾಗಾಗಿ ಮಂಗಳವಾರ ಭಾರತ್ ಬಂದ್ ನಡೆಸಲಿದ್ದೇವೆ. ದೆಹಲಿಯ ಪ್ರತಿ ರಸ್ತೆಗಳನ್ನು, ಪ್ರತಿ ಟೋಲ್‌ಗಳನ್ನು ಬಂದ್ ಮಾಡುತ್ತೇವೆ ಎಂದು ರೈತರು ಘೋಷಿಸಿದ್ದಾರೆ.

ಮಂಗಳವಾರದಂದು ಇಡೀ ದೇಶದ್ಯಾಂತ ಬಂದ್ ಬಂದ್ ಆಚರಿಸಲು ತೀರ್ಮಾನಿಸಿದ್ದೇವೆ. ಈ ಮೂರು ಕರಾಳ ಕಾಯ್ದೆಗಳು ವಾಪಸ್ ಆಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ರೈತರು ಗುಡುಗಿದ್ದಾರೆ.

ಲಾಠೀ ಏಟು, ಜಲಫಿರಂಗಿ ಮತ್ತು ಅಶ್ರವಾಯುಗಳನ್ನು ಸಿಡಿಸಿ ರೈತರನ್ನು ಬಗ್ಗುಬಡಿಯಲು ಯತ್ನಿಸಿದ ಸರ್ಕಾರ ಕಳೆದ ಮೂರು ದಿನಗಳಿಂದ ಅವರೊಂದಿಗೆ ಮಾತುಕತೆ ನಡೆಸಲು ಮುಂದಾಗಿತ್ತು. ಆದರೆ ರೈತರು ಕೇಂದ್ರದ ವಾದಗಳನ್ನು ಒಪ್ಪದೆ, 3 ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಪಟ್ಟು ಹಿಡಿದು ಹೋರಾಟ ಮುಂದುವರೆಸಿದಾಗ ಅವರ ಮೇಲೆ ಸಾಂಕ್ರಾಮಿಕ ಕಾಯ್ದೆ ಉಲ್ಲಂಘನೆಯ ಆರೋಪಗಳನ್ನು ಹೊರಿಸಿದೆ. ದೆಹಲಿ ಪೊಲೀಸರು ಈ ಕುರಿತು ರೈತ ಹೋರಾಟಗಾರರಿಗೆ ನೋಟಿಸ್ ನೀಡಿದ್ದಾರೆ.

ಎಂಎಸ್‌ಪಿ ಕೊಡುತ್ತೇವೆ ಎಂಬ ಸರ್ಕಾರದ ಮಾತನ್ನು ನಾವು ನಂಬುವುದಿಲ್ಲ. ಸ್ವಾಮಿನಾಥನ್ ಆಯೋಗದ ವರದಿಯಂತೆ ರೈತ ಬೆಳೆದ ಬೆಳಗೆ ಖರ್ಚು ಸೇರಿ ಒಂದೂವರೆ ಪಟ್ಟು ಬೆಲೆ ನಿಗದಿ ಮಾಡಬೇಕು. ಇದಕ್ಕಾಗಿ ಕಾನೂನು ತರಬೇಕೆಂದು ಆಗ್ರಹಿಸಿದ್ದಾರೆ. ಅದೇ ಸಮಯದಲ್ಲಿ ನೀತಿ ಆಯೋಗವು ಕಾರ್ಪೊರೇಟ್‌ಗಳ ಪರವಾಗಿ ಬ್ಯಾಟಿಂಗ್ ಮಾಡುತ್ತಾ ಕೃಷಿ ಕಾಯ್ದೆಗಳನ್ನು ಸಮರ್ಥಿಸುವುದನ್ನು ಎಐಕೆಎಸ್‌ಸಿಸಿ ಖಂಡಿಸಿದೆ.


ಇದನ್ನೂ ಓದಿ: ಔಷಧಿ ಪೂರೈಕೆಗೆ ತಡೆ, ಸಾಂಕ್ರಾಮಿಕ ಕಾಯ್ದೆ ಉಲ್ಲಂಘನೆ ಆರೋಪ: ಹೋರಾಟನಿರತ ರೈತರ ಮೇಲೆ ಸುಪ್ರೀಂನಲ್ಲಿ PIL

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...