Homeಮುಖಪುಟಕನ್ನಡದಲ್ಲಿ ಕಲಿಸಿದ ಶಿಕ್ಷಕ ರಂಜಿತ್‌ಸಿಂಹ ದಿಸಾಳೆಗೆ 'ಗ್ಲೋಬಲ್‌ ಟೀಚರ್‌ ಪ್ರೈಜ್‌- 2020'

ಕನ್ನಡದಲ್ಲಿ ಕಲಿಸಿದ ಶಿಕ್ಷಕ ರಂಜಿತ್‌ಸಿಂಹ ದಿಸಾಳೆಗೆ ‘ಗ್ಲೋಬಲ್‌ ಟೀಚರ್‌ ಪ್ರೈಜ್‌- 2020’

ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ತಾವೇ ಕನ್ನಡ ಭಾಷೆಯನ್ನು ಕಲಿತು ಪಠ್ಯ ಪುಸ್ತಕಗಳನ್ನು ಮರುವಿನ್ಯಾಸ ಮಾಡಿದ್ದರು

- Advertisement -
- Advertisement -

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪರಿತೇವಾಡಿಯ ಸರ್ಕಾರಿ ಶಾಲಾ ಶಿಕ್ಷಕ ರಂಜಿತ್‌ಸಿಂಹ ದಿಸಾಳೆ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪ್ರತಿಷ್ಠಿತ ‘ಗ್ಲೋಬಲ್‌ ಟೀಚರ್‌ ಪ್ರೈಜ್‌- 2020’ಕ್ಕೆ ಪಾತ್ರರಾಗಿದ್ದಾರೆ. ವಿಶೇಷವೆಂದರೇ 32 ವರ್ಷದ ಶಿಕ್ಷಕ ದಿಸಾಳೆ ಅವರು ಅಲ್ಲಿನ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಪಠ್ಯ ಪುಸ್ತಕವನ್ನು ಮರುವಿನ್ಯಾಸ ಮಾಡಿದ ಖ್ಯಾತಿ ಹೊಂದಿದ್ದಾರೆ.

‘ಗ್ಲೋಬಲ್‌ ಟೀಚರ್‌ ಪ್ರೈಜ್‌- 2020’ನ ಬರೋಬ್ಬರಿ 7.4 ಕೋಟಿ ರೂಪಾಯಿಗಳ (10 ಮಿಲಿಯನ್ ಡಾಲರ್) ಪ್ರಶಸ್ತಿ ಹಣವನ್ನು ಗೆದ್ದುಕೊಂಡಿದ್ದಾರೆ.

ಪ್ರಶಸ್ತಿ ಒಲಿದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಶಿಕ್ಷಕ ರಂಜಿತ್‌ಸಿಂಹ ದಿಸಾಳೆ, ’ಕೊರೊನಾ ಸಾಂಕ್ರಾಮಿಕದಂತಹ ಈ ಕಠಿಣ ಸಮಯದಲ್ಲಿ, ಪ್ರತಿ ವಿದ್ಯಾರ್ಥಿಯು ತಮ್ಮ ಜನ್ಮಸಿದ್ಧ ಹಕ್ಕಾದ ಉತ್ತಮ ಶಿಕ್ಷಣವನ್ನು ಪಡೆಯುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರಿ ಶಾಲಾ ಶಿಕ್ಷಕರು ಅತ್ಯುತ್ತಮ ಪ್ರಯತ್ನವನ್ನು ಮಾಡುತ್ತಿದ್ದಾರೆ’ ಎಂದು ದಿಸಾಲೆ ಹೇಳಿದ್ದಾರೆ.

PC: YouTube@GlobalTeacherPrize

‘ಈ ಪ್ರಶಸ್ತಿಯಿಂದಾಗಿ ಸರ್ಕಾರಿ ಶಾಲಾ ವ್ಯವಸ್ಥೆ ಬಗ್ಗೆ ನಮ್ಮ ವಿಶ್ವಾಸ ಹೆಚ್ಚಾಗುತ್ತದೆ. ಸವಾಲುಗಳ ನಡುವೆಯೂ ತಮ್ಮ ವಿದ್ಯಾರ್ಥಿಗಳ ಜೀವನವನ್ನು ಬದಲಾಯಿಸುತ್ತಿರುವ ಶಿಕ್ಷಕರು ಎಂದರೆ ಬದಲಾವಣೆಯ ಹರಿಕಾರರು.  ಶಿಕ್ಷಕರು ಯಾವಾಗಲೂ ವಿಷಯಗಳನ್ನು ಹಂಚಿಕೊಳ್ಳುವುದರಲ್ಲಿ ವಿಶ್ವಾಸವಿಟ್ಟಿರುತ್ತಾರೆ’ ಎಂದು ದಿಸಾಳೆ ಹೇಳಿದ್ದಾರೆ.

ಇದನ್ನೂ ಓದಿ: ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಜಯ- ಬಿಜೆಪಿಗೆ ಮುಖಭಂಗ

ಪ್ರಶಸ್ತಿಗಾಗಿ 140 ದೇಶಗಳ 12 ಸಾವಿರ ಶಿಕ್ಷಕರು ಅರ್ಜಿ ಸಲ್ಲಿಸಿದ್ದರು. ದಿಸಾಳೆ ಪ್ರಶಸ್ತಿ ಮೊತ್ತದ ಅರ್ಧ ಭಾಗವನ್ನು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದ ಉಳಿದ 9 ಮಂದಿಗೆ ಅಭ್ಯರ್ಥಿಗಳಿಗೆ ಹಂಚುವುದಾಗಿ ಆನ್​ಲೈನ್ ವೇದಿಕೆಯಲ್ಲೇ ಹೇಳಿದ್ದಾರೆ.  ಗ್ಲೋಬಲ್‌ ಟೀಚರ್‌ ಪ್ರೈಜ್‌ನ ಇತಿಹಾಸದಲ್ಲಿ ಹೀಗೆ ಪ್ರಶಸ್ತಿ ಮೊತ್ತವನ್ನು ಹಂಚಿಕೊಂಡದ್ದು ದಿಸಾಳೆಯೇ ಮೊದಲು.

ಶಿಕ್ಷಕ ರಂಜಿತ್‌ಸಿಂಹ ದಿಸಾಳೆ ಮೊದಲು ಪಾಠ ಮಾಡಲು ಪ್ರಾರಂಭಿಸಿದ್ದು, ದನಗಳ ಹಟ್ಟಿಯ ಸಮೀಪ ಇದ್ದ ಶಿಥಿಲಾವಸ್ಥೆಗೆ ತೆರಳಿದ್ದ ಶಾಲೆಯೊಂದರಲ್ಲಿ. ಶಾಲೆಗೆ ಬರುತ್ತಿದ್ದವರೆಲ್ಲಾ ಕರ್ನಾಟಕದ ಗಡಿ ಭಾಗದ ಬುಡಕಟ್ಟು ಸಮುದಾಯಗಳಿಗೆ ಸೇರಿದ ಮಕ್ಕಳು. ಅವರಿಗೆ ಕನ್ನಡ ಬಿಟ್ಟು ಮರಾಠಿ ಬರುತ್ತಿರಲಿಲ್ಲ. ಆದರೆ, ಪಠ್ಯಕ್ರಮವು ಮರಾಠಿಯಲ್ಲಿಯೇ ಇತ್ತು.ಇದರಿಂದ ಬುಡಕಟ್ಟು ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದರು.

ಇದನ್ನೂ ಓದಿ: ಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು

ಹೀಗಾಗಿ, ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ತಾವೇ ಕನ್ನಡ ಭಾಷೆಯನ್ನು ಕಲಿತು ಪಠ್ಯ ಪುಸ್ತಕಗಳನ್ನು ಮರುವಿನ್ಯಾಸ ಮಾಡಿದ್ದರು. ಪಠ್ಯ ಪುಸ್ತಕಗಳನ್ನು QR ಕೋಡ್​ಗೆ ಪರಿವರ್ತಿಸಿದರು. ಹಾಡುಗಳು, ವಿಡಿಯೋಗಳನ್ನು QR ಕೋಡ್​ಗೆ ಪರಿವರ್ತಿಸಿ ಮಕ್ಕಳಿಗೆ ಶಿಕ್ಷಣ ನೀಡಿದ್ದರು.

ದಿಸಾಳೆ ಅವರ ಕಾರ್ಯ ಫಲ ನೀಡಿದ್ದು ಶಿಕ್ಷಣದಲ್ಲಿ ಮಾತ್ರವಲ್ಲ, ಗ್ರಾಮದಲ್ಲಿದ್ದ ಬಾಲಕಿಯರ ಬಾಲ್ಯ ವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿಗಳು  ಕಡಿಮೆಯಾಗಿವೆ. ಹೆಣ್ಣು ಮಕ್ಕಳ ಹಾಜರಾತಿ ಹೆಚ್ಚಾಗಿದೆ. ಈ ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಾಲೆ ಎಂಬ ಪ್ರಶಸ್ತಿಯೂ ದಕ್ಕಿದೆ. ಹಳ್ಳಿಯ ಒಬ್ಬ ಯುವತಿ ಪದವೀಧರೆಯಾಗಿದ್ದು,  ರಂಜಿತ್‌ಸಿಂಹ ಇಲ್ಲಿಗೆ ಬರುವ ಮುಂಚೆ ಇದು ಊಹಿಸಲೂ ಸಹ ಆಗದ ವಿಷಯವಾಗಿತ್ತು’ ಎಂದು ಗ್ಲೋಬಲ್‌ ಟೀಚರ್‌ ಪ್ರೈಜ್‌ನ ವೆಬ್‌ಸೈಟ್‌ ಮಾಹಿತಿ ನೀಡಿದೆ.


ಇದನ್ನೂ ಓದಿ: ರೈತರ ಬೇಡಿಕೆ ಈಡೇರದಿದ್ದರೆ ದೇಶಾದ್ಯಂತ ಅಗತ್ಯ ಸರಕುಗಳ ಸಾಗಾಣಿಕೆ ನಿಲ್ಲಿಸುತ್ತೇವೆ: ಸಾಗಾಣಿಕೆದಾರ ಒಕ್ಕೂಟದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...