ಕರಾಳ ಕಾನೂನುಗಳ ವಿರುದ್ದ ಹೋರಾಟ ನಡೆಸುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ದೌರ್ಜನ್ಯ ವಿರೋಧಿಸಿ ’ಐಕ್ಯ ಹೋರಾಟ’ ವೇದಿಕೆಯ ರಾಜ್ಯವ್ಯಾಪಿ ಜನಾಂದೋಲನ ಹಾಗೂ ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಬಳಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಾಳೆಯಿಂದ ಪ್ರಾರಂಭವಾಗುತ್ತದೆ.
ರೈತ-ಕಾರ್ಮಿಕ-ದಲಿತ-ಕನ್ನಡಪರ-ಜನಪರ ಸಂಘಟನೆಗಳ ಐಕ್ಯ ಹೋರಾಟ ವೇದಿಕೆಯು, ನಾಳೆ ನಡೆಯಲಿರುವ ರಾಜ್ಯವ್ಯಾಪಿ ಜನಾಂದೋಲನಕ್ಕೆ ಬೆಂಬಲಿಸುವಂತೆ ಕರೆನೀಡಿದೆ.
ಇದನ್ನೂ ಓದಿ: ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ
Do join in support of farmers
Frm Mon Dec7th onwards
Statewide people's campaign
& In front of GandhiStatue MouryaCircle Bengaluru@aikyahorata of Farmer-Worker-Dalit-Pro Kannada-Pro People organizations#ರೈತಮತ್ತುಕಾರ್ಮಿಕರಜೊತೆಗೆ #WithFarmersAndWorkers #Aikyahorata #ಐಕ್ಯಹೋರಾಟ pic.twitter.com/9kwnoM3DwG— aikyahorata (@aikyahorata) December 5, 2020
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕೆಂದು ದೆಹಲಿಯ ಗಡಿಯಲ್ಲಿ ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಕೇಂದ್ರ ಸರ್ಕಾರ ನಡೆಸಿರುವ ನಾಲ್ಕು ಸುತ್ತಿನ ಮಾತುಕತೆ ಮುರಿದು ಬಿದ್ದಿದ್ದು, ಆಕ್ರೋಶ ಭರಿತ ರೈತರು ಇನ್ನು ಮುಂದೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ತೀರ್ಮಾನಿಸಿದ್ದು ಡಿಸೆಂಬರ್ 8 ರಂದು ಮಂಗಳವಾರ ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ.
ಇದನ್ನೂ ಓದಿ: ಡಿಸೆಂಬರ್ 8 ರ ಮಂಗಳವಾರ ಭಾರತ್ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು


