Homeಚಳವಳಿದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೇಂಡ್‌‌‌‌ನ 36 ಸಂಸದರ ಬೆಂಬಲ

ದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೇಂಡ್‌‌‌‌ನ 36 ಸಂಸದರ ಬೆಂಬಲ

ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ತೀರ್ಮಾನಿಸಿದ್ದು ಡಿಸೆಂಬರ್ 8 ರಂದು ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ್ದಾರೆ.

- Advertisement -
- Advertisement -

ಇಂಗ್ಲೇಂಡ್‌‌ನ‌ ಲೇಬರ್ ಪಕ್ಷದ ತನ್ಮಂಜಿತ್ ಸಿಂಗ್ ಧೇಸಿ ನೇತೃತ್ವದ 36 ಸಂಸದರ ಬಣವು ಭಾರತದಲ್ಲಿ ನಡೆಯುತ್ತಿರುವ ರೈತರ ಆಂದೋಲನವನ್ನು ಬೆಂಬಲಿಸಿದ್ದು, ಇಂಗ್ಲೇಂಡ್‌ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್ ಅವರನ್ನು ಭಾರತದೊಂದಿಗೆ ಚರ್ಚಿಸುವಂತೆ ಪತ್ರ ಬರೆದಿದ್ದಾರೆ.

ಭಾರತದಲ್ಲಿ ಇತ್ತೀಚೆಗೆ ಜಾರಿಗೆ ಬಂದ ಕೃಷಿ ಕಾನೂನುಗಳು ರೈತರು ಮತ್ತು ಕೃಷಿಯನ್ನು ಅವಲಂಬಿಸಿರುವವರನ್ನು ಶೋಷಿಸುತ್ತದೆ ಎಂದಿರುವ ಸಂಸದರ ತಂಡವು, ಕಾನೂನಿನ ವಿರುದ್ಧ ಭಾರತದ ಮೇಲೆ ಒತ್ತಡ ಹೇರಲು ಡೊಮಿನಿಕ್ ರಾಬ್ ಅವರನ್ನು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ’ಐಕ್ಯ ಹೋರಾಟ ವೇದಿಕೆ’ಯಿಂದ ರೈತರ ಮೇಲಿನ ದೌರ್ಜನ್ಯ ವಿರೋಧಿಸಿ ರಾಜ್ಯವ್ಯಾಪಿ ಜನಾಂದೋಲನ ಹಾಗೂ ಅನಿರ್ದಿಷ್ಟಾವಧಿ ಪ್ರತಿಭಟನೆ

ಕಳೆದ ತಿಂಗಳು ಹಲವಾರು ಸಂಸದರು ಮೂರು ಹೊಸ ಕೃಷಿ ಕಾನೂನುಗಳ ಪರಿಣಾಮಗಳ ಬಗ್ಗೆ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ಗೆ ಪತ್ರ ಬರೆದಿದ್ದಾರೆ ಎಂದು ಸಂಸದ ತನ್ಮಂಜಿತ್ ಸಿಂಗ್ ಧೇಸಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ಕಾನೂನು ಭಾರತದ ರಾಜ್ಯಗಳ ಮೇಲೆ ಭಾರಿ ಪರಿಣಾಮ ಬೀರಲಿದೆ. ಅಲ್ಲದೆ ಇದು ಇಂಗ್ಲೇಂಡಿನಲ್ಲಿರುವ ಸಿಖ್‌ ಮತ್ತು ಪಂಜಾಬ್‌ಗೆ ಸಂಬಂಧಿಸಿರುವವರಿಗೆ ನಿರ್ದಿಷ್ಟ ಕಾಳಜಿಯ ವಿಷಯವಾಗಿದೆ” ಎಂದು ಅವರು ಹೇಳಿದ್ದಾರೆ.

“ಪಂಜಾಬಿ ಸಮುದಾಯವು ರಾಜ್ಯದ ಆರ್ಥಿಕ ರಚನೆಯ ಬೆನ್ನೆಲುಬಾಗಿ ವ್ಯಾಪಕವಾಗಿ ಗುರುತಿಸಲ್ಪಟ್ಟಿದ್ದು, ರೈತರ ಕಳವಳಗಳು ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯದಲ್ಲಿ ಪ್ರಬಲ ವಿಷಯವಾಗಿದೆ. ಕಾನೂನಿಂದಾಗಿ ಪಂಜಾಬ್‌ನಲ್ಲಿ ಪರಿಸ್ಥಿತಿ ಹದಗೆಡುತ್ತಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ತುರ್ತಾಗಿ ಚರ್ಚಿಸಬೇಕು” ಎಂದು ಡೊಮಿನಿಕ್ ರಾಬ್ ಅವರೊಂದಿಗೆ ಪತ್ರವು ಒತ್ತಾಯಿಸಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕೆಂದು ದೆಹಲಿಯ ಗಡಿಯಲ್ಲಿ ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಕೇಂದ್ರ ಸರ್ಕಾರ ನಡೆಸಿರುವ ನಾಲ್ಕು ಸುತ್ತಿನ ಮಾತುಕತೆ ಮುರಿದು ಬಿದ್ದಿದ್ದು, ಆಕ್ರೋಶ ಭರಿತ ರೈತರು ಇನ್ನು ಮುಂದೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ತೀರ್ಮಾನಿಸಿದ್ದು ಡಿಸೆಂಬರ್ 8 ರಂದು ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...