Homeಚಳವಳಿಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

ಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

ಬಾಲಿವುಡ್ ನಟಿ ಸ್ವರಾ ಭಾಸ್ಕರ್, ರಿಚಾ ಚಾಡ್ಡಾ, ತಾಪ್ಸಿ ಪನ್ನು, ಮಿಕಾ ಸಿಂಗ್, ವಿಜೇಂದರ್ ಸಿಂಗ್ ಸೇರಿದಂತೆ ಪಂಜಾಬಿ ಚಿತ್ರೋದ್ಯಮ, ಕಂಗನಾ ವಿರುದ್ಧದ ನಿಲುವಿನಲ್ಲಿ ದಿಲ್ಜಿತ್ ದೋಸಂಜ್ ಅವರನ್ನು ಬೆಂಬಲಿಸಿದ್ದರು.

- Advertisement -
- Advertisement -

ದೆಹಲಿಯಲ್ಲಿ ರೈತರ ಪ್ರತಿಭಟನೆ ವಿಷಯವಾಗಿ ನಟಿ ಕಂಗನಾ ರಣಾವತ್ ವಿರುದ್ಧ ಟ್ವಿಟ್ಟರ್‌ ವಾಗ್ವಾದಕ್ಕೆ ಇಳಿದಿದ್ದ ಬಾಲಿವುಡ್​ ಗಾಯಕ-ನಟ ದಿಲ್ಜಿತ್​ ದೋಸಂಜ್ ಚಳಿಯಲ್ಲಿ ನಡುಗುತ್ತಿರುವ ಹೋರಾಟನಿರತ ರೈತರಿಗಾಗಿ ಬರೋಬ್ಬರಿ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ನಿನ್ನೆ ಭಾಗವಹಿಸಿದ್ದ ದಿಲ್ಜಿತ್ ದೋಸಾಂಜ್, ಅನ್ನದಾತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ರೈತರ ಬಗ್ಗೆ ಅವಹಳನಕಾರಿಯಾಗಿ ಮಾತಾಡಿದ್ದ ನಟಿ ಕಂಗನಾ ಜೊತೆಗಿನ ಟ್ವಿಟರ್‌ ಜಗಳದಲ್ಲಿ ರೈತರ ಪರವಹಿಸಿ ಸುದ್ದಿಯಾಗಿದ್ದರು ದಿಲ್ಜಿತ್ ದೋಸಂಜ್.

ಕೊರೆಯುವ ಚಳಿಯಲ್ಲೂ ಕೇಂದ್ರ ಸರ್ಕಾರದ ದೌರ್ಜನ್ಯಗಳಿಗೆ ಜಗ್ಗದೆ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಸ್ಪೆಟರ್, ಜ್ಯಾಕೆಟ್, ಹೊದಿಕೆ​ ಸೇರಿದಂತೆ ಬೆಚ್ಚಗಿನ ಬಟ್ಟೆಗಳನ್ನು ಕೊಳ್ಳಲು ದಿಲ್ಜಿತ್ ದೋಸಂಜ್ ಒಂದು ಕೋಟಿ ದೇಣಿಗೆ ನೀಡಿದ್ದಾರೆ.

ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ಪಂಜಾಬಿ ಗಾಯಕ ಸಿಂಗಾ ಎಂಬವರು ಇನ್ಸ್​​ಟಾಗ್ರಾಂ ಖಾತೆಯಲ್ಲಿ ಈ ಬಗ್ಗೆ ದಿಲ್ಜಿತ್ ದೋಸಂಜ್‌ ಅವರಿಗೆ ಧನ್ಯವಾದ ಹೇಳಿದ್ದಾರೆ. 10 ರೂಪಾಯಿ ಕೊಟ್ಟರು ಹೇಳಿಕೊಳ್ಳುವ ಜನರ ಮಧ್ಯೆ ನೀವು ಉದಾರವಾದ ದೇಣಿಗೆ ನೀಡಿದ್ದರೂ ಕೂಡ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡದೇ ದೊಡ್ಡತನ ಮೆರೆದಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಧನ್ಯವಾದಗಳು ಸಹೋದರ, ನೀವು ರೈತರಿಗೆ, ಅವರ ಬೆಚ್ಚಗಿನ ಬಟ್ಟೆಗಳಿಗೆ 1 ಕೋಟಿ ರೂ. ಕೊಟ್ಟಿದ್ದೀರಿ, ಮತ್ತು ಯಾರಿಗೂ ಈ ಬಗ್ಗೆ ತಿಳಿದಿಲ್ಲ. ನೀವು ಇದರ ಬಗ್ಗೆ ಯಾವುದೇ ಪೋಸ್ಟ್ ಮಾಡಿಲ್ಲ. ಇತ್ತೀಚಿನ ದಿನಗಳಲ್ಲಿ ಜನರು 10 ರೂ. ದೇಣಿಗೆ ನೀಡಿದರು ಜನ ಮುಚ್ಚಿಟ್ಟುಕೊಳ್ಳುವುದಿಲ್ಲ” ಎಂದಿದ್ದಾರೆ.

ನಿನ್ನೆ ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಸೂಚಿಸಲು ಮತ್ತು ಅವರಲ್ಲಿ ಮತ್ತಷ್ಟು ಉತ್ಸಾಹ ತುಂಬಲು ಪಂಜಾಬಿ ಗಾಯಕರು ಸಿಂಗೂ ಗಡಿಯಲ್ಲಿ ಜಮಾಯಿಸಿದ್ದರು.  ದಿಲ್ಜಿತ್ ದೋಸಂಜ್, ಗುರ್ಷಾಬಾದ್ ಸಿಂಗ್ ಕುಲಾರ್ ಮತ್ತು ಹಾರ್ಫ್ ಚೀಮಾ ಸೇರಿದಂತೆ ಹಲವಾರು ಗಾಯಕರು ಕಾಣಿಸಿಕೊಂಡರು.

“ನಾವು ನಮ್ಮ ಹಾಡುಗಳ ಮೂಲಕ ರೈತರ ಮನೋಸ್ಥೈರ್ಯವನ್ನು ಹೆಚ್ಚಿಸುತ್ತಿದ್ದೇವೆ” ಎಂದು ಗಾಯಕ ಗುರ್ಷಾಬಾದ್ ಎಸ್ ಕುಲಾರ್ ಹೇಳಿದ್ದರು.

ಇದನ್ನೂ ಓದಿ: ಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು

ಇನ್ನು, ಸಿಂಗೂ ಗಡಿಯಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ್ದ ದೋಸಂಜ್, “ಎಲ್ಲ ರೈತರಿಗೆ ಹ್ಯಾಟ್ಸ್ ಆಫ್, ನೀವು ಹೊಸ ಇತಿಹಾಸವನ್ನು ರಚಿಸಿದ್ದೀರಿ. ಈ ಇತಿಹಾಸವನ್ನು ಮುಂದಿನ ಪೀಳಿಗೆಗೆ ವಿವರಿಸಲಾಗುವುದು. ರೈತರ ಪ್ರತಿಭಟನೆಯನ್ನು ಯಾರು ದಾರಿತಪ್ಪಿಸಬಾರದು” ಎಂದರು.

’ದಯವಿಟ್ಟು ನಮ್ಮ ರೈತರ ಬೇಡಿಕೆಗಳನ್ನು ಈಡೇರಿಸಿ. ಎಲ್ಲರೂ ಇಲ್ಲಿ ಶಾಂತಿಯುತವಾಗಿ ಕುಳಿತಿದ್ದಾರೆ ಮತ್ತು ಇಡೀ ದೇಶವು ರೈತರೊಂದಿಗೆ ಇದೆ. ಈ ರೈತರ ಪ್ರತಿಭಟನೆ ಬಗ್ಗೆ, ಟ್ವಿಟ್ಟರ್‌ನಲ್ಲಿ ವಿಷಯಗಳನ್ನು ತಿರುಚಲಾಗಿದೆ ಆದರೆ ಸತ್ಯವೆಂದರೆ ರೈತರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ. ಇಲ್ಲಿ ಯಾರೂ ರಕ್ತಪಾತದ ಬಗ್ಗೆ ಮಾತನಾಡುವುದಿಲ್ಲ. ಇವರ ಬೇಡಿಕೆಗಳನ್ನು ಪರಿಹರಿಸಿ’ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

You have created a new history,' says Diljit Dosanjh to protesting farmers
PC: ANI

ಬಾಲಿವುಡ್ ನಟಿ ಸ್ವರಾ ಭಾಸ್ಕರ್, ರಿಚಾ ಚಾಡ್ಡಾ, ತಾಪ್ಸಿ ಪನ್ನು, ಮಿಕಾ ಸಿಂಗ್, ವಿಜೇಂದರ್ ಸಿಂಗ್ ಸೇರಿದಂತೆ ಪಂಜಾಬಿ ಚಿತ್ರೋದ್ಯಮ, ಕಂಗನಾ ವಿರುದ್ಧದ ನಿಲುವಿನಲ್ಲಿ ದಿಲ್ಜಿತ್ ದೋಸಂಜ್ ಅವರನ್ನು ಬೆಂಬಲಿಸಿದ್ದರು.


ಇದನ್ನೂ ಓದಿ: ಕ್ರಿಸ್‌‌ಮಸ್‌ನಲ್ಲಿ ಭಾಗವಹಿಸುವ ಹಿಂದೂಗಳ ಮೇಲೆ ಹಲ್ಲೆ ಮಾಡುತ್ತೇವೆ: ಬಜರಂಗದಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...