Homeಚಳವಳಿಕೃಷಿ ಕಾನೂನು ಹಿಂಪಡೆಯದಿದ್ದರೆ ಖೇಲ್ ರತ್ನ ಪ್ರಶಸ್ತಿ ವಾಪಾಸ್: ಬಾಕ್ಸರ್‌ ವಿಜೇಂದರ್‌ ಸಿಂಗ್

ಕೃಷಿ ಕಾನೂನು ಹಿಂಪಡೆಯದಿದ್ದರೆ ಖೇಲ್ ರತ್ನ ಪ್ರಶಸ್ತಿ ವಾಪಾಸ್: ಬಾಕ್ಸರ್‌ ವಿಜೇಂದರ್‌ ಸಿಂಗ್

ನಾನು ಪಂಜಾಬ್‌ನಲ್ಲಿ ತರಬೇತಿ ಪಡೆದಿದ್ದೇನೆ ಮತ್ತು ಅಲ್ಲಿನ ರೊಟ್ಟಿ ತಿಂದಿದ್ದೇನೆ. ಇಂದು ಅವರು ಚಳಿಯಲ್ಲಿ ಇದ್ದಾರೆ, ಹಾಗಾಗಿ ನಾನು ಅವರ ಸೋದರನಾಗಿ ಬಂದಿದ್ದೇನೆ.

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾನೂನುಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟಕ್ಕೆ ಬಾಕ್ಸಿಂಗ್ ಚಾಂಪಿಯನ್ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ವಿಜೇಂದರ್‌ ಸಿಂಗ್ ಬೆಂಬಲ ನೀಡಿದ್ದಾರೆ. ಕರಾಳ ಕೃಷಿ ನೀತಿಯನ್ನು ಹಿಂಪಡೆಯದಿದ್ದರೆ ತನಗೆ ಸಿಕ್ಕಿರುವ ಕ್ರೀಡಾ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನವನ್ನು ಹಿಂದಿರುಗಿಸುವುದಾಗಿ ಅವರು ಘೋಷಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರ ಹೋರಾಟಕ್ಕೆ ತಮ್ಮ ಬೆಂಬಲ ಘೋಷಿಸಿದ ನಟ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. “ನಾನು ಪಂಜಾಬ್‌ನಲ್ಲಿ ತರಬೇತಿ ಪಡೆದಿದ್ದೇನೆ ಮತ್ತು ಅಲ್ಲಿನ ರೊಟ್ಟಿ ತಿಂದಿದ್ದೇನೆ. ಇಂದು ಅವರು ಚಳಿಯಲ್ಲಿ ಇದ್ದಾರೆ, ಹಾಗಾಗಿ ನಾನು ಅವರ ಸೋದರನಾಗಿ ಬಂದಿದ್ದೇನೆ. ಹರ್ಯಾಣದ ಇತರ ಕ್ರೀಡಾಪಟುಗಳು ಕೂಡಾ ಬರಲು ಬಯಸಿದ್ದರು ಆದರೆ ಅವರ ಸರ್ಕಾರಿ ಉದ್ಯೋಗಳು ಅವರಿಗೆ ತೊಂದರೆ ನೀಡುತ್ತಿದೆ. ಅವರೂ ರೈತರ ಪರವಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:  ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ಹರಿಯಾಣದ ವಿಜೇಂದರ್ ಸಿಂಗ್ ಅವರು ಒಲಿಂಪಿಕ್‌ನ ಬಾಕ್ಸಿಂಗ್‌ ವಿಭಾಗದಲ್ಲಿ ಭಾರತಕ್ಕೆ ಪದಕ ಗೆದ್ದ ಮೊದಲ ಬಾಕ್ಸರ್. ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‌ ಟಿಕೆಟ್‌‌ನಲ್ಲಿ ದಕ್ಷಿಣ ದೆಹಲಿಯಿಂದ ಸ್ಪರ್ಧಿಸಿ ಸೋತಿದ್ದರು.

ದೆಹಲಿಯ ಐದು ಪ್ರಮುಖ ಗಡಿಯುದ್ದಕ್ಕೂ ರೈತರು ನಡೆಸುತ್ತಿರುವ ಆಂದೋಲನವು ತನ್ನ 11 ನೇ ದಿನವನ್ನು ಪ್ರವೇಶಿಸಿದೆ. ಪ್ರತಿಭಟನಾಕಾರರನ್ನು ಬೆಂಬಲಿಸಿ ಹಲವಾರು ಕ್ರೀಡಾಪಟುಗಳು ಧ್ವನಿಯೆತ್ತಿದ್ದಾರೆ. ಈ ಹಿಂದೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ತಮ್ಮ ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...