ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ಆ ಕಾಯ್ದೆಗಳನ್ನು ಅದಾನಿ-ಅಂಬಾನಿ ಕೃಷಿ ಕಾನೂನುಗಳೆಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕರೆದಿದ್ದಾರೆ.
‘ಅದಾನಿ-ಅಂಬಾನಿ ಕೃಷಿ ಕಾನೂನುಗಳನ್ನು’ ರದ್ದುಪಡಿಸಬೇಕು. ಅವು ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ ಎಂದು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
‘अदानी-अंबानी कृषि क़ानून’ रद्द करने होंगे।
और कुछ भी मंज़ूर नहीं!The ‘Adani-Ambani Farm Laws’ have to be revoked.
Nothing less is acceptable.— Rahul Gandhi (@RahulGandhi) December 7, 2020
ಕೃಷಿ ಮಸೂದೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಕೇಂದ್ರ ಸರ್ಕಾರ ಪದೇ ಪದೇ ಆಶ್ವಾಸನೆ ನೀಡಿದೆ. ಆದರೆ ಸಭೆಗಳು ವಿಫಲವಾಗುತ್ತಿರುವುದರಿಂದ, ಡಿಸೆಂಬರ್ 8 ಕ್ಕೆ ಘೋಷಿಸಲಾದ ಭಾರತ್ ಬಂದ್ ಯೋಜಿಸಿದಂತೆ ನಡೆಯಲಿದೆ ಎಂದು ಕೃಷಿ ಒಕ್ಕೂಟದ ಮುಖಂಡರು ಹೇಳಿದ್ದಾರೆ. ರೈತರ ಪ್ರತಿಭಟನೆಗೆ ಬಿಜೆಪಿಯೇತರ ಸರ್ಕಾರಗಳು, ಎಡ ಸಂಘಟನೆಗಳು ಮತ್ತು ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ.
ಈಗಾಗಲೇ ರೈತರ ಭಾರತ್ ಬಂದ್‌ಗೆ ಕಾಂಗ್ರೆಸ್, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ಡಿಎಂಕೆ, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್), ಶಿರೋಮಣಿ ಅಕಾಲಿ ದಳ ಸೇರಿ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗಳು ದೇಶಾದ್ಯಂತ ಮುಷ್ಕರಕ್ಕೆ ತಮ್ಮ ಬೆಂಬಲವನ್ನು ಘೋಷಿಸಿವೆ.
ಇದನ್ನೂ ಓದಿ: ’ಈ ಹೋರಾಟ ಕೇವಲ ರೈತರದ್ದಲ್ಲ, ಎಲ್ಲಾ ದೇಶವಾಸಿಗಳದ್ದು’: ಭಾರತ್ ಬಂದ್ ಬೆಂಬಲಿಸಿದ ಆಪ್


