Homeಕರೋನಾ ತಲ್ಲಣಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಶೇಕಡ 15 ರಷ್ಟು ಗ್ರಾಮೀಣ ಕುಟುಂಬಗಳಲ್ಲಿ ಮಾತ್ರ ಇಂಟರ್ನೆಟ್ ವ್ಯವಸ್ಥೆಯಿದೆ. ಆನ್‌ಲೈನ್‌ ಮೂಲಕ ಶಿಕ್ಷಣ ಪಡೆಯಲು ಸಾಧ್ಯವಾಗದೆ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಅನೇಕ ಪ್ರಕರಣಗಳು ವರದಿಯಾಗಿವೆ.

- Advertisement -
- Advertisement -

ಮಕ್ಕಳ ರಕ್ಷಣೆ ಮತ್ತು ಶಿಕ್ಷಣಕ್ಕಾಗಿ ಡಿಸೆಂಬರ್ 15ರೊಳಗೆ ಕರ್ನಾಟಕದ ಎಲ್ಲಾ ಶಾಲೆಗಳನ್ನು ತೆರೆಯಲೇಬೇಕು ಎಂದು ಆಗ್ರಹಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿಯು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದು ಮನವಿ ಮಾಡಿದೆ.

ರಾಜ್ಯದಲ್ಲಿ ಸೆಪ್ಟೆಂಬರ್ ಬಳಿಕ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ ನಿರ್ಧರವನ್ನು ಖಂಡಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿ ಶಿಕ್ಷಣ ಸಚಿವರಿಗೆ ಪತ್ರ ಬರೆದಿದೆ.

ಕಳೆದ 3-4 ತಿಂಗಳಲ್ಲಿ ಸಾರ್ವಜನಿಕ ಚಟುವಟಿಕೆಗಳಿಗೆಲ್ಲ ಅನುವು ಮಾಡಲಾಗಿದೆ. ಪ್ರಯಾಣ, ಹೋಟೆಲ್, ಬಾರುಗಳು, ಮಾರುಕಟ್ಟೆಗಳು, ದೊಡ್ಡ ದೊಡ್ಡ ಮಾಲ್‌ಗಳು, ಸಭೆ-ಸಮಾರಂಭಗಳು, ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಚುನಾವಣಾ ಪ್ರಚಾರ ಮುಂತಾದ ಎಲ್ಲಾ ಚಟುವಟಿಕೆಗಳಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ. ಕೊರೋನ ಸೋಂಕು ವ್ಯಾಪಕವಾಗಿಯೂ, ಕ್ಷಿಪ್ರವಾಗಿಯೂ ಹರಡುತ್ತಿದ್ದ ಮೇ-ಜುಲೈ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನೂ, ಸಿಇಟಿ, ನೀಟ್ ಇತ್ಯಾದಿ ಪರೀಕ್ಷೆಗಳನ್ನೂ ಯಶಸ್ವಿಯಾಗಿ ನಡೆಸಲಾಗಿದ್ದು, ಅದರಿಂದ ವಿದ್ಯಾರ್ಥಿಗಳಿಗಾಗಲೀ, ಶಿಕ್ಷಕರಿಗಾಗಲೀ ಯಾವುದೇ ಸಮಸ್ಯೆಗಳಾಗಿಲ್ಲ ಎಂದು ಸರ್ಕಾರ ತಿಳಿಸಿದೆ. ಹಾಗಾದರೆ ಶಾಲೆ ಆರಂಭಕ್ಕೆ ಏಕೆ ತಡೆ ಎಂದು ಸಮಿತಿ ಕಿಡಿಕಾರಿದೆ.

ಇದನ್ನೂ ಓದಿ: ‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಕೊರೊನಾ ಸಂದರ್ಭದಲ್ಲಿ ಮಕ್ಕಳ ಕಲಿಕೆಯನ್ನು ನಿರಂತರವಾಗಿರಿಸಲು, ತಂತ್ರಜ್ಞಾನದ ಲಭ್ಯತೆಯಿಲ್ಲದ  ಗ್ರಾಮೀಣ ಭಾಗದ ಮಕ್ಕಳಿಗೆ ಸಹಾಯ ಮಾಡುವ ಉದ್ದೇಶದಿಂದ ತಜ್ಞರ ಸಮಿತಿಯ ಶಿಫಾರಸ್ಸನ್ನು ಆಧರಿಸಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗಾಗಿ ವಿದ್ಯಾಗಮ ಆರಂಭಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳು, ಪಾಲಕರು, ಶಿಕ್ಷಕರು, ಸಮುದಾಯ ಮತ್ತು ಹಲವು ಸಂಘಟನೆಗಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದವು. ಆದರೆ, ಮಾಧ್ಯಮಗಳು, ಅದರಲ್ಲೂ ವಿಶೇಷವಾಗಿ ಎಲೆಕ್ಟ್ರಾನಿಕ್‌ ಮಾಧ್ಯಮಗಳು ಸೃಷ್ಟಿಸಿದ ತಪ್ಪು ತಿಳುವಳಿಕೆ, ಅವೈಜ್ಞಾನಿಕ ವಿಶ್ಲೇಷಣೆ, ಭಾವಾನಾತ್ಮಕ ಗದ್ದಲದ ನಡುವೆ, ಏಕಪಕ್ಷೀಯವಾಗಿ, ಏಕಾಏಕಿಯಾಗಿ ತೀರ್ಮಾನಿಸಿ ಅದನ್ನು ನಿಲ್ಲಿಸಲಾಯಿತು ಎಂದು ಸಚಿವರಿಗೆ ಬರೆದ ಪತ್ರದಲ್ಲಿ ದೂರಲಾಗಿದೆ.

ಕೊರೊನಾ ಸೋಂಕು ಹೆಚ್ಚಾಗಿ ಹರಡಬಲ್ಲ ಎಲ್ಲ ವಹಿವಾಟು-ಕಾರ್ಯಕ್ರಮಗಳಿಗೆ ಅವಕಾಶ ನೀಡಿ, ಕೇವಲ ಶಾಲೆಗಳನ್ನಷ್ಟೇ ಮುಚ್ಚಿ, ಅತ್ಯಂತ ಕೆಳಸ್ತರದ ಅವಕಾಶವಂಚಿತ ಸಮುದಾಯದ ಮಕ್ಕಳಿಗಿದ್ದ  ಕಾರ್ಯಕ್ರಮಗಳನ್ನಷ್ಟೇ ನಿಲ್ಲಿಸಿ, ಸರ್ಕಾರಿ ಶಾಲೆಗಳನ್ನು ಮುಚ್ಚಿ, ಬಹುಸಂಖ್ಯಾತ ಬಡ ಮಕ್ಕಳಿಗೆ ಬಳಸಲಿಕ್ಕಾಗದ, ಆನ್ ಲೈನ್ ಶಿಕ್ಷಣಕ್ಕೆ ಒತ್ತು ನೀಡಿರುವುದು ದೊಡ್ಡ ಹುನ್ನಾರ ಮತ್ತು ಲಾಬಿಯಿದೆಯೆಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಆನ್‌ಲೈನ್
PC: 7News

ಶಾಲೆಗಳನ್ನು ಧೀರ್ಘಕಾಲ ಮುಚ್ಚಿರುವುದರಿಂದ 3 ರಿಂದ 20 ವರ್ಷದ ಎಲ್ಲರ ಮೇಲೂ ಶಾಶ್ವತವಾದ ಹಾನಿಯುಂಟು ಮಾಡಲಿದೆ ಎಂಬುದನ್ನು ವಿಶ್ವದ ಎಲ್ಲಾ ಉನ್ನತ ಸಂಸ್ಥೆಗಳೂ, ಮಾನವ ಹಕ್ಕುಗಳ ಸಂಘಟನೆಗಳೂ, ತಜ್ಞರೂ ಏಕಾಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಶಾಲೆಗಳನ್ನು ಶೀಫ್ರವೇ ಪುನರಾರಂಭಿಸಬೇಕು ಎಂದು ಸಚಿವರಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ದೀಪಾವಳಿ ನಂತರ ಶಾಲೆ ಹಾಗೂ ದೇವಾಲಯ ರೀ ಓಪನ್!

ದಿನಕ್ಕೆ 2 ಗಂಟೆಗೂ ಹೆಚ್ಚು ಕಾಲ ಫೋನ್, ಟಿವಿ ಪರದೆ ನೋಡುತ್ತಿದ್ದರೆ 3-5 ವರ್ಷದ ಮಕ್ಕಳ ಭಾಷೆ, ಬರವಣಿಗೆ, ಗ್ರಹಿಕೆಗಳು ಕುಗ್ಗುತ್ತವೆ. 5 ರಿಂದ 7 ಗಂಟೆ ಅವುಗಳನ್ನು ಬಳಸಿದರೆ ಮಿದುಳಿನ ಬೆಳವಣಿಗೆಯೇ ಕುಂಠಿತಗೊಂದು ಮಿದುಳು ತೆಳ್ಳಗಾಗಿ ಶಾಶ್ವತ ಹಾನಿಯಾಗುತ್ತದೆಂದೂ ಅಧ್ಯಯನಗಳು ತೋರಿಸಿವೆ ಎಂಬ ವಿಚಾರವನ್ನು ಬಹಿರಂಗ ಪತ್ರದಲ್ಲಿ ಬರೆಯಲಾಗಿದೆ.

ಕೊರೊನಾ ಸೋಂಕಿನ ಲಸಿಕೆಗಳು ಬರುವವರೆಗೆ ಶಾಲೆಗಳನ್ನು ತೆರೆಯಬಾರದು ಎಂಬ ವಾದವನ್ನು ಮಾಧ್ಯಮಗಳು ಈಗಾಗಲೇ ಹರಡಿವೆ. ಇದು ತೀರಾ ಅಸಂಬದ್ಧವಾಗಿದೆ. ಕೊರೊನಾ ಲಸಿಕೆಗಳು ಬರುವುದಕ್ಕೆ ಇನ್ನೂ ತಿಂಗಳುಗಳು ಬೇಕು. ಬಂದರೂ ದೇಶಗಳಲ್ಲಾಗಲೀ, ವಿದೇಶದಲ್ಲಾಗಲಿ ಮಕ್ಕಳಿಗೆ ಲಸಿಕೆ ನೀಡುವ ಪ್ರಸ್ತಾವವೇ ಇಲ್ಲ. ಮಕ್ಕಳಿಗೆ ಕೊರೊನಾ ಬಾಧಿಸುವುದಿಲ್ಲ ಎಂದ ಮೇಲೆ ಅವರಿಗೆ ಅವುಗಳ ಅಗತ್ಯವೂ ಇಲ್ಲ. ಆದ್ದರಿಂದ ಶಾಲೆಗಳನ್ನು ಆರಂಭಿಸುವುದಕ್ಕೆ ಲಸಿಕೆಗಳನ್ನು ಕಾಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಮಿತಿ ಹೇಳಿದೆ.

ಕೇವಲ ಶೇಕಡ 15 ರಷ್ಟು ಗ್ರಾಮೀಣ ಕುಟುಂಬಗಳಲ್ಲಿ ಮಾತ್ರ ಇಂಟರ್ನೆಟ್ ವ್ಯವಸ್ಥೆಯಿದೆ. ಆನ್‌ ಲೈನ್‌ ಮೂಲಕ ಶಿಕ್ಷಣ ಪಡೆಯಲು ಸಾಧ್ಯವಾಗದಿರುವುದರಿಂದ ಅನೇಕ ವಿದ್ಯಾರ್ಥಿಗಳು ಅಸಹಾಯಕತೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಅನೇಕ ಪ್ರಕರಣಗಳು ಕೂಡಾ ವರದಿಯಾಗಿವೆ. ಸರ್ಕಾರಿ ಶಾಲೆಯಲ್ಲಿ ಕಲಿಸುತ್ತಿರುವ ಶೇಕಡ 75 ರಷ್ಟು ಪಾಲಕರು ತಮ್ಮ ಮಕ್ಕಳಿಗೆ ತಂತ್ರಜ್ಞಾನದ ಮೂಲಕ ಶಿಕ್ಷಣ ಒದಗಿಸಲು ಸಾಧ್ಯವಾಗದೆ ಪರಿತಪಿಸುತ್ತಿದ್ದಾರೆ ಎಂದು ಪಾಲಕರ ಕಷ್ಟವನ್ನು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.

ಅಂಗನವಾಡಿಯಿಂದ 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಡಿಸೆಂಬರ್ 15ರೊಳಗಾಗಿ ಪೂರ್ಣ ಪ್ರಮಾಣದಲ್ಲಿ ಆರಂಭಿಸಬೇಕು. ಡಿಸೆಂಬರ್ 15ಕ್ಕೆ ಆರಂಭಿಸಿದರೆ ಜೂನ್ ಮಧ್ಯದವರೆಗೆ ಈ 2020-2021 ಶೈಕ್ಷಣಿಕ ವರ್ಷವೆಂದು ಶಾಲೆಗಳನ್ನು ನಡೆಸಿ 180 ದಿನಗಳ ಕಾಲಾವಕಾಶದಲ್ಲಿ ಎಲ್ಲಾ ಪಾಠಗಳನ್ನು ಬೋಧಿಸಬೇಕು.  ಶೈಕ್ಷಣಿಕ ವರ್ಷವನ್ನು ಡಿಸೆಂಬರ್ 15, 2020ರಿಂದ ಜೂನ್ 15, 2021 ಎಂದು ಪರಿಗಣಿಸಬೇಕೆಂದೂ, ಆ ಬಳಿಕ ಪರೀಕ್ಷೆಗಳನ್ನು ನಡೆಸಿ, ಜುಲೈ 2021ರಿಂದ ಮುಂದಿನ ಶೈಕ್ಷಣಿಕ ವರ್ಷವನ್ನು ಆರಂಭಿಸಬೇಕೆಂದೂ ಪತ್ರದಲ್ಲಿ ಆಗ್ರಹಿಸಲಾಗಿದೆ.

ಕೊರೊನಾ ಸೋಂಕಿನಿಂದ ತೊಂದರೆಗೀಡಾಗುವ ಅಪಾಯವು ಹೆಚ್ಚಿರುವ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಲ್ಲಾ ನೆರವನ್ನು ಒದಗಿಸುವುದಕ್ಕೆ ಸರ್ಕಾರವು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಅಲ್ಲದೇ ನೂರಾರು ವಿದ್ಯಾರ್ಥಿಗಳು ನಮ್ಮ ಶಾಲೆಗಳನ್ನು ಆರಂಭಿಸಿ ಎಂದು ಪ್ಲೆಕಾರ್ಡ್ ಹಿಡಿದು ಆಗ್ರಹಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಬೇಗನೇ ಶಾಲೆ ಆರಂಭಿಸಿ ಎಂದು ಮಕ್ಕಳು ಅಭಿಯಾನ ಕೈಗೊಂಡಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.

ಮೊಹಿದ್ದೀನ್ ಕುಟ್ಟಿ, ವಿ ಎಂ ನಾರಾಯಣ ಸ್ವಾಮಿ, ಜ್ಯೋತಿ ಕೆ, ವಾಸುದೇವ ರೆಡ್ಡಿ ಕೆ, ಸರೋವರ್ ಬೆಂಕೀಕೆರೆ, ಡಾ.ಶ್ರೀನಿವಾಸ್, ತೋಳಿ ಭರಮಣ್ಣ, ತಿಪ್ಪೇಸ್ವಾಮಿ ಕೆಟಿ, ಡಾ. ನಿರಂಜನಾರಾಧ್ಯ ವಿಪಿ, ಡಾ॥ ಶ್ರೀನಿವಾಸ ಕಕ್ಕಿಲ್ಲಾಯ, ಡಾ. ಸಿದ್ದನಗೌಡ ಪಾಟೀಲ, ಡಾ. ವಡ್ಡಗೆರೆ ನಾಗರಾಜಯ್ಯ, ಶ್ರೀಪಾದ ಭಟ್, ಡಾ. ಬಿಆರ್ ಮಂಜುನಾಥ್, ಬಿ.ಆರ್ ಭಾಸ್ಕರ್ ಪ್ರಸಾದ್, ಡಾ.ಕೆಎಸ್ ಜನಾರ್ಧನ, ಡಾ॥ ಹೆಚ್ ಜಿ ಜಯಲಕ್ಷ್ಮಿ, ಡಾ॥ ಪಿವಿ ಭಂಡಾರಿ, ಡಾ॥ ವಾಣಿ ಕೋರಿ, ಡಾ॥ ಬಾಲಸರಸ್ವತಿ, ಡಾ॥ ಭಾನು ಪ್ರಕಾಶ್ ಎಎಸ್, ರಾಜಾರಾಂ ತಲ್ಲೂರು, ಜಿ ರವಿ, ಪಾರ್ಥಸಾರಥಿ ಕೆಎಸ್, ಭಾರತಿ ಪ್ರಶಾಂತ್ ಮುಂತಾದವರು ಬಹಿರಂಗ ಪತ್ರಕ್ಕೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ಡಿಸೆಂಬರ್ ಅಂತ್ಯದವರೆಗೂ ಶಾಲೆಗಳ ಆರಂಭ ಇಲ್ಲ: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...