Homeಚಳವಳಿತುಮಕೂರು ಜಿಲ್ಲೆಯ ವಿವಿದೆಡೆ ಭಾರತ್ ಬಂದ್: ಪ್ರಧಾನಿ ಪ್ರತಿಕೃತಿ ದಹನ

ತುಮಕೂರು ಜಿಲ್ಲೆಯ ವಿವಿದೆಡೆ ಭಾರತ್ ಬಂದ್: ಪ್ರಧಾನಿ ಪ್ರತಿಕೃತಿ ದಹನ

’ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಸಭೆ ಸಮಾರಂಭಗಳಲ್ಲಿ ಪದೇಪದೇ ಉಲ್ಲೇಖಿಸುವ ಪ್ರಧಾನಿ ರೈತರ ಬೇಡಿಕೆಯೊಂದನ್ನು ಈಡೇರಿಸಲು ಹಿಂದೇಟು ಹಾಕುತ್ತಿದ್ದಾರೆ’

- Advertisement -
- Advertisement -

ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಮತ್ತು ದೆಹಲಿಯಲ್ಲಿ ರೈತರು ನಡೆಸಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕರೆ ನೀಡಿರುವ ಭಾರತ್ ಬಂದ್‌ಗೆ ತುಮಕೂರು ಮತ್ತು ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಸಲಾಯಿತು. . ರೈತ-ದಲಿತ-ಕಾರ್ಮಿಕ ಸಂಘಟನೆಗಳು, ಎಡಪಕ್ಷಗಳು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನಾನಿರತ ರೈತರು ಪ್ರಧಾನಿ ನರೆಂದ್ರ ಮೋದಿಯ ಪ್ರತಿಕೃತಿ ದಹನ ಮಾಡಿ ಕಿಡಿಕಾರಿದರು. ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದರು. ಕೃಷಿ ಸಂಬಂಧಿ ಸುಗ್ರೀವಾಜ್ಞೆಗಳ ಜಾರಿಯಿಂದ ದೇಶಕ್ಕೆ ಅನ್ನ ನೀಡುವ ರೈತ ಸಮೂಹ ಬೀದಿಗೆ ಬೀಳಲಿದೆ. ತೀವ್ರ ಸಂಕಷ್ಟಕ್ಕೆ ಗುರಿಯಾಗಲಿದೆ. ಅನ್ನ ನೀಡುವ ರೈತ ಮತ್ತೊಬ್ಬರ ಬಾಗಿಲಿನಲ್ಲಿ ನಿಲ್ಲುವಂತಹ ಪರಿಸ್ಥಿತಿ ಎದುರಾಗಲಿದೆ.

ಬಡ, ಮಧ್ಯಮ ವರ್ಗದ ರೈತರ ಬಳಿ ಇರುವ ಅಲ್ಪಸ್ವಲ್ಪ ಭೂಮಿಯೂ ಶ್ರೀಮಂತರ ಕೈ ಸೇರಲಿದೆ. ಕಾರ್ಪೋರೇಟ್ ಕುಳಗಳು ಜಮೀನು ಖರೀದಿ ರೈತರನ್ನು ಕೂಲಿ ಇಟ್ಟುಕೊಳ್ಳುವಂತಹ ವ್ಯವಸ್ಥೆ ಮತ್ತೆ ಬರಲಿದೆ. ರೈತರು ಸ್ವತಂತ್ರವಾಗಿರಬೇಕು. ಯಾರ ಹಿಡಿತವೂ ಇರಬಾರದು. ಮತ್ತೊಬ್ಬರ ಗುಲಾಮ ರಾಗಿ ಜೀವನ ನಡೆಸಬಾರದು ಎಂಬ ನ್ಯಾಯದ ವ್ಯವಸ್ಥೆಗೆ ಧಕ್ಕೆ ಬರಲಿದೆ. ಹಾಗಾಗಿ ಭಾರತ ಸರ್ಕಾರ ಹೊಸ ಕೃಷಿ ಸುಗ್ರೀವಾಜ್ಞೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರತ್ ಬಂದ್‌ಗೆ ಭಾರಿ ಬೆಂಬಲ: ಹೋರಾಟ ಯಶಸ್ವಿ

ಪಾವಗಡ, ಮಧುಗಿರಿ, ಶಿರಾ, ಕೊರಟಗೆರೆ, ಗುಬ್ಬಿ, ತಿಪಟೂರು, ಕುಣಿಗಲ್, ತುರುವೇಕೆರೆ, ಚಿಕ್ಕನಾಯಕನ ಹಳ್ಳಿ ಹೀಗೆ ಜಿಲ್ಲೆಯ ಎಲ್ಲಾ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆಗಳು ಜೋರಾಗಿ ನಡೆದವು. ರಾಜ್ಯ ರೈತ ಸಂಘಟನೆ ಮತ್ತು ಹಸಿರು ಸೇನೆಯ ಎರಡೂ ಬಣಗಳ ಕಾರ್ಯಕರ್ತರು ಮಿನಿವಿಧಾನ ಸೌಧಗಳ ಬಳಿ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು.

ಅನ್ನದಾತರ ಬೆನ್ನು ಮೂಳೆ ಮುರಿಯುವ ಕೆಲಸವನ್ನು ಭಾರತ ಸರ್ಕಾರ ಮಾಡುತ್ತಿದೆ. ಪ್ರತಿಯೊಬ್ಬರು ಅನ್ನ ತಿಂದೇ ಬದುಕಬೇಕು ಅನ್ನವಿಲ್ಲದೆ ಬಲವೂ ಇಲ್ಲ. ಜ್ಞಾನವೂ ಪಡೆಯಲು ಆಗುವುದಿಲ್ಲ. ಇದನ್ನು ಕಾರ್ಪೋರೇಟ್ ಬೆಂಬಲಿತ ಸರ್ಕಾರ ಗಳ ಅರ್ಥ ಮಾಡಿಕೊಳ್ಳಬೇಕು. ಇದು ಅರ್ಥವಾಗದಿದ್ದರೆ ದೇಶವನ್ನು ಆಳ್ವಿಕೆ ಮಾಡಲು ಯೋಗ್ಯರಲ್ಲ. ನಿಮಗೆ ಹೇಗೆ ಅರ್ಥಮಾಡಿಸಬೇಕೆಂಬುದನ್ನು ಚುನಾವಣೆಯಲ್ಲಿ ತಿಳಿಸುತ್ತೇವೆ ಎಂದು ಸವಾಲು ಹಾಕಿದರು.

ತುಮಕೂರು ಚರ್ಚ್ ವೃತ್ತದಿಂದ ಟೌನ್ ಹಾಲ್‌ವರೆಗೂ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದನ್ನು ಖಂಡಿಸಿದರು. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುವ ಪ್ರಧಾನಿ ರೈತರನ್ನು ಒಳಗೊಳ್ಳದೆ ಹೇಗೆ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪದೇಪದೇ ಉಲ್ಲೇಖಿಸುವ ಪ್ರಧಾನಿ ರೈತರ ಬೇಡಿಕೆಯೊಂದನ್ನು ಈಡೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಬಾಯಿ ಮಾತಿಗೆ ಮಾತ್ರ ರೈತಮಂತ್ರ ಜಪಿಸುವ ಮೋದಿ ಕೇವಲ ಡೋಂಗಿಯಂತೆ ನಟಿಸುತ್ತಿದ್ದಾರೆ. ರೈತರ ಪರ ಕಾಳಿಜಿ ಇಲ್ಲದ ಪ್ರಧಾನಿ ಅದಾನಿ ಅಂಬಾನಿಯಂಥ ಬಂಡವಾಳಗಾರರಿಗೆ ಮಣೆ ಹಾಕುತ್ತಿದ್ದಾರೆ. ರೈತರನ್ನು ಕಡೆಗಣಿಸಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಟಿ.ಬಿ.ಜಯಂದ್ರ ಮಾತನಾಡಿ, ’ನಮ್ಮ ಪಕ್ಷ ರೈತರ ನೆರವಿಗೆ ನಿಲ್ಲುತ್ತದೆ. ರೈತರು ಈ ದೇಶದ ಎಲ್ಲಾ ವರ್ಗದ ಜನರಿಗೂ ಅನ್ನ ನೀಡುವವರು. ಅವರು ಸಂಕಷ್ಟಕ್ಕೆ ಸಿಲುಕಿದರೆ ದೇಶವೇ ಸಂಕಷ್ಟಕ್ಕೆ ಸಿಲುಕಿದಂತೆ ಆಗುತ್ತದೆ. ಕಳೆದ ಹಲುವು ದಿನಗಳಿಂದ ದೆಹಲಿಯಲ್ಲಿ ನೂರಾರು ರೈತ ಸಂಘಟನೆ ಗಳು ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಗಮನಹರಿಸುತ್ತಿಲ್ಲ’ ಎಂದರು.

ಇದನ್ನೂ ಓದಿ: ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ…

’ಇದು ಬಿಜೆಪಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂಬುದನ್ನು ತೋರಿಸುತ್ತದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ಗಳು ರೈತರು, ಜನಸಾಮಾನ್ಯರನ್ನು ಕತ್ತಲಿಗೆ ದೂಡಲಿವೆ. ಜನರು ಆಹಾರದ ಸಮಸ್ಯೆಯನ್ನು ಎದುರಿಸುವಂಥ ದಿನಗಳು ದೂರವಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ರೈತರ ಬೇಢಿಕೆಗಳಿಗೆ ಸ್ಪಂದಿಸಬೇಕು. ನೂತನ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿ ಮೊದಲಿನ ವ್ಯವಸ್ಥೆಯನ್ನೇ ಅನುಷ್ಠಾನಕ್ಕೆ ತರಬೇಕು’ ಎಂದು ಒತ್ತಾಯಿಸಿದರು

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಉಭಯ ಬಣಗಳ ತುಮಕೂರು ಜಿಲ್ಲಾಧ್ಯಕ್ಷರಾದ ಎ.ಗೋವಿಂದ ರಾಜು, ಆನಂದ ಪಟೇಲ್, ’ಮಾತನಾಡಿ ಪ್ರಧಾನಿ ಮೋದಿ ಮೊಂಡುತನವನ್ನು ಬಿಟ್ಟು ರೈತರ ಜೊತೆ ಮಾತು ನಡೆಸಬೇಕು. ಕೃಷಿ ಸಂಬಂಧಿ ಕಾಯ್ದೆಗಳ ತಿದ್ದುಪಡಿಗೆ ನಮಗೆ ಒಪ್ಪಿಗೆ ಇಲ್ಲ. ಆದ್ದರಿಂದ ಕೃಷಿ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನೇ ರದ್ದುಪಡಿಸಬೇಕು. ಹಲವು ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮೌನಕ್ಕೆ ಜಾರಿರುವುದು ಬೇಜವಾಬ್ದಾರಿಯನ್ನು ತೋರಿಸುತ್ತದೆ. ಹಿಟ್ಲರ್ ಕೂಡ ಸರ್ವಾಧಿಕಾರಿಯಾಗಿ ಆಡಳಿತ ನಡೆಸಿ ಪತನಗೊಂಡ. ಇದನ್ನು ಪ್ರಧಾನಿ ಅರ್ಥ ಮಾಡಿಕೊಂಡರೆ ಒಳ್ಳೆಯದು. ಐದು ಸುತ್ತಿನ ಮಾತುಕತೆಯಲ್ಲೂ ರೈತರ ಬೇಡಿಕೆಯೊಂದನ್ನು ಈಡೇರಿಸಲು ಆಗಿಲ್ಲ. ಬರೀ ಮಾತು ಆಡಿದರೆ ಸಾಲದು. ರೈತರ ಬೇಡಿಕೆ ಈಡೇರಿಸಬೇಕು’ ಎಂದು ಹೇಳಿದರು.

ಆರ್.ಕೆ.ಎಸ್. ಮುಖಂಡ ಎಸ್.ಎನ್.ಸ್ವಾಮಿ, ಎಐಟಿಯುಸಿ ಗಿರೀಶ್, ಎಐಕೆಎಸ್ ಶಶಿಕಾಂತ್, ಎಐಕೆಎಸ್ ಸಿಸಿ ಕಾರ್ಯದರ್ಶಿ ಸಿ.ಯತಿರಾಜು, ಕಾರ್ಮಿಕ ಮುಖಂಡರು ಎಐಡಿಎಸ್ಒ‌ ವಿದ್ಯಾರ್ಥಿ ಸಂಘಟನೆಯ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಇದನ್ನೂ ಓದಿ: ರೈತರ ಹೋರಾಟ ಬೆಂಬಲಿಸಿದ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ಗೆ ಗೃಹ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...