Homeಚಳವಳಿನಮ್ಮ ಬೇಡಿಕೆಗೆ ಹೌದು/ಇಲ್ಲ ಎಂದಷ್ಟೆ ಉತ್ತರಿಸಿ: ಅಮಿತ್ ಶಾರನ್ನು ಭೇಟಿಯಾಗಲಿರುವ ರೈತರು!

ನಮ್ಮ ಬೇಡಿಕೆಗೆ ಹೌದು/ಇಲ್ಲ ಎಂದಷ್ಟೆ ಉತ್ತರಿಸಿ: ಅಮಿತ್ ಶಾರನ್ನು ಭೇಟಿಯಾಗಲಿರುವ ರೈತರು!

ಇದನ್ನು ಬಿಟ್ಟು ನಮಗೆ ಬೇರೆ ಮಾರ್ಗವೂ ಇಲ್ಲ. ನಮ್ಮ ಹೋರಾಟದ ಮುಂದೆ ಕೇಂದ್ರ ಸರ್ಕಾರ ತಲೆಬಾಗಿದೆ" ಎಂದು ರೈತ ಮುಖಂಡ ರುದ್ರು ಸಿಂಗ್ ಮಾನ್ಸಾ ಸಿಂಗ್ ದೆಹಲಿ-ಹರಿಯಾಣ ಗಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ದೇಶದಾದ್ಯಂತ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರನ್ನು ಇಂದು ಗೃಹಮಂತ್ರಿ ಅಮಿತ್ ಶಾ ಮಾತುಕತೆಗೆ ಕರೆದಿದ್ದಾರೆ. “ಇಲ್ಲಿ ರೈತರ ಬೇಡಿಕೆಗಳಿಗೆ ‘ಹೌದು ಅಥವಾ ಇಲ್ಲ’ ಎನ್ನುವ ಉತ್ತರವನ್ನಷ್ಟೆ ನೀಡಿ” ಎಂದು ಒತ್ತಾಯಿಸುತ್ತೇವೆ ಎಂದು ರೈತ ಮುಖಂಡರು ಹೇಳಿದ್ದಾರೆ.

ಕಳೆದ 13 ದಿನಗಳಿಂದ ದೆಹಲಿಯಲ್ಲಿ ದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಇಂದು ಭಾರತ್ ಬಂದ್‌ಗೆ ಕರೆ ನೀಡಲಾಗಿತ್ತು. ಈ ನಡುವೆ ಇಂದು ಸಂಜೆ ಮಾತುಕತೆಗೆ ಬರುವಂತೆ ಪ್ರತಿಭಟನಾ ನಿರತ ರೈತರಿಗೆ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಕೊನೆಗೊಳಿಸಲು ನಾಳೆ ಆರನೇ ಸುತ್ತಿನ ಮಾತುಕತೆಗೆ ಬರುವಂತೆ ಕೇಂದ್ರ ಸರ್ಕಾರ ಕರೆ ನೀಡಿತ್ತು. ಇದಕ್ಕೆ ಒಂದು ದಿನದ ಮೊದಲೇ ಅಮಿತ್ ಶಾ ಅವರ ಈ ನಡೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ರಾಜಕೀಯ ನಿವೃತ್ತಿ ಕೇವಲ ವದಂತಿಯಷ್ಟೇ: ಮಾಜಿ ಸ್ಪೀಕರ್ ರಮೇಶ್ ಕುಮಾರ್

“ಹೌದು ಅಥವಾ ಇಲ್ಲ ಎಂಬ ಉತ್ತರವನ್ನಲ್ಲದೇ ಮತ್ತೇನನ್ನೂ ಬಯಸುವುದಿಲ್ಲ. ಇದನ್ನು ಬಿಟ್ಟು ನಮಗೆ ಬೇರೆ ಮಾರ್ಗವೂ ಇಲ್ಲ. ನಮ್ಮ ಹೋರಾಟದ ಮುಂದೆ ಕೇಂದ್ರ ಸರ್ಕಾರ ತಲೆಬಾಗಿದೆ” ಎಂದು ರೈತ ಮುಖಂಡ ರುದ್ರು ಸಿಂಗ್ ಮಾನ್ಸಾ ಸಿಂಗ್ ದೆಹಲಿ-ಹರಿಯಾಣ ಗಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಮತ್ತೊಬ್ಬ ನಾಯಕ ಗುರ್ನಮ್ ಸಿಂಗ್ ಚಧುನಿ ಮಾತನಾಡಿ, “ಭಾರತ್ ಬಂದ್ ಯಶಸ್ವಿಯಾಗಿದೆ. ಕೇಂದ್ರ ಸರ್ಕಾರಕ್ಕೆ ಈಗ ನಮ್ಮ ಶಕ್ತಿ ತಿಳಿದಿದೆ. ಈಗ ಅದಕ್ಕೆ ಬೇರೆ ದಾರಿ ಇಲ್ಲ” ಎಂದು ಹೇಳಿದರು.

ಇದನ್ನೂ ಓದಿ: ರೈತರನ್ನು ಬೆಂಬಲಿಸಿ ನಾಳೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕಾಲ್ನಡಿಗೆ ಜಾಥಾ

25 ರಾಜ್ಯಗಳಲ್ಲಿ ಸುಮಾರು 10,000 ಸ್ಥಳಗಳಲ್ಲಿ ರಾಷ್ಟ್ರವ್ಯಾಪಿ ಬಂದ್ ಕಂಡುಬಂದಿದೆ ಎಂದು ಸ್ವರಾಜ್ ಇಂಡಿಯಾ ನಾಯಕ ಯೋಗೇಂದ್ರ ಯಾದವ್ ಹೇಳಿದರು.

ದೇಶದಾದ್ಯಂತ ರೈತರು ರಸ್ತೆ ತಡೆದು, ರೈಲು ಸಂಚಾರವನ್ನು ಸ್ಥಗಿತಗೊಳಿಸಿ, ಹೆದ್ದಾರಿಗಳನ್ನು ನಿರ್ಬಂಧಿಸಿ, ಮಾರುಕಟ್ಟೆಗಳನ್ನು ಮುಚ್ಚಿ ಬಂದ್ ಮಾಡುತ್ತಿದ್ದಾರೆ. ಹಲವಾರು ರಾಜ್ಯಗಳಲ್ಲಿ ಬಂದ್ ಬಹುತೇಕ ಯಶಸ್ವಿಯಾಗಿದೆ.

ಇದನ್ನೂ ಓದಿ: ಭಾರತ್ ಬಂದ್: ಇದು ರೈತರು-ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟ – AIKSCC

ಇಂದಿನ ಪ್ರತಿಭಟನೆಗೆ ಕಾಂಗ್ರೆಸ್, ಎಎಪಿ, ಡಿಎಂಕೆ, ಟಿಆರ್‌ಎಸ್ ಸೇರಿದಂತೆ ಹಲವು ಪ್ರತಿಪಕ್ಷಗಳು ಬೆಂಬಲ ನೀಡಿವೆ.

ಇದನ್ನೂ ಓದಿ: ಈ ಕೃಷಿ ಕಾನೂನುಗಳನ್ನು ಕಾಂಗ್ರೆಸ್ ಕೂಡಾ ತರಲು ಬಯಸಿತ್ತು ಎಂದ ಬಿಜೆಪಿ; ತಿರುಗೇಟು ನೀಡಿದ…

ಈ ವಿವಾದಾತ್ಮಕ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಇದುವರೆಗೂ ನಡೆದಿರುವ ಸುಮಾರು 5 ಸುತ್ತಿನ ಮಾತುಕತೆಗಳು ವಿಫಲವಾಗಿವೆ. ಕಳೆದ ಶುಕ್ರವಾರ ಸತತ ಏಳು ಗಂಟೆಗಳ ಕಾಲ ನಡೆದ ಮಾತುಕತೆಯೂ ಕೂಡ ಪರಿಸ್ಥಿತಿಯನ್ನು ತಿಳಿಗೊಳಿಸುವಲ್ಲಿ ವಿಫಲವಾಗಿತ್ತು.

ಕಳೆದ ಸೆಪ್ಟಂಬರ್ ತಿಂಗಳಿನಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ಮೂರು ಹೊಸ ಕಾನೂನುಗಳನ್ನು ಹಿಂಪಡೆಯದ ಹೊರತು ಬೇರೇನೂ ಬೇಕಾಗಿಲ್ಲ ಎಂದು ರೈತ ಸಂಘಟನೆಗಳು ಪಟ್ಟುಹಿಡಿದಿವೆ.

ಇದನ್ನೂ ಓದಿ: ಭೂ ಸುದಾರಣೆ ಕಾಯ್ದೆ ತಿದ್ದುಪಡಿಗೆ ಅಂಗೀಕಾರ ವಿರೋಧಿಸಿ ಪ್ರತಿಭಟನೆ: ಹೋರಾಟಗಾರರ ಬಂಧನ!

ಮಾತುಕತೆಗಳ ನೇತೃತ್ವ ವಹಿಸಿದ್ದ ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, “ಸರ್ಕಾರಕ್ಕೆ ಯಾವುದೇ ಅಹಂ ಇಲ್ಲ. ಆದರೆ ಸರ್ಕಾರ ಈ ಕಾನೂನುಗಳನ್ನು ರದ್ದು ಮಾಡುವುದಿಲ್ಲ” ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಈ ಕರಾಳ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವವರೆಗೂ ಎಲ್ಲ ಸಂಘಟನೆಗಳೂ ತಮ್ಮ ಹೋರಾಟವನ್ನು ಮುಂದುವರಿಸಲಿವೆ” ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ (AIKSCC) ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಭಾರತ್‌‌ ಬಂದ್ | ಕರ್ನಾಟಕದಲ್ಲಿ ಯಶಸ್ವಿ; ಜಿಲ್ಲಾವಾರು ಹೋರಾಟದ ಚಿತ್ರಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...