ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುಲ್ವಾಮಾದ ಟಿಕೆನ್ ಗ್ರಾಮದಲ್ಲಿ 2-3 ಭಯೋತ್ಪಾದಕರು ತಲೆಮರೆಸಿಕೊಂಡಿದ್ದಾರೆ ಎಂದು ಮಾಹಿತಿ ದೊರೆತ ಬೆನ್ನಲ್ಲೇ ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ಒಟ್ಟಿಗೆ ಸೇರಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.
ಇದನ್ನೂ ಓದಿ: ಹತ್ರಾಸ್: ಬಂಧಿತ ಪತ್ರಕರ್ತನ ಮೇಲೆ “ಭಯೋತ್ಪಾದನೆ ನಿಗ್ರಹ” ಕಾನೂನಿನಡಿಯಲ್ಲಿ FIR!
ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ವಕ್ತಾರರು ಖಚಿತಪಡಿಸಿದ್ದಾರೆ.
Jammu & Kashmir: Two unidentified terrorists killed in an encounter with security forces at Tiken area of Pulwama. Operations still underway. More details awaited.
(Visuals deferred by unspecified time) pic.twitter.com/a7VFDynn1v
— ANI (@ANI) December 9, 2020
ಇದನ್ನೂ ಓದಿ: ಅಚ್ಛೇ ದಿನ್ ಮರೆಯಿರಿ: ಭಯೋತ್ಪಾದನೆ, ಪಾಕ್, ಮುಸ್ಲಿಮರ ಬಗ್ಗೆ ಭೀತರಾಗಿರಿ.. – ಮೋದಿಯ ಹೊಸ ಮಂತ್ರ
ಹತ್ಯೆಗೀಡಾದ ಭಯೋತ್ಪಾದಕರ ಗುರುತು ಪೊಲೀಸರಿಂದ ಬಹಿರಂಗಗೊಂಡಿಲ್ಲ.
ಇದು ಕಳೆದ ರಾತ್ರಿಯಿಂದ ಕಾಶ್ಮೀರದಲ್ಲಿ ಸೇನಾ ಪಡೆಗಳು ಪ್ರಾರಂಭಿಸಿದ ಮೂರನೇ ಕಾರ್ಯಾಚರಣೆಯಾಗಿದೆ. ಉತ್ತರ ಕಾಶ್ಮೀರದಲ್ಲಿ ಇತರ ಎರಡು ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಯಿತು. ಆದಾಗ್ಯೂ, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.
ಇದನ್ನೂ ಓದಿ: ಬಲಪಂಥೀಯ ಭಯೋತ್ಪಾದನೆಯ ಬೇರುಗಳು


