Homeಕರ್ನಾಟಕಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ಈಗ ಜಿಯೋ ಕಂಪನಿಯ ಕಡೆಯಿಂದ ಯಾಕೆ ಪೋರ್ಟ್ ಆದಿರಿ ಎಂದು ಫೋನ್ ಮಾಡುತ್ತಾರೆ. ಆಗ 'ನಿಮ್ಮ ಅಂಬಾನಿ ದೇಶಕ್ಕೆ ಅನ್ನ ನೀಡುವ ರೈತರನ್ನು ಮುಳುಗಿಸುತ್ತಿದ್ದಾರೆ. ಹಾಗಾಗಿ ನಾವು ನಿಮ್ಮನ್ನು ಮುಳುಗಿಸಲು ಹೊರಟಿದ್ದೇವೆ' ಎಂದು ಹೇಳಿ.

- Advertisement -
- Advertisement -

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ. ಇಂದು ಬೆಂಗಳೂರಿನ ರೈಲು ನಿಲ್ದಾಣದ ಬಳಿ ಯುವ ರೈತರು ಜಿಯೋ ಸಿಮ್ ಅನ್ನು ಬೇರೆ ಕಂಪನಿಗೆ ಪೋರ್ಟ್ ಮಾಡುವ ಮೂಲಕ, ರಿಲೆಯನ್ಸ್ ಉತ್ಪನ್ನಗಳನ್ನು ಬಳಸದಿರುವುದಾಗಿ ಪ್ರತಿಜ್ಞೆ ಮಾಡಿದರು.

ಯುವ ಮುಖಂಡ ಸರೋವರ್ ಬೆಂಕೀಕರೆ ಮಾತನಾಡಿ “ಅಂಬಾನಿ ಅದಾನಿ ತರದ ಕಾರ್ಪೊರೇಟ್ ಖದೀಮರು ನಮ್ಮ ಕೃಷಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಅವರಿಗಾಗಿಯೇ ಈ ರೈತ ವಿರೋಧಿ ಕಾನೂನುಗಳು ಜಾರಿಯಾಗಿವೆ. ಹಾಗಾಗಿ ಸಾಮೂಹಿಕವಾಗಿ ತಮ್ಮ ಜಿಯೋ ಸಿಮ್‌ ನಂಬರ್‌ಗಳನ್ನು ಬೇರೆ ಕಂಪನಿಗೆ ಪೋರ್ಟ್ ಆಗಬೇಕೆಂದು ದೆಹಲಿ ರೈತರ ಕರೆ ನೀಡಿದ್ದಾರೆ. ಜಿಯೋ ಆರಂಭವಾದಾಗ ದೇಶದ ಪ್ರಧಾನಿ ದೇಶದ 130 ಕೋಟಿ ಜನರಿಗೆ ಅರ್ಪಣೆ ಎಂದು ನಾಚಿಕೆ ಇಲ್ಲದೆ ಮುಖಪುಟ ಜಾಹೀರಾತು ನೀಡಿದರು. ಇದನ್ನು ವಿರೋಧಿಸಿ ನಾವು ಬೇರೆ ಕಂಪನಿಗೆ ಪೋರ್ಟ್ ಆಗೋಣ” ಎಂದರು.

ನಾವು ಈಗ ಪೋರ್ಟ್ ಆಗಿದ್ದೇವೆ. ಹಾಗಾಗಿ ಜಿಯೋ ಕಂಪನಿಯ ಕಡೆಯಿಂದ ಯಾಕೆ ಪೋರ್ಟ್ ಆದಿರಿ ಎಂದು ಫೋನ್ ಮಾಡುತ್ತಾರೆ. ಆಗ ನಿಮ್ಮ ಅಂಬಾನಿ ದೇಶಕ್ಕೆ ಅನ್ನ ನೀಡುವ ರೈತರನ್ನು ಮುಳುಗಿಸುತ್ತಿದ್ದಾರೆ. ಹಾಗಾಗಿ ನಾವು ನಿಮ್ಮನ್ನು ಮುಳುಗಿಸಲು ಹೊರಟಿದ್ದೇವೆ ಎಂದು ಹೇಳಿ ಎಂದು ಸರೋವರ್ ಕರೆ ನೀಡಿದರು.

ನಂತರ ಎಲ್ಲರೂ ಸಾಮೂಹಿಕವಾಗಿ “ಭಾರತದ ಯುವಜನರಾದ ನಾವು  ರೈತರ ಕರೆಗೆ ಓಗೊಟ್ಟು ಅಂಬಾನಿ ಮತ್ತು ಅದಾನಿಯನ್ನು ಬಾಯ್ಕಟ್ ಮಾಡುತ್ತೇವೆ.  ನಮ್ಮ ಜೀವನ ಪರ್ಯಂತ ಅಂಬಾನಿಯ ಜಿಯೋ ಸಿಮ್‌ ಅನ್ನು ಬಳಸುವುದಿಲ್ಲ. ಅಂಬಾನಿಯ ರಿಲೆಯನ್ಸ್ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳುವುದಿಲ್ಲ. ರಿಲೆಯನ್ಸ್‌ ಮಾಲ್‌ಗೆ ಎಡಗಾಲನ್ನು ಸಹ ಹಾಕುವುದಿಲ್ಲ. ಈ ಮೂಲಕ ಭಾರತದ ಪ್ರಜ್ಞಾವಂತ ಯುವಜನರಾದ ನಾವು ರೈತರ ಜೊತೆ ನಿಲ್ಲುತ್ತೇವೆ” ಎಂದು ಪ್ರತಿಜ್ಞೆ ಸ್ವೀಕರಿಸಿದರು.


ಇದನ್ನೂ ಓದಿ: ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಾನು ನನ್ನ ರೈತರನ್ನು ಬೆಂಬಲಿಸುತ್ತೇನೆ.
    ನಾನು ಇನ್ನುಮುಂದೆ ಯಾವುದೇ ರೀತಿಯ.ಸಿಮ್, ಪೆಟ್ರೋಲ್, ಹಾಗೂ ಅವರ ಸರಕುಗಳನ್ನ ಬಳಸುವುದಿಲ್ಲ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...