Homeಚಳವಳಿಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ: ಬೆಂಗಳೂರಿನಲ್ಲಿ ಬೃಹತ್ ಹೋರಾಟ

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ: ಬೆಂಗಳೂರಿನಲ್ಲಿ ಬೃಹತ್ ಹೋರಾಟ

ವಿವಿಧ ರಾಜ್ಯಗಳಲ್ಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಗಣಿಸಲಾಗಿದೆ. ಇತ್ತೀಚೆಗೆ ಆಂದ್ರ ಪ್ರದೇಶ ಸರ್ಕಾರವೂ ಈ ತೀರ್ಮಾನ ತೆಗೆದುಕೊಂಡಿದೆ. ಅದು ಕರ್ನಾಟಕದಲ್ಲಿಯೂ ಜಾರಿಯಾಗಬೇಕು

- Advertisement -
- Advertisement -

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮತ್ತು ಬೆಂಗಳೂರು ನಗರ ಸಾರಿಗೆ ಸಂಸ್ಥೆ (BMTC) ಸೇರಿದಂತೆ ವಿವಿಧ ನಿಗಮಗಳ ಅಡಿಯಲ್ಲಿ ನೌಕರರಾಗಿ ದುಡಿಯುತ್ತಿರುವ ಸಾವಿರಾರು ಜನರು ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ ಎಂದು ಒತ್ತಾಯಿಸಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು.

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು, ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಸಾರಿಗೆ ನೌಕರರಿಗೂ ನೀಡಬೇಕು ಮತ್ತು ಕೊರೊನಾ ಸಮಯದಲ್ಲಿ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ ಕೊರೊನಾ ವಾರಿಯರ್ಸ್ ಜೀವವಿಮೆ ಮೊತ್ತ ನೀಡಬೇಕೆಂದು ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ವಿಧಾನಸೌಧ ಚಲೋ ನಡೆಸಿದರು.

ಈಗ ನಾವು ಸರ್ಕಾರಿ ನೌಕರರೂ ಅಲ್ಲ, ಖಾಸಗಿ ನೌಕರರು ಅಲ್ಲ. ಮಧ್ಯದಲ್ಲಿ ನಿಗಮ, ಸಂಸ್ಥೆಗಳ ಅಡಿಯಲ್ಲಿ ದುಡಿಯುತ್ತಿದ್ದು ಹೆಚ್ಚಿನ ಸೌಲಭ್ಯಗಳು ದೊರಕುತ್ತಿಲ್ಲ. ಸಂಸ್ಥೆಗೆ ನಷ್ಟವಾದರೆ ನಮಗೆ ಸಂಬಳವನ್ನು ಸಕಾಲಕ್ಕೆ ನೀಡುವುದಿಲ್ಲ. ಹಾಗಾಗಿ ನಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ವಿವಿಧ ರಾಜ್ಯಗಳಲ್ಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಗಣಿಸಲಾಗಿದೆ. ಇತ್ತೀಚೆಗೆ ಆಂದ್ರ ಪ್ರದೇಶ ಸರ್ಕಾರವೂ ಈ ತೀರ್ಮಾನ ತೆಗೆದುಕೊಂಡಿದೆ. ಅದು ಕರ್ನಾಟಕದಲ್ಲಿಯೂ ಜಾರಿಯಾಗಬೇಕೆಂದು ಸಾರಿಗೆ ನೌಕರರು ಒತ್ತಾಯಿಸಿದರು.

ಸಾರಿಗೆ ನೌಕರರು ಸರ್ಕಾರಿ ನೌಕರರಾಗುವ ಹೋರಾಟದ ಒಕ್ಕೂಟ ಬ್ಯಾನರ್‌ನಡಿ ಒಂದುಗೂಡಿದ ಸಾವಿರಾರು ನೌಕರರು, ಅವರ ಕುಟಂಬ ಸದಸ್ಯರು ‘ಸರ್ಕಾರಿ ನೌಕರರಾಗುವುದು ಬೇಡಿಕೆಯಲ್ಲ, ಅದು ನಮ್ಮ ಹಕ್ಕು; ಸಾರಿಗೆ ನೌಕರರ ನಡಿಗೆ- ಸರ್ಕಾರಿ ನೌಕರರಾಗುವ ಕಡೆಗೆ, ಆಶ್ವಾಸನೆ ಸಾಕು -ಘೋಷಣೆ ಬೇಕು ಎಂದು ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.

ಕೊರೊನಾ ಸಂಕಷ್ಟದಲ್ಲಿಯೂ ಸಾರಿಗೆ ನೌಕರರು ಕೆಲಸ ನಿರ್ವಹಿಸಿದ್ದಾರೆ. ಸುಮಾರು 50 ಮಂದಿ ಸೋಂಕಿಗೆ ಒಳಪಟ್ಟು ಮೃತಪಟ್ಟಿದ್ದಾರೆ. ಇಂದು ಬಹಳಷ್ಟು ಜನ ದುಡಿಯದೆ ಸರ್ಕಾರಿ ನೌಕರರೆನಿಸಿಕೊಳ್ಳುತ್ತಿದ್ದಾರೆ. ಆದರೆ ನಾವು ಕಷ್ಟಪಟ್ಟು ದುಡಿದರೂ ಸರ್ಕಾರಿ ನೌಕರರಾಗಿಲ್ಲ ಎಂದು ಅಳಲು ವ್ಯಕ್ತಪಡಿಸಿದರು.


ಇದನ್ನೂ ಓದಿ: ರೈತರ ‘ಬಾಯ್ಕಾಟ್ ರಿಲೆಯನ್ಸ್’ ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...