Homeಚಳವಳಿನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಡಿಸೆಂಬರ್ 12 ರಿಂದ ದೆಹಲಿ-ಜೈಪುರ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ರೈತ ಸಂಘಗಳು ಎಚ್ಚರಿಸಿವೆ.

- Advertisement -
- Advertisement -

ನೂತನ ಸಂಸತ್ ಭವನ ನಿರ್ಮಾಣಕ್ಕೆ ಕಾರ್ಯಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅಡಿಗಲ್ಲು ಹಾಕಿದ್ದಾರೆ.  ಇಂಡಿಯಾ ಗೇಟ್ ಬಳಿ ದೆಹಲಿಯ ಹೃದಯಭಾಗದಲ್ಲಿ ಹೊಸ ಸಂಸತ್ ಕಟ್ಟಡದ ಭೂಮಿಪೂಜೆಯನ್ನು ನೆರವೇರಿಸಿರುವ ಪ್ರಧಾನಿ ಮೋದಿ, ನಂತರ ಅಡಿಗಲ್ಲು ಹಾಕಿದ್ದಾರೆ.

ಸಂಸತ್ತಿನ ಹೊಸ ಕಟ್ಟಡವು 20,000 ಕೋಟಿ ರೂಪಾಯಿಗಳ ಸೆಂಟ್ರಲ್ ವಿಸ್ತಾ ಯೋಜನೆಯ ಪ್ರಮುಖ ಭಾಗವಾಗಿದೆ. ತ್ರಿಕೋನ ಆಕಾರದಲ್ಲಿ ನಿರ್ಮಾಣವಾಗಲಿರುವ ಸಂಸತ್ ಭವನದ ಜತೆಗೆ ಕೇಂದ್ರೀಯ ಸಚಿವಾಲಯಗಳು ಮತ್ತು ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ 3 ಕಿ.ಮೀ ಉದ್ದದ ರಾಜ್‌ಪತ್‌ ಮಾರ್ಗವನ್ನು ಪುನರುಜ್ಜೀವನಗೊಳಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಭೂಮಿ ಪೂಜೆ ಸಮಾರಂಭವು ಮಧ್ಯಾಹ್ನ 12:55 ಕ್ಕೆ ನಡೆಯಿತು. ಮಧ್ಯಾಹ್ನ 1 ಗಂಟೆಗೆ ಸಂಸತ್ ಭವನಕ್ಕೆ ಅಡಿಪಾಯ ಹಾಕಲಾಗಿದೆ.

ಆದರೆ, ಪ್ರಧಾನಿಯವರೇ ಅಡಿಗಲ್ಲು ಹಾಕಿದರು ಕೂಡ ಸಂಸತ್ ಭವನದ ನಿರ್ಮಾಣವನ್ನು ತಕ್ಷಣ ಪ್ರಾರಂಭಿಸಲು ಸಾಧ್ಯವಿಲ್ಲ. ಏಕೆಂದರೆ, ಈ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇನ್ನು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ.

ಇದನ್ನೂ ಓದಿ: ಸೆಂಟ್ರಲ್ ವಿಸ್ತಾ ಹೊಸ ಸಂಸತ್ ಭವನಕ್ಕೆ ಡಿಸೆಂಬರ್‌ನಲ್ಲಿ ಪ್ರಧಾನಿಯಿಂದ ಅಡಿಪಾಯ!

ಉದ್ದೇಶಿತ ನಾಲ್ಕು ಅಂತಸ್ತಿನ ಕಟ್ಟಡವು 64,500 ಚದರ ಮೀಟರ್ ವಿಸ್ತೀರ್ಣದಲ್ಲಿದ್ದು, ಅಂದಾಜು 971 ಕೋಟಿ ರೂಪಾಯಿ ವೆಚ್ಚವಾಗುತ್ತದೆ. ಆಗಸ್ಟ್ 2022 ರಲ್ಲಿ ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ನಿರ್ಮಾಣವು ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಇತ್ತ, ದೆಹಲಿಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದರಿಂದ ದೆಹಲಿಯ ಗಡಿಯಲ್ಲಿ ಟ್ರಾಫಿಕ್ ಜಾಮ್‌ಗಳು ಮುಂದುವರೆದಿವೆ. ನಿನ್ನೆ ಕೇಂದ್ರ ಸರ್ಕಾರ ಕಳುಹಿಸಿದ್ದ ವಿವಾದಿತ ಕೃಷಿ ಕಾನೂನುಗಳ ಬದಲಾವಣೆಯ ಪ್ರಸ್ತಾಪವನ್ನು ರೈತರು ನಿರಾಕರಿಸಿದ್ದಾರೆ.

ಹರಿಯಾಣಕ್ಕೆ ಹೋಗುವ ಮತ್ತು ಅಲ್ಲಿಂದ ಪ್ರಯಾಣಿಸುವ ಪ್ರಯಾಣಿಕರು ದೌರಾಲಾ, ಕಪಶೇರಾ, ಬದುಸರೈ, ರಾಜೋಕ್ರಿ ಎನ್ಎಚ್ -8, ಬಿಜ್ವಾಸನ್, ಪಾಲಂ ವಿಹಾರ್ ಮತ್ತು ದುಂಡಾಹೇರಾ ಗಡಿಗಳಲ್ಲಿ ಒಂದೇ ಮಾರ್ಗ ಬಳಸಬಹುದು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಡಿಸೆಂಬರ್ 12 ರಿಂದ ದೆಹಲಿ-ಜೈಪುರ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ರೈತ ಸಂಘಗಳು ಎಚ್ಚರಿಸಿವೆ. ಜೊತೆಗೆ ನರೇಂದ್ರ ಮೋದಿ ಸರ್ಕಾರ ಉತ್ತೇಜನ ನೀಡುತ್ತಿರುವ ಅಂಬಾನಿಯ ರಿಲೆಯನ್ಸ್ ಉತ್ಪನ್ನಗಳ ವಿರುದ್ಧ ಕರೆ ನೀಡಿದ್ದ ಬಾಯ್ಕಾಟ್ ಅಭಿಯಾನಕ್ಕೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ.

ದೇಶದ ಅನ್ನದಾತರು ರಸ್ತೆಗೆ ಬಂದು ನ್ಯಾಯಕ್ಕಾಗಿ ಆಗ್ರಹಿಸುತ್ತಿರುವಾಗ, ಹಸಿವು, ಬಡತನ ದೇಶದಲ್ಲಿ ತಾಂಡವವಾಡುತ್ತಿರುವಾಗ ನೂತನ ಭವನಕ್ಕೆ ಕೋಟ್ಯಂತರ ರೂಪಾಯಿ ವ್ಯಯಿಸುತ್ತಿರುವ ಕುರಿತು ಆಕ್ರೋಶ ಕೂಡ ವ್ಯಕ್ತವಾಗಿದೆ.

ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು, ’ಹೊಸ ಸಂಸತ್ ಭವನದ ಶುಭಾಷಯಗಳು!!
ಎಲ್ಲಾ ರಾಜಕೀಯ ಮುಖಂಡರಿಗೆ ಮತ್ತು ವಿಶೇಷವಾಗಿ ಸರ್ಕಾರಕ್ಕೆ ನಾಚಿಕೆಯಾಗಬೇಕು. ಸುಪ್ರೀಂ ಕೋರ್ಟ್ ನಿಷೇಧಿಸಿದ ನಂತರವೂ ಉದ್ಘಾಟನೆ ಮಾಡುವವರಿಗೆ ನಾಚಿಕೆಯಾಗಬೇಕು’ ಎಂದಿದ್ದಾರೆ.


ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...

ಸ್ಪೇನ್‌ನಲ್ಲಿ ಅತಿ ವೇಗದ ರೈಲುಗಳ ನಡುವೆ ಡಿಕ್ಕಿ; ಕನಿಷ್ಠ 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎರಡು ಅತಿ ವೇಗದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಪೇನ್‌ನ ಎಬಿಸಿ (ಎಬಿಸಿ) ಸುದ್ದಿ ಸಂಸ್ಥೆ ವರದಿ ಮಾಡಿದೆ....

ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್...