Homeಕರ್ನಾಟಕಗೋಹತ್ಯೆ ನಿಷೇಧ ಮಸೂದೆ: ಆತಂಕ ವ್ಯಕ್ತಪಡಿಸಿದ ಮೃಗಾಲಯದ ಅಧಿಕಾರಿಗಳು!

ಗೋಹತ್ಯೆ ನಿಷೇಧ ಮಸೂದೆ: ಆತಂಕ ವ್ಯಕ್ತಪಡಿಸಿದ ಮೃಗಾಲಯದ ಅಧಿಕಾರಿಗಳು!

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಪ್ರತಿ ದಿನಕ್ಕೆ ಸುಮಾರು 600 ಕೆ.ಜಿ ಗೋಮಾಂಸ ಅಗತ್ಯವಿದ್ದರೆ, ಮೈಸೂರು ಮೃಗಾಲಯಕ್ಕೆ ಸುಮಾರು 350 ಕೆ.ಜಿ. ಗೋಮಾಂಸದ ಅಗತ್ಯವಿದೆ...

- Advertisement -
- Advertisement -

ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಮತ್ತು ದನಗಳ ಸಂರಕ್ಷಣೆ ಮಸೂದೆ-2020 ವಿಧಾನ ಸಭೆಯಲ್ಲಿ ಬುಧವಾರ ಅಂಗೀಕಾರವಾಗಿದೆ. ಇದರ ಕುರಿತು ಕರ್ನಾಟಕದಲ್ಲಿನ ಮೃಗಾಲಯದ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. 1964 ರ ಗೋಹತ್ಯೆ ಕಾಯ್ದೆಯನ್ನು ಈ ಮಸೂದೆಯ ಮೂಲಕ ಪರಿಷ್ಕೃತಗೊಳಿಸಲಾಗಿದೆ.

“ಮಾಂಸಾಹಾರಿ ಪ್ರಾಣಿಗಳಿಗೆ ಗೋಮಾಂಸವನ್ನು ಸಂಗ್ರಹಿಸುವಾಗ ನಾವು ಇದೇ ರೀತಿಯ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇವೆ. ಹಾಲುಕರೆಯುವ ಹಸುಗಳನ್ನು ಸಂಗ್ರಹಿಸುತ್ತಿರಲಿಲ್ಲ. ಎಮ್ಮೆ ಮತ್ತು ಎತ್ತುಗಳ ಮಾಂಸವನ್ನು ಮಾತ್ರ ಪ್ರಾಣಿಗಳಿಗೆ ನೀಡುವುದಾಗಿ ಸಿರ್ಧರಿಸಲಾಗಿದೆ. ಇದನ್ನು ಈಗಲೂ ಅನುಸರಿಸಲಾಗುವುದು. ಆದಾಗ್ಯೂ, ಸರ್ಕಾರದಿಂದ ಮಾರ್ಗಸೂಚಿಗಾಗಿ ಕಾಯುತ್ತಿದ್ದೇವೆ” ಎಂದು ಕರ್ನಾಟಕದ ಮೃಗಾಲಯ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ, ಲವ್ ಜಿಹಾದ್ ತಡೆ ಕಾಯ್ದೆ ತರುವುದು ನೀತಿಸಂಹಿತೆಯ ಉಲ್ಲಂಘನೆ: ಸಿದ್ದರಾಮಯ್ಯ

ಹುಲಿಗಳು, ಸಿಂಹಗಳು ಮತ್ತು ಚಿರತೆಗಳನ್ನು ಪೋಷಿಸಲು ಪ್ರಾಣಿಸಂಗ್ರಹಾಲಯಗಳಿಗೆ ಪ್ರತಿದಿನ ದೊಡ್ಡ ಪ್ರಮಾಣದ ಗೋಮಾಂಸ ಬೇಕಾಗುತ್ತದೆ. ಎಲ್ಲಾ ಪ್ರಾಣಿಸಂಗ್ರಹಾಲಯಗಳು ವಾರದಲ್ಲಿ ಆರು ದಿನಗಳು (ಮಂಗಳವಾರ ಹೊರತುಪಡಿಸಿ) ಪ್ರಮಾಣೀಕೃತ ಪೂರೈಕೆದಾರರಿಂದ ಗೋಮಾಂಸವನ್ನು ಸಂಗ್ರಹಿಸುತ್ತವೆ. ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ದಿನಕ್ಕೆ ಸುಮಾರು 600 ಕೆ.ಜಿ ಗೋಮಾಂಸ ಅಗತ್ಯವಿದ್ದರೆ, ಮೈಸೂರು ಮೃಗಾಲಯಕ್ಕೆ ಸುಮಾರು 350 ಕೆ.ಜಿ. ಗೋಮಾಂಸದ ಅಗತ್ಯವಿದೆ.

ಇದನ್ನೂ ಓದಿ:  ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

“ಆದರೆ ಈ ಹೊಸ ಮಸೂದೆ ಕೆಲವು ತೊಡಕುಗಳಿಗೆ ಕಾರಣವಾಗಿದೆ. ಸರ್ಕಾರ ನಿಯಮಗಳನ್ನು ರೂಪಿಸುವವರೆಗೆ ನಾವು ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಉತ್ತರಿಸಲಾಗದ ಹಲವು ಪ್ರಶ್ನೆಗಳಿವೆ. ಹಾಗಾಗಿ ನಮಗೆ ಸ್ಪಷ್ಟತೆ ಬೇಕು” ಎಂದು ಅಧಿಕಾರಿ ಹೇಳಿದರು.

“ಗೋವನ್ನು ವಧಿಸ ಬೇಕಾದರೆ ಪಶುವೈದ್ಯರ ಅನುಮತಿಪಡೆಯಬೇಕು ಎನ್ನುವುದು ಕಳವಳಕಾರಿಯಾಗಿದೆ. ಇದು ಕಾನೂನುಬಾಹಿರ ಚಟುವಟಿಕೆಗಳಿಗೆ ಕಾರಣವಾಗಬಹುದು. ಮೃಗಾಲಯ ಪ್ರಾಧಿಕಾರ ಮತ್ತು ಪಶುಸಂಗೋಪನಾ ಇಲಾಖೆಯ ಕೆಲವು ಅಧಿಕಾರಿಗಳು ಪ್ರಮಾಣೀಕರಣದ ವಿಧಾನದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ 2020ನೆ ಸಾಲಿನ ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕದ ಪ್ರಕಾರ, “13 ವರ್ಷದೊಳಗಿನ ಹಸು, ಹಸುವಿನ ಕರು ಮತ್ತು ಗೂಳಿ, ಎತ್ತು, ಎಮ್ಮೆ ಅಥವಾ ಕೋಣವನ್ನು ಹತ್ಯೆ ಮಾಡುವಂತಿಲ್ಲ. ಆದರೆ, ಸಾರ್ವಜನಿಕ ಹಿತಾಸಕ್ತಿಯಿಂದ ಅಥವಾ ಗುಣಪಡಿಸಲಾಗದಂತಹ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷ ವಯಸ್ಸಿನ ಮೇಲ್ಪಟ್ಟ ಎಮ್ಮೆಯನ್ನು ಮಾತ್ರ ರಾಜ್ಯ ಸರಕಾರವು ಅಧಿಕೃತಗೊಳಿಸಿದ ಪಶುವೈದ್ಯಾಧಿಕಾರಿಯ ಪ್ರಮಾಣೀಕರಣದೊಂದಿಗೆ ವಧಿಸಲು ಅವಕಾಶ ಕಲ್ಪಿಸಬಹುದು.

ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಯಾರಾದರೂ ಗೋಹತ್ಯೆ ಮಾಡಿದರೆ ಕನಿಷ್ಠ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಒಂದು ಜಾನುವಾರು ಹತ್ಯೆ ಮಾಡಿದರೆ ಕನಿಷ್ಠ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರಗೆ ದಂಡ ವಿಧಿಸಬಹುದು. ಪುನರಾವರ್ತಿತ ಅಪರಾಧಕ್ಕೆ 1 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳವರೆಗೆ ದಂಡದ ಜೊತೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.


ಇದನ್ನೂ ಓದಿ: ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...