Homeಮುಖಪುಟಯುಪಿಎ ಅಧ್ಯಕ್ಷ ಸ್ಥಾನಕ್ಕೆ ಎನ್‌ಸಿಪಿ ಹಿರಿಯ ಮುಖಂಡ ಶರದ್ ಪವಾರ್?

ಯುಪಿಎ ಅಧ್ಯಕ್ಷ ಸ್ಥಾನಕ್ಕೆ ಎನ್‌ಸಿಪಿ ಹಿರಿಯ ಮುಖಂಡ ಶರದ್ ಪವಾರ್?

ಸೋನಿಯಾ ಗಾಂಧಿ ನಿವೃತ್ತರಾದರೆ ಯುಪಿಎ ಮಿತ್ರ ಪಕ್ಷಗಳಲ್ಲಿ ಶರದ್ ಪವಾರ್ ಹಿರಿಯರಾಗಿರುವುದರಿಂದ, ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಮತ್ತು ಮೋದಿ ಆಡಳಿತದ ವಿರುದ್ಧ ಬಲವಾದ ಹೋರಾಟವನ್ನು ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬಹುದು...

- Advertisement -
- Advertisement -

ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

ಯುಪಿಎ ಮಿತ್ರಪಕ್ಷಗಳಲ್ಲಿರುವವರಲ್ಲಿ ಶರದ್ ಪವಾರ್ ಅತ್ಯಂತ ಹಿರಿಯ ನಾಯಕರಾಗಿದ್ದು, ಅವರು ಎಲ್ಲಾ ರಾಜಕೀಯ ಪಕ್ಷಗಳ ನಾಯಕರೊಂದಿಗೂ ಸೌಹಾರ್ದಯುತ ಸಂಬಂಧವನ್ನು ಹೊಂದಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

ಕಾಂಗ್ರೆಸ್ ಮೂಲಗಳ ಪ್ರಕಾರ, ತೀವ್ರ ಶ್ವಾಸಕೋಶದ ಸೋಂಕಿನಿಂದಾಗಿ ಬಳಲುತ್ತಿರುವ ಸೋನಿಯಾ ಗಾಂಧಿ ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದಲು ಬಯಸುತ್ತಿದ್ದಾರೆ. ಆದರೆ 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಸಾಧನೆ ತೋರಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ಸೋನಿಯಾ ಗಾಂಧೀ ಹಂಗಾಮಿ ಅಧ್ಯಕ್ಷರಾಗಲು ಒಪ್ಪಿದರು. ಆದರೂ 2019 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಅವರು ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ದೇಶ ಮುನ್ನಡೆಸುವ ಎಲ್ಲಾ ಅರ್ಹತೆ ಶರದ್ ಪವಾರ್ ಅವರಿಗಿದೆ: ಸಂಜಯ್ ರಾವತ್

“ಯುಪಿಎ ಒಕ್ಕೂಟದಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿದೆ. ಆದ್ದರಿಂದ, ಅಧ್ಯಕ್ಷರು ಕಾಂಗ್ರೆಸ್‌ನವರೇ ಆಗಿರಬೇಕು. ಆದರೆ ಸೋನಿಯಾ ಗಾಂಧಿ ನಿವೃತ್ತರಾದರೆ ಯುಪಿಎ ಮಿತ್ರ ಪಕ್ಷಗಳಲ್ಲಿ ಶರದ್ ಪವಾರ್ ಹಿರಿಯರಾಗಿರುವುದರಿಂದ, ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಮತ್ತು ಮೋದಿ ಆಡಳಿತದ ವಿರುದ್ಧ ಬಲವಾದ ಹೋರಾಟವನ್ನು ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬಹುದು” ಎಂದು ಮೂಲಗಳು ತಿಳಿಸಿವೆ.

ಆದರೆ, ವಿದೇಶಿ ಮೂಲದವರಾಗಿದ್ದ ಸೋನಿಯಾ ಗಾಂಧಿಯವರನ್ನು ಪಕ್ಷಕ್ಕೆ ಕರೆತಂದದ್ದಕ್ಕೆ ಶರದ್ ಪವಾರ್ 1991 ರಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಆಗಿನಿಂದಲೂ ಪವಾರ್ ಮತ್ತು ಸೋನಿಯಾ ನಡುವೆ ವಿಶ್ವಾಸಾರ್ಹ ಕೊರತೆ ಮುಂದುವರೆದಿದೆ.

ಇದನ್ನೂ ಓದಿ: ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ

ಆದಾಗ್ಯೂ, ಎನ್‌ಸಿಪಿ ಮತ್ತು ಕಾಂಗ್ರೆಸ್ ಎರಡೂ ಯುಪಿಎನಲ್ಲಿ ಯಾವುದೇ ನಾಯಕತ್ವ ಬದಲಾವಣೆಯ ಕುರಿತ ವಿಷಯವನ್ನು ಅಲ್ಲಗಳೆದಿದ್ದು, “ಅಂತಹ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಯುಪಿಎ ಒಳಗೆ ಯಾವುದೇ ಚರ್ಚೆ ನಡೆದಿಲ್ಲ” ಎಂದು ಎನ್‌ಸಿಪಿ ಮುಖ್ಯ ವಕ್ತಾರ ಮಹೇಶ್ ತಪಾಸೆ ಹೇಳಿದ್ದಾರೆ.

ರೈತರ ಆಂದೋಲನದಿಂದ ಗಮನವನ್ನು ಬೇರೆಡೆ ಸೆಳೆಯಲು ಪಟ್ಟಭದ್ರ ಹಿತಾಸಕ್ತಿಗಳಿಂದ ಈ ಸುದ್ದಿ ಹರಡಿದೆ ಎಂದು ಕಾಂಗ್ರೆಸ್ ಹೇಳಿದೆ.


ಇದನ್ನೂ ಓದಿ: ಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Vilas Latthe
    modala kelasa party merger.. aste satya>> < YIVARWELLA BITTU HODAVARE ALLAVE?!>.
    · Reply · Share · 2 m
    Vilas Latthe
    we feel party musytnot be devided for the cause of presaidentship… I. nijalinga cong.. II. DEVARASJ CONG. now if time odd!

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...