ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ನಿನ್ನೆ ದಾಳಿ ನಡೆದಿದ್ದು, ಕೆಲವು ದುಷ್ಕರ್ಮಿಗಳು ಇಟ್ಟಿಗೆ, ಕಲ್ಲು ಮತ್ತು ಕೋಲುಗಳಿಂದ ಹಲ್ಲೆ ನಡೆಸಿದ್ದರು. ಗೃಹಸಚಿವಾಲಯದ ಆದೇಶದಂತೆ ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಜಗದೀಪ್ ಧಂಕರ್ ಕೇಂದ್ರ ಸರ್ಕಾರಕ್ಕೆ ಇದರ ಕುರಿತು ವರದಿ ಸಲ್ಲಿಸಿದ್ದಾರೆ.
ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಕುರಿತು ವಿಚಾರಣೆಗೆ ನಡೆಸಲು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಡಿಸೆಂಬರ್ 14 ರಂದು ಕರೆಯಲಾಗಿದೆ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: PFI ಕಚೇರಿಗಳ ಮೇಲೆ ಇಡಿ ದಾಳಿ ಜನರ ಗಮನ ಬೇರೆಡೆಗೆ ಸೆಳೆಯುವ ಯತ್ನ: ಮುಹಮ್ಮದ್ ಶಾಕಿಫ್
ಕೋಲ್ಕತ್ತದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿದೆ.
ನಡ್ಡಾ ಅವರ ಜತೆಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರ ಕಾರಿನ ಮೇಲೂ ದಾಳಿ ಮಾಡಲಾಯಿತು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಬಿಜೆಪಿ ಮುಖಂಡರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಮಾಧ್ಯಮದವರಿದ್ದ ವಾಹನಗಳಿಗೂ ಹಾನಿಯಾಗಿದೆ ಎಂದೂ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ದಾಳಿ ಮಾಡಿದ ಪೊಲೀಸರು; ಇಲ್ಲಿದೆ ವೀಡಿಯೋ!
ಈ ಘಟನೆ ಬಗ್ಗೆ ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ಇದನ್ನು ‘ಯೋಜಿತ ಪಿತೂರಿ’ ಎಂದು ಕರೆದು, ಭದ್ರತಾ ವೈಫಲ್ಯದ ಆರೋಪ ಕುರಿತಂತೆ ವರದಿ ಸಲ್ಲಿಸಿ ಎಂದು ಪಶ್ಷಿಮ ಬಂಗಾಳ ರಾಜ್ಯಪಾಲರಿಗೆ ಸೂಚನೆ ನೀಡಿದ್ದರು.
ಇದು ಪ.ಬಂಗಾಳದಲ್ಲಿನ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವವುದಕ್ಕೆ ಸ್ಪಷ್ಟ ಉದಾಹರಣೆ ಎಂದಿರುವ ಬಿಜೆಪಿ, ಇದಕ್ಕೆ ಕಾರಣ ಮಮತಾ ಬ್ಯಾನರ್ಜಿಯವರ ಟಿಎಂಸಿ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಅರ್ನಾಬ್, ಕಂಗನಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದ ಶಿವಸೇನೆ ಶಾಸಕನ ಮನೆ ಮೇಲೆ ಇ.ಡಿ ದಾಳಿ!
ಅಮಿತ್ ಶಾ ಡಿಸೆಂಬರ್ 19 ಮತ್ತು 20 ರಂದು ಕೋಲ್ಕತ್ತಾಗೆ ಪ್ರಯಾಣಿಸಬಹುದು ಎಂದು ಮೂಲಗಳು ತಿಳಿಸಿವೆ. ಈ ಘಟನೆಯ ಬಗ್ಗೆ ಬಿಜೆಪಿ ಪಕ್ಷವು ಮಮತಾ ಬ್ಯಾನರ್ಜಿ ಸರ್ಕಾರವನ್ನು ಆಕ್ರಮಣಕಾರಿಯಾಗಿ ತರಾಟೆಗೆ ತೆಗೆದುಕೊಳ್ಳಲು ಸಿದ್ಧತೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.
ತಮ್ಮ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ ಮಮತಾ, “ಆರು ತಿಂಗಳಲ್ಲಿ ಬಂಗಾಳ ಚುನಾವಣೆ ಬರುತ್ತಿದೆ. ಇದರ ರಾಜಕೀಯ ಪಿತೂರಿಯ ಭಾಗವಾಗಿ ಬಿಜೆಪಿ ಈ ರೀತಿ ಆಧಾರರಹಿತ ದಾಳಿ ನಡೆಸುತ್ತಿದೆ” ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ…
“ನೀವು ರಾಜ್ಯದ ಭದ್ರತಾ ಪಡೆಗಳನ್ನು ಅವಲಂಬಿಸುವ ಬದಲು, ಕೇಂದ್ರದ ಭದ್ರತಾ ಪಡೆಗಳನ್ನು ಅವಲಂಬಿಸಿದ್ದೀರಿ. ಈ ದಾಳಿಯು ಯೋಜಿತ ಕೃತ್ಯ ಇರಬಹುದು. ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದ್ದೇನೆ. ಆದರೆ, ನಾನು ಎಂದಿಗೂ ಸುಳ್ಳನ್ನು ಹೇಳುವುದಿಲ್ಲ. ಪ್ರತಿದಿನ ಬಿಜೆಪಿ ಕಾರ್ಯಕರ್ತರು ಬಂದೂಕಿನೊಂದಿಗೆ ರ್ಯಾಲಿಗೆ ಬರುತ್ತಾರೆ. ತಮ್ಮನ್ನು ತಾವೇ ಹೊಡೆದುಕೊಂಡು ನಮ್ಮ ಪಕ್ಷದ ಕಾರ್ಯಕರ್ತರನ್ನು ದೂಷಿಸುತ್ತಿದ್ದಾರೆ” ಎಂದು ಮಮತಾ ಬ್ಯಾನರ್ಜಿ ಆಶ್ಚರ್ಯ ವ್ಯಕ್ತಪಡಿಸಿದರು.
ಇದನ್ನೂ ಓದಿ: ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ


