Homeಮುಖಪುಟಜೆ.ಪಿ ನಡ್ಡಾ ಕಾರಿನ ಮೇಲೆ ದಾಳಿ: ವಿಚಾರಣೆಗೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದ ಪಶ್ಚಿಮ ಬಂಗಾಳ

ಜೆ.ಪಿ ನಡ್ಡಾ ಕಾರಿನ ಮೇಲೆ ದಾಳಿ: ವಿಚಾರಣೆಗೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದ ಪಶ್ಚಿಮ ಬಂಗಾಳ

ಕೋಲ್ಕತ್ತದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಬಿಜೆಪಿ ಆರೋಪಿಸಿತ್ತು

- Advertisement -
- Advertisement -

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯ ಹಿನ್ನಲೆಯಲ್ಲಿ, ಪಶ್ಚಿಮ ಬಂಗಾಳದ ಪೊಲೀಸ್ ಮಹಾ ನಿರ್ದೇಶಕ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ವಿಚಾರಣೆಗೆ ಹಾಜರಾಗಬೇಕು ಎಂಬ ಸಮನ್ಸ್‌ಗೆ ಪಶ್ಚಿಮ ಬಂಗಾಳ ಸರ್ಕಾರವು ಪ್ರತಿ‌ಕ್ರಿಯಿಸಿದ್ದು, ಯಾವುದೇ ಅಧಿಕಾರಿ ದೆಹಲಿಗೆ ತೆರಳಿ ಗೃಹ ಸಚಿವಾಲಯದ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಕೋಲ್ಕತ್ತದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿತ್ತು. ಭದ್ರತಾ ವೈಫಲ್ಯದ ಕುರಿತು ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಸರ್ಕಾರದಿಂದ ವರದಿ ಕೇಳಿ, ರಾಜ್ಯದ ಪೊಲೀಸ್ ಮಹಾ ನಿರ್ದೇಶಕ ಹಾಗೂ ಹಿರಿಯ ಅಧಿಕಾರಿಗಳು ಕೇಂದ್ರ ಗೃಹ ಸಚಿವಾಲಯದ ಎದುರು ವಿಚಾರಣೆಗೆ ಹಾಜರಾಗಬೇಕು ಎಂದು ಕೇಂದ್ರ ನೋಟಿಸು ಜಾರಿ ಮಾಡಿತ್ತು.

ಇದನ್ನೂ ಓದಿ: ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ: ಗೃಹ ಸಚಿವಾಲಯದ ಮುಂದೆ ಹಾಜರಾಗಲು ಡಿಜಿಪಿಗೆ ನೋಟಿಸ್!

ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿರುವ ಬಂಗಾಳ ಸರ್ಕಾರದ ಉನ್ನತ ಅಧಿಕಾರಿ ಅಲಪನ್ ಬಂಡ್ಯೋಪಾಧ್ಯಾಯ, “ಗೃಹ ಸಚಿವಾಲಯಕ್ಕೆ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರವು ಈಗಾಗಲೇ ಈ ಸಮಸ್ಯೆಯನ್ನು ಅತ್ಯಂತ ಗಂಭೀರತೆಯಿಂದ ಪರಿಹರಿಸುತ್ತಿದೆ. ದಾಳಿಗೆ ಸಂಬಂಧಿಸಿದಂತೆ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಏಳು ಜನರನ್ನು ಬಂಧಿಸಲಾಗಿದೆ. ಗೃಹ ಸಚಿವಾಲಯ ಡಿಸೆಂಬರ್ 14 ರಂದು ಕರೆದಿರುವ ಸಭೆಯಲ್ಲಿ ರಾಜ್ಯದ ಅಧಿಕಾರಿಗಳ ಉಪಸ್ಥಿತಿ ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಗುರುವಾರ ಬಂಗಾಳಕ್ಕೆ ಆಗಮಿಸಿದ್ದ ಜೆ.ಪಿ ನಡ್ಡಾ ಅವರಿಗೆ ಝಡ್‌ ಕ್ಯಾಟಗರಿ ಭದ್ರತೆ ನೀಡಲಾಗಿದೆ. ಅವರಿಗೆ ಬುಲೆಟ್‌ಫ್ರೂಫ್ ಕಾರ್ ನೀಡಲಾಗಿತ್ತು. ಬೆಂಗಾವಲು ಮತ್ತು ಭದ್ರತಾ ಅಧಿಕಾರಿಗಳನ್ನೂ ನೇಮಕ ಮಾಡಲಾಗಿತ್ತು. ಅವರು ಚಲಿಸುವ ಮಾರ್ಗದಲ್ಲಿ ನಾಲ 4 ಎಸ್ಪಿಗಳು, 8 ಡೆಪ್ಯೂಟಿ ಎಸ್ಪಿಗಳು, 14 ಇನ್ಸ್ಪೆಕ್ಟರ್‌ಗಳು, 70 ಸಬ್ಇನ್ಸ್ಪೆಕ್ಟರ್‌‌ಗಳು, 40 ಆರ್‌‌ಎಎಫ್ ಸಿಬ್ಬಂದಿ, 259 ಕಾನ್ಸ್ಟೆಬಲ್‌‌ಗಳು ಮತ್ತು 350 ಇತರೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿತ್ತು. ಭದ್ರತೆಯ ಮೇಲ್ವಿಚಾರಣೆಗೆ ಡಿಐಜಿಯನ್ನು ನಿಯೋಜಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಜೆ.ಪಿ ನಡ್ಡಾ ವಾಹನಗಳ ಜೊತೆಗೆ ಇತರೆ ವಾಹನಗಳನ್ನೂ ನಿಯೋಜಿಸಿದ ಕಾರಣ ಪರಿಸ್ಥಿತಿ ಬಿಗಡಾಯಿಸಿತು ಎಂದು ಬಂಗಾಳ ಸರ್ಕಾರ ಈಗಾಗಲೇ ಕೇಂದ್ರಕ್ಕೆ ವರದಿ ಸಲ್ಲಿಸಿದೆ.

ಘಟನೆಯ ಬಗ್ಗೆ ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ದಿಲೀಪ್‌ ಘೋಷ್‌ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ಇದನ್ನು ‘ಯೋಜಿತ ಪಿತೂರಿ’ ಎಂದು ಕರೆದು, ಭದ್ರತಾ ವೈಫಲ್ಯದ ಆರೋಪ ಕುರಿತಂತೆ ವರದಿ ಸಲ್ಲಿಸಿ ಎಂದು ಪಶ್ಷಿಮ ಬಂಗಾಳ ರಾಜ್ಯಪಾಲರಿಗೆ ಸೂಚನೆ ನೀಡಿದ್ದರು.

ಇದನ್ನೂ ಓದಿ:  2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...