HomeUncategorizedದಲಿತ ಬಾಲಕರ ಬರಿಗೈಯಲ್ಲಿ ಮಲ ಎತ್ತಿಸಿದ ಮೇಲ್ಜಾತಿಯ ಗುಂಪು - ಬಂಧನ

ದಲಿತ ಬಾಲಕರ ಬರಿಗೈಯಲ್ಲಿ ಮಲ ಎತ್ತಿಸಿದ ಮೇಲ್ಜಾತಿಯ ಗುಂಪು – ಬಂಧನ

"ಮಲವನ್ನು ಗೋಣಿಚೀಲದಲ್ಲಿ ತುಂಬಿ, ತಲೆಯಮೇಲೆ ಹೊತ್ತುಕೊಂಡು 100 ಮೀಟರ್ ನಡೆಯಲು ಒತ್ತಾಯಿಸಿದರು. ನಂತರ ಅದನ್ನು  ಕಾಲುವೆಯ ಬಳಿ ಹಾಕಿಸಿದ್ದಾರೆ"

- Advertisement -
- Advertisement -

ಬರಿಯ ಕೈಗಳಿಂದ ಮಲ ತೆಗೆದುಹಾಕುವಂತೆ ಮೇಲ್ಜಾತಿ ಯುವಕರ ಗುಂಪೊಂದು ದಲಿತ ಸಮುದಾಯದ ಹುಡುಗರನ್ನು ಒತ್ತಾಯಿಸಿರುವ ಅಮಾನವೀಯ ಘಟನೆ ತಮಿಳುನಾಡಿನ ಪೆರಂಬಲೂರಿನ ಸಿರುಕೂಡಲ್‌ ಹಳ್ಳಿಯಲ್ಲಿ ನಡೆದಿದೆ.

11 ರಿಂದ 15 ವರ್ಷದೊಳಗಿನ ಐದು ದಲಿತ ಹುಡುಗರನ್ನು ಬಲವಂತವಾಗಿ ಬರಿಗೈಯಲ್ಲಿ ಮಲ ಎತ್ತಲು ಒತ್ತಾಯಿಸಿದ್ದಾರೆ ಎಂಬ ದೂರಿನ ಆಧಾರದ ಮೇಲೆ ಸಿರುಕೂಡಲ್ ಗ್ರಾಮದ ನಿವಾಸಿಗಳಾದ 20 ವರ್ಷದ ಅಬಿನೇಶ್, 25 ವರ್ಷದ ಸೆಲ್ವಕುಮಾರ್ ಮತ್ತು 24 ವರ್ಷದ ಸಿಲಂಬರಸನ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ಹುಡುಗರು ಈ ಘಟನೆಯ ಬಗ್ಗೆ ತಮ್ಮ ಪೋಷಕರಿಗೆ ತಿಳಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.

“ಐದು ಹುಡುಗರು ತಮ್ಮ ಹಳ್ಳಿಯಲ್ಲಿ ತೆರೆದ ಮೈದಾನದಲ್ಲಿ ಮಲವಿಸರ್ಜನೆ ಮಾಡುತ್ತಿದ್ದರು. ಮೂವರು ಯುವಕರ ಗುಂಪು ಆ ಹುಡುಗರನ್ನು ಸುತ್ತುವರೆದು ನಿಂದಿಸಿ ಮತ್ತು ಹೊಡೆಯಲು ಪ್ರಾರಂಭಿಸಿದರು. ನಂತರ ಬರಿ ಕೈಗಳಿಂದ ಮಲವನ್ನು ನೆಲದಿಂದ ತೆಗೆದುಹಾಕುವಂತೆ ಹುಡುಗರನ್ನು ಒತ್ತಾಯಿಸಿದರು” ಎಂದು ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು ಪ್ರಕರಣ.

ಇದನ್ನೂ ಓದಿ: ಒಂದೇ ಊರಲ್ಲಿ ಪದೇ ಪದೇ ನಡೆಯುತ್ತಿರುವ ದಲಿತರ ಮೇಲಿನ ಅತ್ಯಾಚಾರ ಮತ್ತು ಜಾತಿ ದೌರ್ಜನ್ಯಗಳು

ಮಲವನ್ನು ಗೋಣಿಚೀಲದಲ್ಲಿ ತುಂಬಿ, ತಲೆಯಮೇಲೆ ಹೊತ್ತುಕೊಂಡು 100 ಮೀಟರ್ ನಡೆಯಲು ಒತ್ತಾಯಿಸಿದರು. ನಂತರ ಅದನ್ನು  ಕಾಲುವೆಯ ಬಳಿ ಹಾಕಿಸಿದ್ದಾರೆ ಎಂದು ಹೇಳಿದರು.

ಘಟನೆ ತಿಳಿದ ನಂತರ ಹುಡುಗರ ಪೋಷಕರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದರು. ನಂತರ ವಿಸಿಕೆ ಕಾರ್ಯಕರ್ತ ವೀರಾ ಸೆಂಗೋಳನ್ ಮತ್ತು ನೂರಾರು ಪಕ್ಷದ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ರಸ್ತೆ ತಡೆ ನಡೆಸಿದರು.

ಇದನ್ನೂ ಓದಿ: ಕಳೆದ 5 ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳ ಮೇಲಿನ ದೌರ್ಜನ್ಯಗಳಲ್ಲಿ 19% ಹೆಚ್ಚಳ!

ಪ್ರತಿಭಟನೆಯ ಮಾಹಿತಿ ಹರಡುತ್ತಿದ್ದಂತೆ, ಪೆರಂಬಲೂರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಸಿ.ಕಾರ್ತಿಕೇಯನ್ ಮತ್ತು ಮರುವತ್ತೂರ್ ಪೊಲೀಸರು ಗ್ರಾಮಕ್ಕೆ ಆಗಮಿಸಿ ಗ್ರಾಮಸ್ಥರನ್ನು ವಿಚಾರಣೆ ನಡೆಸಿದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಬಾಲಕರ ಮೇಲೆ ದೌರ್ಜನ್ಯ ಎಸಗಿದ್ದಕ್ಕಾಗಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆ ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎ.ಸಿ.ಕಾರ್ತಿಕೇಯನ್ ಹೇಳಿದರು.

ಇದನ್ನೂ ಓದಿ: ನ್ಯಾಯಾಲಯಕ್ಕೆ ಜಾತಿವಾದಿಗಳ ‘ಅತಿರೇಕದ ದೌರ್ಜನ್ಯ’ ಕಾಣಲಿಲ್ಲವೇಕೆ?

ಆರೋಪಿಗಳನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಪೆರಂಬಲೂರ್ ಉಪ ಜೈಲಿಗೆ ಕಳುಹಿಸಲಾಗಿದೆ.

ಈ ಘಟನೆಯ ನಂತರ, ಸ್ವಚ್ಚ್ ಭಾರತ್ ಯೋಜನೆಯ ಹೊರತಾಗಿಯೂ ಗ್ರಾಮದಲ್ಲಿ ಶೌಚಾಲಯಗಳ ಕೊರತೆ ಬೆಳಕಿಗೆ ಬಂದಿದೆ. ಕೆಲವು ಶ್ರೀಮಂತ ಕುಟುಂಬಗಳು ಶೌಚಾಲಯಗಳನ್ನು ಹೊಂದಿದ್ದರೆ. ಗ್ರಾಮದ ಹೆಚ್ಚಿನವರು ಬಯಲು ಮಲವಿಸರ್ಜನೆಯನ್ನು ಆಶ್ರಯಿಸಬೇಕಾಗಿದೆ ಎಂದು ಗ್ರಾಮಸ್ಥರು ಹೇಳಿದರು.


ಇದನ್ನೂ ಓದಿ: ಮೇಲ್ಜಾತಿ ಗೆಳೆಯರ ಊಟದ ತಟ್ಟೆ ಮುಟ್ಟಿದ್ದಕ್ಕೆ ದಲಿತ ಯುವಕನ ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...