Homeಚಳವಳಿರೈತರ ಹೋರಾಟಕ್ಕೆ ಬೆಂಬಲ ನೀಡಿದ ಎನ್‌ಡಿಎ ಮಿತ್ರಪಕ್ಷ RLP

ರೈತರ ಹೋರಾಟಕ್ಕೆ ಬೆಂಬಲ ನೀಡಿದ ಎನ್‌ಡಿಎ ಮಿತ್ರಪಕ್ಷ RLP

ಅಗತ್ಯವಿದ್ದಲ್ಲಿ ರೈತರಿಗಾಗಿ ಎನ್‌ಡಿಎ ಮತ್ತು ಸಂಸದ ಸ್ಥಾನವನ್ನು ಕೂಡಾ ತೊರೆಯಲು ಸಿದ್ದನಿದ್ದೇನೆ ಎಂದು ಪಕ್ಷದ ನಾಯಕ ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಎನ್‌ಡಿಎ ಮೈತ್ರಿಕೂಟ ಪಕ್ಷವಾದ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ(RLP)ದ ಸಂಸದ ಹನುಮಾನ್ ಬೆನಿವಾಲ್ ಬೆಂಬಲಿಸಿದ್ದಾರೆ.

ಟ್ವಿಟ್ಟರ್‌ ಮೂಲಕ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಅವರು ಘೋಷಿಸಿದ್ದರು. ಅಲ್ಲದೆ ಸುದ್ದಿ ಸಂಸ್ಥೆ ಎಎನ್‌ಐ ವರದಿಯಂತೆ, “ಪ್ರಧಾನ ಮಂತ್ರಿ ಮತ್ತು ಗೃಹ ಮಂತ್ರಿಗೆ ನಾನು ಸಂದೇಶ ಕಳುಹಿಸಿದ್ದೇನೆ. ಆಂದೋಲನ ದೇಶದಾದ್ಯಂತ ಹರಡುತ್ತಿದೆ. ಅಗತ್ಯವಿದ್ದಲ್ಲಿ ರೈತರಿಗಾಗಿ ನಾನು ಎನ್‌ಡಿಎ ಮತ್ತು ಸಂಸದ ಸ್ಥಾನವನ್ನು ಕೂಡಾ ತೊರೆಯಲು ಸಿದ್ದನಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:  ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ

 

ರಾಜಸ್ಥಾನದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷವು, ಕಾನೂನುಗಳನ್ನು ವಿರೋಧಿಸಿ ರೈತರ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದ್ದು, ಜಾಥಾಕ್ಕೆ ಸ್ವತಃ ಹನುಮಾನ್ ಬೆನಿವಾಲ್ ನೇತೃತ್ವ ನೀಡಿದ್ದಾರೆ.

ಕಳೆದ 17 ದಿನಗಳಿಂದ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಆಂದೋಲನ ನಡೆಸುತ್ತಿರುವ ರೈತರು ಡಿಸೆಂಬರ್ 14 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು, ಡಿಸೆಂಬರ್ 12 ರೊಳಗೆ ದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ:  ಮದುವೆಯಲ್ಲಿ ಗಿಫ್ಟ್ ಬದಲು ಹೋರಾಟ ನಿರತ ರೈತರಿಗಾಗಿ ದೇಣಿಗೆ ಸಂಗ್ರಹಿಸಿದ ಕುಟುಂಬ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಪ್ರಾಧಿಕಾರ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...