ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಕಳೆದ 18 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರು ನಾಳೆಯಿಂದ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದು, ಇದಕ್ಕೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ನಾಯಕರು ಸಾಥ್ ನೀಡಲಿದ್ದಾರೆ.
ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಸೋಮವಾರ (ಡಿ.14) ರೈತರೊಂದಿಗೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
“ರೈತರ ಪ್ರತಿಭಟನೆಯನ್ನು ಬೆಂಬಲಿಸಿ ನಾಳೆ ಒಂದು ದಿನದ ಉಪವಾಸವನ್ನು ನಡೆಸುತ್ತೇನೆ. ಎಎಪಿ ಸ್ವಯಂಸೇವಕರಿಗೆ ಉಪವಾಸ ಸತ್ಯಾಗ್ರಹದಲ್ಲಿ ಸೇರಿಕೊಳ್ಳಲು ನಾನು ಮನವಿ ಮಾಡುತ್ತೇನೆ. ಕೃಷಿ ಕಾನೂನುಗಳನ್ನು ವಿರೋಧಿಸುವ ರೈತರ ಎಲ್ಲಾ ಬೇಡಿಕೆಗಳನ್ನು ಕೇಂದ್ರವು ಅಹಂಕಾರ ಬಿಟ್ಟು ತಕ್ಷಣವೇ ಸ್ವೀಕರಿಸಬೇಕು. ಮತ್ತು ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಖಾತರಿಪಡಿಸುವ ಮಸೂದೆಯನ್ನು ಜಾರಿಗೆ ತರಬೇಕು’ ಎಂದು ಕೇಜ್ರಿವಾಲ್ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಡಿ.14 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಿರುವ ದೆಹಲಿಯ ಹೋರಾಟನಿರತ ರೈತರು
मेरी केंद्र सरकार से गुजारिश है की अहंकार छोडिये। सरकारें जनता से बनती है, जनता सरकारों से नही बनती।
अगर जनता इन तीनो बिलों के खिलाफ है तो इनको रद्द किया जाए और MSP के ऊपर किसानों की फसलें खरीद ने की गारंटी देने का बिल बनाया जाए।- माननीय मुख्यमंत्री श्री @ArvindKejriwal pic.twitter.com/inki0tcmiI
— AAP (@AamAadmiParty) December 13, 2020
ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು, ಅವರಿಗೆ ಬೆಂಬಲ ನೀಡುತ್ತಿರುವ ಗಾಯಕರು, ಕ್ರೀಡಾಪಟುಗಳು, ಮಾಜಿ ಸೈನಿಕರನ್ನು ರಾಷ್ಟ್ರದ್ರೋಹಿಗಳು ಎನ್ನುವವರ ವಿರುದ್ಧ ಆಪ್ ಮುಖಂಡ ಅರವಿಂದ್ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
केंद्र सरकार के कई मंत्री और भाजपा नेता किसानों को एंटी नेशनल बोल रहे हैं।
जिन सैनिक, डॉक्टर्स, खिलाडी, सिंगर ने देश का नाम रोशन किया क्या वो एंटी नेशनल है? मैं भाजपा नेताओं से कहना चाहता हूँ इस देश के किसानों को एंटी-नेशनल कहने की हिम्मत मत करना।- मुख्यमंत्री @ArvindKejriwal pic.twitter.com/yDBVxxO9UL
— AAP (@AamAadmiParty) December 13, 2020
“ದೇಶ ಸೇವೆ ಮಾಡಿದ ಮಾಜಿ ಸೈನಿಕರು, ವೈದ್ಯರು, ದೇಶಕ್ಕಾಗಿ ಪ್ರಶಸ್ತಿಗಳನ್ನು ತಂದ ಆಟಗಾರರು, ಗಾಯಕರು ಅವರು ದೇಶ ವಿರೋಧಿಗಳೇ..? ನಾನು ಬಿಜೆಪಿ ಮುಖಂಡರಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ, ಈ ದೇಶದ ರೈತರನ್ನು ರಾಷ್ಟ್ರ ವಿರೋಧಿ ಎಂದು ಕರೆಯುವ ಧೈರ್ಯ ಮಾಡಬೇಡಿ” ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಚ್ಚರಿಕೆ ನೀಡಿದ್ದಾರೆ.
ದೆಹಲಿ-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮೂಲಭೂತ ವ್ಯವಸ್ಥೆಗಳನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ದರು. ಪ್ರತಿಭಟನಾ ಸ್ಥಳಕ್ಕೂ ಭೇಟಿ ನೀಡಿದ್ದರು. ನಂತರ ಭಾರತ್ ಬಂದ್‌ಗೆ ಬೆಂಬಲಿಸಲು ಹೊರಟ್ಟಿದ್ದ ಅವರನ್ನು ಗೃಹ ಬಂಧನದಲ್ಲಿ ಇಡಲಾಗಿತ್ತು.
ಆಪ್ ಪಕ್ಷವು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ, “ಸಿಂಘು ಗಡಿಯಲ್ಲಿ ಹೋರಾಟ ನಿರತ ರೈತರನ್ನು ಭೇಟಿ ಮಾಡಿದ ನಂತರ ಮಾನ್ಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರವರನ್ನು ದೆಹಲಿ ಪೊಲೀಸರು ಗೃಹ ಬಂಧನದಲ್ಲಿಟ್ಟಿದ್ದಾರೆ. ಯಾರೂ ಅವರ ಮನೆ ಪ್ರವೇಶಿಸಲು ಅನುಮತಿ ನೀಡುತ್ತಿಲ್ಲ” ಎಂದು ಟ್ವೀಟ್ ಮಾಡಿ ಆರೋಪಿಸಿತ್ತು. ಆದರೆ, ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಆಪ್ ಆರೋಪಗಳನ್ನು ನಿರಾಕರಿಸಿತ್ತು.


