Homeಮುಖಪುಟಬರಲಿದೆ 'ಭೀಮಾ ಕೋರೆಗಾಂವ್' ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ಹಂಬಲಿಸುವ ಮಹರ್ ಸೈನಿಕರ ಧೈರ್ಯ, ಸಾಹಸ, ಕೆಚ್ಚೆದೆಯ ಹೋರಾಟವೇ 'ಭೀಮಾ ಕೋರೆಗಾಂವ್' ಯುದ್ಧ...

- Advertisement -
- Advertisement -

ಭಾರತದ ಐತಿಹಾಸಿಕ ಘಟನೆ ‘ಭೀಮಾ ಕೋರೆಗಾಂವ್’ ಯುದ್ಧವನ್ನು ಆಧರಿಸಿದ ‘ದಿ ಬ್ಯಾಟಲ್ ಆಫ್ ಭೀಮಾ ಕೋರೆಗಾಂವ್’ ಎನ್ನುವ ಚಲನಚಿತ್ರ ಬಾಲಿವುಡ್‌ನಲ್ಲಿ ನಿರ್ಮಾಣವಾಗುತ್ತಿದ್ದು, ಖ್ಯಾತ ಗೀತ ರಚನೆಕಾರ ರಮೇಶ್ ಥೀಟೆ ಈ ಚಿತ್ರವನ್ನು ನಿರ್ಮಾಣ ಮಾಡುವುದರೊಟ್ಟಿಗೆ ನಿರ್ದೇಶನವನ್ನೂ ಮಾಡಲಿದ್ದಾರೆ.

ಅರ್ಜುನ್ ರಾಂಪಾಲ್, ದಿಗಂಗನ ಸೂರ್ಯವಂಶಿ, ಅಭಿಮನ್ಯು ಸಿಂಗ್, ಸನ್ನಿ ಲಿಯೋನ್, ಮಿಲಿಂದ್ ಗುನಾಜಿ, ಗೋವಿಂದ್ ನಾಮದೇವ್, ಯತೀನ್ ಕಾರ್ಯೇಕರ್, ಅಶೋಕ್ ಸಾಮ್ರಾತ್ ಸೇರಿದಂತೆ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ. ಚಿತ್ರವು 2021 ರಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ:ಸಾರಿಗೆ ನೌಕರರ ಪ್ರತಿಭಟನೆಗೆ ಮಣಿದ ಸರ್ಕಾರ: ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ

ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಖ್ಯಾತ ಬಾಲಿವುಡ್ ನಟ ಅರ್ಜುನ್ ರಾಂ‌ಪಾಲ್ ಈ ಕುರಿತು ಟ್ವೀಟ್ ಮಾಡಿದ್ದು, “ನನ್ನ ಮನಸ್ಸನ್ನು ಗೆದ್ದ ಐತಿಹಾಸಿಕ ಘಟನೆಯನ್ನಾಧರಿಸಿದ ಚಿತ್ರದ ಭಾಗವಾಗಿರುವುದು ನನ್ನ ಹೆಮ್ಮೆ. ಖಂಡಿತಾ ಇದು ನಿಮ್ಮನ್ನೂ ಗೆಲ್ಲುತ್ತದೆ. 2021 ರಲ್ಲಿ ಚಿತ್ರ ಬಿಡುಗಡೆಯಾಗಲಿದೆ” ಎಂದು ಬರೆದುಕೊಂಡು ಚಿತ್ರದ ಫಸ್ಟ್‌ಲುಕ್ ಅನ್ನು ಹಂಚಿಕೊಂಡಿದ್ದಾರೆ.

ಚಿತ್ರದ ಹಾಡಿನ ಟೀಸರ್ ಅನ್ನು ಇಲ್ಲಿ ನೋಡಿ.

ಇದನ್ನೂ ಓದಿ: ನಿರುದ್ಯೋಗಿಗಳ ಬೆನ್ನಿಗೆ ನಿಂತ ನಟ ಸೋನು ಸೂದ್: ಇ-ಆಟೋ ಹಂಚಲು ನಿರ್ಧಾರ

ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ನೂರಾರು ಜನರು ಇದನ್ನು ರೀಟ್ವೀಟ್ ಮಾಡಿದ್ದಾರೆ.

ಶ್ರೀಕಾಂತ್ ದೊಲ್ಲೆ ಎಂಬುವವರು ಟ್ವೀಟ್ ಮಾಡಿ, “ನಾವು ಕಾಯುತ್ತಿದ್ದೇವೆ!!! ಜೈಭೀಮ್” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

ಯೋಗೇಶ್ ಎಂಬುವವರು ಟ್ವೀಟ್ ಮಾಡಿ, “ಚಿತ್ರದ ಬಗ್ಗೆ ಕುತೂಹಲ ಮತ್ತು ಕಾತರನಾಗಿದ್ದೇನೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಂಗಾವ್‌ ವಿಜಯೋತ್ಸವದಲ್ಲಿ ನೆರೆದ 5 ಲಕ್ಷಕ್ಕೂ ಹೆಚ್ಚು ಜನ: ಇಂಟರ್‌ನೆಟ್‌ ಸ್ಥಗಿತ..

ಪಂಡಿತ್ ಕ್ಷಿತಿಜ್ ಎಂಬುವವರು ಟ್ವೀಟ್ ಮಾಡಿ, “ನಮ್ಮ ಇತಿಹಾಸ ನಮ್ಮ ಹೆಮ್ಮೆ. ಮಹಾರರ (ಅಸ್ಪೃಶ್ಯರ) ಇತಿಹಾಸ ಮತ್ತು ಭೀಮಾ ಕೋರೆಗಾಂವ್ ಘಟನೆಯನ್ನು ಜಗತ್ತು ತಿಳಿದುಕೊಳ್ಳಲಿ. ಶೇರ್ ಮಾಡಿ, ರೀಟ್ವೀಟ್ ಮಾಡಿ” ಎಂದು ಬರೆದುಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಭೀಮಾ ಕೋರೆಗಾಂವ್ ಎಂಬ ಹೆಸರು ಸಾಕಷ್ಟು ಪ್ರಚಲಿತದಲ್ಲಿದೆ. ಕಳೆದ ಕೆಲವು ವರ್ಷಗಳಿಂದ ಈ ಐತಿಹಾಸಿಕ ಘಟನೆಯ ನೆನಪಿಗಾಗಿ ಮಹಾರಾ‍ಷ್ಟ್ರದಲ್ಲಿ ಉತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ. ಇತ್ತೀಚೆಗೆ ನಡೆದ ಉತ್ಸವದಲ್ಲಿ ಗಲಭೆ ಆರಂಭವಾಗಿತ್ತು. ಇದರ ಭಾಗವಾಗಿ ಹತ್ತಾರು ಹೋರಾಟಗಾರರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ದೇಶದಾದ್ಯಂತ ನೂರಾರು ಪ್ರತಿಭಟನೆಗಳು ನಡೆದಿವೆ.

ಇದನ್ನೂ ಓದಿ: ಮಾನವ ಹಕ್ಕುಗಳ ದಿನ: ಬಂಧನದಲ್ಲಿರುವ ಹೋರಾಟಗಾರರ ಬಿಡುಗಡೆಗೆ ಒತ್ತಾಯಿಸಿದ ರೈತರು!

ಏನಿದು ಕೋರೆಗಾಂವ್ ಯುದ್ಧ;

ಕೋರೇಗಾಂವ್ ಯುದ್ಧ ಇತಿಹಾಸದಲ್ಲಿ ಮುಚ್ಚಿಹೋದ ಸಾಹಸದ ಘಟನೆ. ಮೂವತ್ತು ಸಾವಿರ ಸೈನಿಕರನ್ನು ಕೇವಲ ಐನೂರು ಜನ ಸೈನಿಕರು ಸೇರಿಕೊಂಡು ಸೋಲಿಸಿದ ಕದನ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ಹಂಬಲಿಸುವ ಮಹರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟ. ಶೋಷಿತರು ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ಘೋಷಿಸಿದ, ನಡೆಸಿ ಗೆಲುವು. ಅದು ಭೀಮಾ ತೀರದಲ್ಲಿ ನಡೆದಿದ್ದರಿಂದ ಅದು ಇತಿಹಾಸದಲ್ಲಿ ‘ಭೀಮಾ ಕೋರೇಗಾಂವ್ ಯುದ್ಧ’ವೆಂದೇ ಪ್ರಸಿದ್ಧವಾಗಿದೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ ಎನ್‌ಐಎಗೆ ವರ್ಗಾವಣೆ ಪ್ರಶ್ನಿಸಿ ಹೈಕೋರ್ಟ್‌‌ನಲ್ಲಿ ಅರ್ಜಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...