Homeಚಳವಳಿನಮಗೆ ಜಿಯೋ ಬೇಡ, BSNLಗೆ ಪೋರ್ಟ್ ಆಗಲು 4G ಸೇವೆ ಕೊಡಿ: KVS ಒತ್ತಾಯ

ನಮಗೆ ಜಿಯೋ ಬೇಡ, BSNLಗೆ ಪೋರ್ಟ್ ಆಗಲು 4G ಸೇವೆ ಕೊಡಿ: KVS ಒತ್ತಾಯ

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕರಿಸಲು ಕರೆ ನೀಡಿದ್ದರು.

- Advertisement -
- Advertisement -

ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರು ಅಂಬಾನಿ-ಅದಾನಿ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ನೀಡಿದ ಕರೆ ಓಗೊಟ್ಟಿರುವ ರಾಜ್ಯದ ಯುವಜನರು ತಮ್ಮ ಹೋರಾಟವನ್ನು ಮತ್ತೊಂದು ಹೆಜ್ಜೆ ಮುಂದಕ್ಕೆ ಹೊಯ್ದಿದ್ದು, ನಮಗೆ ಜಿಯೋ ಬೇಡ, BSNLಗೆ ಪೋರ್ಟ್ ಆಗಿದ್ದೇವೆ 4G ಸೇವೆ ಕೊಡಿ ಎಂದು ಒತ್ತಾಯಿಸುತ್ತಿದ್ದಾರೆ.

ಇಂದು ಬೆಂಗಳೂರು, ಗಂಗಾವತಿ ಮತ್ತು ಕಲಬುರಗಿಯಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಹಲವು ವಿದ್ಯಾರ್ಥಿ -ಯು ವಜನರು BSNL ಕಚೇರಿಗಳಿಗೆ ಹೋಗಿ ಲಕ್ಷಾಂತರು ಜನರು BSNL ಸಿಮ್‌ಗೆ ಪೋರ್ಟ್ ಆಗಲು ಸಿದ್ದರಿದ್ದು, ಅದಕ್ಕೆ ನೀವು 4G ಸೇವೆ ಕೊಡಿ ಎಂದು ಆಗ್ರಹಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕರಿಸಲು ಕರೆ ನೀಡಿದ್ದರು. ರೈತರ ಹೋರಾಟ ಬೆಂಬಲಿಸಿ ಡಿಸೆಂಬರ್ 10 ರಂದು ನೂರಾರು ಯುವಜನರು ತಮ್ಮ ಜಿಯೋ ಸಿಮ್‌ನಿಂದ ಪೋರ್ಟ್ ಆಗಿದ್ದರು.

ಈ ಆಂದೋಲನದ ನೇತೃತ್ವ ವಹಿಸಿರುವ ಕೆವಿಎಸ್ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ನಾನುಗೌರಿ.ಕಾಂ ಜೊತೆ ಮಾತನಾಡಿ “ಇದೀಗ 5ಜಿ ತರಂಗಗಳನ್ನು ಜಿಯೋ ಕಂಪನಿಗೇ ಮೊದಲು ನೀಡುವ ಸುದ್ಧಿ ನಮಗೆ ಆಘಾತ ನೀಡಿದೆ. ಸರ್ಕಾರಿ ಸ್ವಾಮ್ಯದ ಸಂಸ್ಥೆ ಬಲಗೊಳ್ಳದೇ ಖಾಸಗೀ ವ್ಯಕ್ತಿಯ ಲಾಭಕ್ಕಾಗಿನ ವ್ಯವಸ್ಥೆ ಅಪಾಯಕಾರಿಯಾಗಿದೆ. ಹಾಗಾಗಿ ನಿಮ್ಮ ವ್ಯಾಪ್ತಿಯಲ್ಲಿ ಬರುವ ನಗರ-ಹಳ್ಳಿಗಳಲ್ಲಿಯಾದರೂ ಬಿಎಸ್‌ಎನ್‌ಎಲ್ ತರಂಗಗಳನ್ನು ಉತ್ತಮಗೊಳಿಸಿದರೆ ದೇಶಪ್ರೇಮಿ ವಿದ್ಯಾರ್ಥಿ-ಯುವಜನರಾದ ನಾವು ಬಿಎಸ್‌ಎನ್‌ಎಲ್ ಸೇವೆಯನ್ನು ಬಳಸಲು ಸಿದ್ಧರಿದ್ದೇವೆ. ನೂರಾರು ಯುವಜನರನ್ನು ಬಿಎಸ್‌ಎನ್‌ಎಲ್ ಗೆ ಪೋರ್ಟ್ ಮಾಡಿಸುವ ಆಂದೋಲನವನ್ನು ಮಾಡಲು ತಯಾರಿದ್ದೇವೆ ಮತ್ತು ರಾಜ್ಯದಾದ್ಯಂತ ಈ ಆಂದೋಲನ ನಡೆಯಲಿದೆ. ಇದನ್ನು ತಾವುಗಳು ಗಂಭೀರವಾಗಿ ಪರಿಗಣಿಸಿ ತರಂಗಗಳನ್ನು ಬಲಪಡಿಸುವ ಎಲ್ಲಾ ಪ್ರಯತ್ನಗಳನ್ನು ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿನ ಬಿಎಸ್‌ಎನ್‌ ಕಚೇರಿಗಳಿಗೆ ಕರ್ನಾಟಕ ಶ್ರಮಿಕ ಶಕ್ತಿಯ ವರದರಾಜೇಂದ್ರ, ಕೆವಿಎಸ್‌ನ ಮಮತಾ, ಮನೋಜ್ ಮುಂತಾದವರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಗಂಗಾವತಿ ತಂಡದಲ್ಲಿ ಸಂತೋಷ್ ಎಚ್.ಎಂ, ದುರ್ಗೇಶ್, ಸುನೀಲ್ ಮುಂತಾದವರಿದ್ದಾರೆ.


ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...