Homeಮುಖಪುಟಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಖಾಸಗಿ ವಲಯಕ್ಕೆ ಮುಕ್ತ ಅವಕಾಶ: ಪ್ರಧಾನಿ ಮೋದಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಖಾಸಗಿ ವಲಯಕ್ಕೆ ಮುಕ್ತ ಅವಕಾಶ: ಪ್ರಧಾನಿ ಮೋದಿ

- Advertisement -
- Advertisement -

ಇನ್ನುಮುಂದೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ವಲಯವೂ ಭಾಗವಹಿಸಬಹುದು ಎಂಬ ನಿರ್ಣಯಕ್ಕೆ ಜೂನ್‌ ತಿಂಗಳಿನಲ್ಲಿಯೇ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕ್ಷೇತ್ರದಲ್ಲಿ ಖಾಸಗಿ ವಲಯದ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಪ್ರಧಾನಿ ಇಂದು ಬಾಹ್ಯಾಕಾಶ ಕ್ಷೇತ್ರದ ಪ್ರಮುಖ ಕೈಗಾರಿಕೆಗಳು, ಉದ್ಯಮಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸಿದರು.

ಇದನ್ನೂ ಓದಿ: ಮುಷ್ಕರ ವಾಪಸ್ ಪಡೆದ ಸಾರಿಗೆ ನೌಕರರು: ಇಂದು ಸಂಜೆಯಿಂದಲೇ ಬಸ್‌ಗಳ ಸಂಚಾರ ಆರಂಭ

ಈ ಕುರಿತು ಟ್ವೀಟ್ ಮಾಡಿರುವ ಎಎನ್‌ಐ,”ಖಾಸಗಿ ವಲಯದವರು ಬಾಹ್ಯಾಕಾಶ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಾಹ್ಯಾಕಾಶ ಕ್ಷೇತ್ರದ ಪ್ರಮುಖ ಕೈಗಾರಿಕೆಗಳು, ಉದ್ಯಮಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ಇಂದು ಸಂವಹನ ನಡೆಸಿದರು. 2020 ರ ಜೂನ್‌ನಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಭಾರತೀಯ ಖಾಸಗಿ ವಲಯವನ್ನು ಬಾಹ್ಯಾಕಾಶ ಕ್ಷೇತ್ರದ ಚಟುವಟಿಕೆಗಳಿಗೆ ಪಾಲುದಾರರನ್ನಾಗಿ ಮಾಡುವ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ವರದಿ ಮಾಡಿದೆ.

ಇದನ್ನೂ ಓದಿ: ‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

ಇದನ್ನೂ ಓದಿ: ಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ಅದಾನಿ ಕಂಪನಿ ಮಾತ್ರ ಬೆಳೆಯುತ್ತಿರುವುದು ಹೇಗೆ?

ಭಾರತದ ಸರ್ಕಾರಿ ಸ್ವಾಮ್ಯದಲ್ಲಿರುವ ಬಹುತೇಕ ಎಲ್ಲಾ ವಲಯಗಳನ್ನು ಖಾಸಗಿಯವರಿಗೆ ಬಿಟ್ಟುಕೊಡುತ್ತಿರುವ ಮೋದಿ ಸರ್ಕಾರದ ಮತ್ತೊಂದು ನಿರ್ಧಾರವಿದು. ಈಗಾಗಲೇ ಖಾಸಗೀಕರಣದ ಕರಾಳ ಪರಿಣಾಮಗಳನ್ನು ಎದುರಿಸುತ್ತಿರುವ ಭಾರತ, ಕೇಂದ್ರ ಸರ್ಕಾರದ ಈ ಕ್ರಮದಿಂದ ಏನೆಲ್ಲಾ ಸಕಾರಾತ್ಮಕ ಮತ್ತು ನಕಾರಾತ್ಮಕ ಪರಿಣಾಗಳನ್ನು ಎದುರಿಸಬೇಕಾಗಬಹುದು ಎಂಬುದನ್ನು ಕಾದು ನೋಡಬೇಕಿದೆ.

ಈಗಾಗಲೇ ರೈತ ಬೆಳೆಯುವ ತರಕಾರಿಯಿಂದ ಹಿಡಿದು ವಿಮಾನಯಾನ, ವಿಮಾನ ನಿಲ್ದಾಣದವರೆಗೆ ಎಲ್ಲವೂ ಅಂಬಾನಿ-ಅದಾನಿಯ ಪಾಲಾಗಿದೆ. ಇದೀಗ ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿ ವಲಯಕ್ಕೆ ಮುಕ್ತಗೊಳಿಸಿರುವುದರಿಂದ ಉಪಗ್ರಹ ಉಡಾವಣೆ, ರಾಕೆಟ್ ತಯಾರಿಕೆ ಸೇರಿದಂತೆ ಮುಂತಾದ ತಾಂತ್ರಿಕ ಉಪಕರಣಗಳನ್ನು ತಯಾರಿಸುವ ಜವಾಬ್ದಾರಿಗಳು ಅಂಬಾನಿ-ಅದಾನಿಯ ಹೆಗಲ ಮೇಲೆ ಬೀಳಬಹುದು. ಹಾಗಾಗಿ ಇನ್ನುಮುಂದೆ ಉಪಗ್ರಹ ತಯಾರಿಕೆ ಮತ್ತು ಉಡಾವಣೆಗೆ ಸಂಬಂಧಿಸಿದ ಎಲ್ಲಾ ಉತ್ಪನ್ನಗಳನ್ನು ಇವರ ಕಂಪನಿಯಿಂದಲೇ ತಯಾರಾಗಬಹುದು? ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಸಂಸ್ಥೆಗಳು ನೆಲಕಚ್ಚಬಹುದು? ಇನ್ನು ಇಲ್ಲಿನ ನೌಕರರ ಪರಿಸ್ಥಿತಿ?

ಸರ್ಕಾರವೇ ಎಷ್ಟು ಭಾರವನ್ನು ಹೊರಲು ಸಾಧ್ಯ! ಹಾಗಾಗಿಯೇ ಅಂಬಾನಿ-ಅದಾನಿಯೂ ಸ್ವಲ್ಪ ಭಾರ ಹೊರಲಿ ಎಂದು ಅವರಿಗೆ ಸರ್ಕಾರಿ ಸ್ವಾಮ್ಯದಲ್ಲಿರುವ ಪ್ರಮುಖ ಉದ್ಯಮಗಳನ್ನು ಮಾರಲಾಗುತ್ತಿದೆ ಅಷ್ಟೆ!


ಇದನ್ನೂ ಓದಿ: ರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ – ದಿಲ್ಜಿತ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...