Homeಮುಖಪುಟಬಾಯ್ಕಾಟ್ ಅಭಿಯಾನ: ಏರ್‌ಟೆಲ್, ವೊಡಾಫೋನ್ ವಿರುದ್ಧ ದೂರು ನೀಡಿದ ಜಿಯೋ!

ಬಾಯ್ಕಾಟ್ ಅಭಿಯಾನ: ಏರ್‌ಟೆಲ್, ವೊಡಾಫೋನ್ ವಿರುದ್ಧ ದೂರು ನೀಡಿದ ಜಿಯೋ!

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ರೈತರು ಜಿಯೋ ಸಿಮ್‌ ಅನ್ನು ತಿರಸ್ಕರಿಸಿರುವುದರ ಹಿಂದೆ ಏರ್‌ಟೆಲ್ ಮತ್ತು ವೊಡಾಫೋನ್ ಕಂಪನಿಗಳ ಕೈವಾಡವಿದೆ ಎಂದು ಆರೋಪಿಸಿರುವ ಅಂಬಾನಿಯ ಜಿಯೋ ಕಂಪನಿ, ಈ ಎರಡು ನೆಟ್‌ವರ್ಕ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಟೆಲಿಕಾಂ ರೆಗ್ಯುಲೇಟರ್ ಅಥಾರಿಟಿ ಆಫ್ ಇಂಡಿಯಾ (TRAI)ಗೆ ಡಿಸಂಬರ್ 10 ರಂದು ದೂರು ನೀಡಿದೆ.

ಜಿಯೋ ಕಂಪನಿ ಸೆಪ್ಟೆಂಬರ್ 28 ರಂದು ಬರೆದಿದ್ದ ಪತ್ರವನ್ನು ಉಲ್ಲೇಖಿಸಿ ಮುಂದುವರೆಸುತ್ತಾ, “ರೈತರ ಪ್ರತಿಭಟನೆಯ ಉಪಯೋಗ ಪಡೆದುಕೊಳ್ಳುತ್ತಿರುವ ಏರ್‌ಟೆಲ್ ಮತ್ತು ವೊಡಾಫೋನ್ ಕಂಪನಿಗಳು, ಅನೈತಿಕ ಮತ್ತು ಸ್ಪರ್ಧಾತ್ಮಕ ವಿರೋಧಿ ರೀತಿಯಲ್ಲಿ ಮೊಬೈಲ್ ಸಂಖ್ಯೆ ಪೋರ್ಟಬಿಲಿಟಿ (MNP) ಅಭಿಯಾನವನ್ನು ನಡೆಸುತ್ತಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: ಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ಅದಾನಿ ಕಂಪನಿ ಮಾತ್ರ ಬೆಳೆಯುತ್ತಿರುವುದು ಹೇಗೆ?

“ಜಿಯೋ ಮೊಬೈಲ್ ಸಂಖ್ಯೆಗಳನ್ನು ತಮ್ಮ ನೆಟ್‌ವರ್ಕ್‌ಗಳಿಗೆ ಸ್ಥಳಾಂತರಿಸುವುದರಿಂದ ರೈತರ ಪ್ರತಿಭಟನೆಗೆ ಸಹಕಾರಿಯಾಗಲಿದೆ ಎಂದು ಹೇಳಿಕೆಗಳನ್ನು ನೀಡುವ ಮೂಲಕ ಈ ನೆಟ್‌ವರ್ಕ್‌ಗಳು ಸಾರ್ವಜನಿಕರನ್ನು ಪ್ರಚೋದಿಸುತ್ತಿದೆ” ಎಂದು ಡಿಸೆಂಬರ್ 10 ರಂದು ಬರೆದ ಪತ್ರದಲ್ಲಿ ತಿಳಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಏಮ್ಸ್ ನರ್ಸ್‌ಗಳ ಅನಿರ್ದಿಷ್ಟ ಮುಷ್ಕರ: ಕೆಲಸಕ್ಕೆ ಬರುವಂತೆ ಏಮ್ಸ್ ನಿರ್ದೇಶಕರ ಮನವಿ

ಜಿಯೋ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸಿದ ಭಾರತೀಯ ಏರ್‌ಟೆಲ್, “ಏರ್‌ಟೆಲ್ ಟೆಲಿಕಾಂ ಉದ್ಯಮದಲ್ಲಿ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಈ ಅವಧಿಯಲ್ಲಿ, ನಾವು ಮಾರುಕಟ್ಟೆಯಲ್ಲಿ ತೀವ್ರವಾಗಿ ಸ್ಪರ್ಧಿಸಿದ್ದೇವೆ ಮತ್ತು ನಮ್ಮ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಲು ಶ್ರಮಿಸಿದ್ದೇವೆ. ಅದೇ ಸಮಯದಲ್ಲಿ ನಮ್ಮ ಸ್ಪರ್ಧಿಗಳು ಮತ್ತು ಪಾಲುದಾರರನ್ನು ಗೌರವದಿಂದ ನಡೆಸಿಕೊಂಡಿದ್ದೇವೆ. ನಾವು ನಮ್ಮ ವ್ಯವಹಾರವನ್ನು ಪಾರದರ್ಶಕವಾಗಿ ನಡೆಸಿದ್ದೇವೆ. ಇದಕ್ಕೆ ನಮಗೆ ಬಹಳ ಹೆಮ್ಮೆಯಿದೆ” ಎಂದು ಹೇಳಿದೆ.

ಅಂಬಾನಿ ಮತ್ತು ಅವರ ಕಂಪನಿಗಳ ಉತ್ಪನ್ನಗಳಾದ ಪೆಟ್ರೋಲ್ ಪಂಪ್, ಜಿಯೋ ಸಿಮ್, ರಿಲಯನ್ಸ್ ಸೇರಿದಂತೆ ಇತರೆ ಉತ್ಪನ್ನಗಳನ್ನು ಬಾಯ್ಕಾಟ್ ಮಾಡುವಂತೆ ಪ್ರತಿಭಟನಾ ನಿರತ ರೈತರು ಇತ್ತೀಚೆಗೆ ಕರೆ ನೀಡಿದ್ದರು. ಕರ್ನಾಟಕದಲ್ಲಿಯೂ ಯುವಕರು ಜಿಯೋ ಸಿಮ್ ಇಂದ ಪೋರ್ಟಿಂಗ್ ಅಭಿಯಾನವನ್ನು ಕೈಗೊಂಡಿದ್ದರು.

ಕೇಂದ್ರ ಸರ್ಕಾರ ತನ್ನ ಕೃಷಿ ಕಾನೂನುಗಳನ್ನು ಹಿಂಪಡೆಯಲಿ ಎಂದು ಒತ್ತಾಯಿಸಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕೃಷಿ ಕಾನೂನುಗಳು ಪರೋಕ್ಷವಾಗಿ ಅಂಬಾನಿಗೆ ಸಹಕಾರಿಯಾಗುತ್ತದೆ ಎಂಬ ಕಾರಣಕ್ಕೆ ಅಂಬಾನಿ ಕಂಪನಿಯ ಉತ್ಪನ್ನಗಳನ್ನು ಬಾಯ್ಕಾಟ್‌ ಮಾಡಬೇಕು ಎಂದು ಕರೆ ನೀಡಲಾಗಿತ್ತು.


ಇದನ್ನೂ ಓದಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಖಾಸಗಿ ವಲಯಕ್ಕೆ ಮುಕ್ತ ಅವಕಾಶ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಜಿಯೋಮಾರ್ಟ್ ಪ್ರಚಾರಮಾಡುತ್ತಿದ್ದೀರ?
    ನಾನು ಗೌರಿ ಪೇಜ್ ತೆರೆದಕೂಡಲೇ ಜಿಯೋಮಾರ್ಟ್ ಬರುತ್ತದೆ ನಡುವಿನಲ್ಲಿ ಯಾಕೆ?

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...