ಶ್ರೀರಾಮಚಂದ್ರ ಸಮಾಜವಾದಿ ಪಕ್ಷಕ್ಕೆ ಸೇರಿದವರು, ನಾವು ರಾಮನ ಭಕ್ತರು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಅಜಂಘರ್ನಿಂದ ತೆರಳುತ್ತಿದ್ದಾಗ ಕೆಲ ಸಮಯ ಅಯೋಧ್ಯೆಯಲ್ಲಿ ವಿರಾಮ ತೆಗೆದುಕೊಳ್ಳುವಾಗ ಈ ಹೇಳಿಕೆ ನೀಡಿದ್ದಾರೆ.
ಭಗವಾನ್ ಶ್ರೀರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವರು. ನಾವು ಶ್ರೀ ರಾಮ ಮತ್ತು ಶ್ರೀ ಕೃಷ್ಣನ ಭಕ್ತರು ಮತ್ತು ಶೀಘ್ರದಲ್ಲೇ ತನ್ನ ಕುಟುಂಬ ಸದಸ್ಯರೊಂದಿಗೆ ಅಯೋಧ್ಯೆಗೆ ಭೇಟಿ ನೀಡಿ ದೇವರನ್ನು ಪೂಜಿಸುವುದಾಗಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹೇಳಿದ್ದಾರೆ.
ಭಗವಾನ್ ರಾಮನಿಗೆ ಪ್ರಾರ್ಥನೆ ಸಲ್ಲಿಸಲು ತಮ್ಮ ಕುಟುಂಬ ಸದಸ್ಯರೊಂದಿಗೆ ಶೀಘ್ರದಲ್ಲೇ ಅಯೋಧ್ಯೆಗೆ ಮತ್ತೊಮ್ಮೆ ಬರುವುದಾಗಿ ಅಖಿಲೇಶ್ ಯಾದವ್ ಹೇಳಿದ್ದಾರೆ. ಆದರೆ, ಅಯೋಧ್ಯೆಗೆ ಭೇಟಿಯ ನಿಗಧಿ ದಿನಾಂಕವನ್ನು ನಿರ್ದಿಷ್ಟಪಡಿಸಿಲ್ಲ.
ಇದನ್ನೂ ಓದಿ: ರೈತ ಹೋರಾಟಕ್ಕೆ ತೆರಳಿದ್ದ ಅಖಿಲೇಶ್ ಯಾದವ್‌ಗೆ ತಡೆ: ಮನೆಮುಂದೆಯೇ ಧರಣಿ-ಗೃಹಬಂಧನ
ಸುದ್ದಿಗಾರರೊಂದಿಗೆ ಪುಟ್ಟ ಸಂವಾದ ನಡೆಸಿ ಮಾತನಾಡಿದ ಅಖಿಲೇಶ್ ಯಾದವ್, ತಾನು ತಮ್ಮ ಸರ್ಕಾರದ ಅವಧಿಯಲ್ಲಿ ರಾಮ ದೇವಾಲಯದ ಅಭಿವೃದ್ಧಿಗಾಗಿ ಮಾಡಿದ ವಿವಿಧ ಕೆಲಸಗಳನ್ನು ತಿಳಿಸಿದ್ದಾರೆ.
ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಅವರು ಮಾಡಿದ ವಿವಿಧ ಕೆಲಸಗಳಲ್ಲಿ, ಅಯೋಧ್ಯೆಯ ಸುತ್ತಲಿನ ರಿಂಗ್ ರಸ್ತೆಯಲ್ಲಿ “ಪಾರಿಜಾತ ಮರಗಳ” ತೋಟವನ್ನು ಮಾಡಿದ್ದು, ಈ ರಸ್ತೆಯ ಉದ್ದಕ್ಕೂ ಧಾರ್ಮಿಕ ಪ್ರಾಮುಖ್ಯತೆಯೊಂದಿಗೆ ವಿವಿಧ ಜಾತಿಯ ಮರಗಳನ್ನು ನೆಟ್ಟಿದ್ದನ್ನು ನೆನಪಿಸಿಕೊಂಡಿದ್ದಾರೆ.
ಇತ್ತ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ಭಗವಾನ್ ರಾಮನಿಗೆ ನಿರ್ಮಿಸಲಾಗುತ್ತಿರುವ ದೇವಾಲಯಕ್ಕಾಗಿ ಸಾಮೂಹಿಕ ಸಂಪರ್ಕ ಮತ್ತು ಕೊಡುಗೆ ಅಭಿಯಾನವನ್ನು ನಡೆಸಲು ನಿರ್ಧರಿಸಿದೆ. ಈ ಅಭಿಯಾನವು ಅಯೋಧ್ಯೆ ಚಳವಳಿಯ ಐತಿಹಾಸಿಕ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವತ್ತ ಗಮನ ಹರಿಸಲಿದೆ ಎಂದು ರಾಮ್ ಮಂದಿರ ಟ್ರಸ್ಟ್ ಟ್ವಿಟರ್‌ನಲ್ಲಿ ಸರಣಿ ಪೋಸ್ಟ್ ಮಾಡಿ ತಿಳಿಸಿದೆ.
Shri Ram Janmbhoomi Teerth Shetra is going to start a Mass Contact and Contribution Campaign for construction of a Bhavya & Divya mandir at the birthplace of Bhagwan Shri Ramlalla. The public will also be made aware of the historical significance of the Janmabhoomi Movement.
— Shri Ram Janmbhoomi Teerth Kshetra (@ShriRamTeerth) December 15, 2020
ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟ ಸುಪ್ರೀಂಕೋರ್ಟ್ ತೀರ್ಪಿನ ನಂತರ ಸರ್ಕಾರ ಈ ಟ್ರಸ್ಟ್ ಅನ್ನು ರಚಿಸಿತ್ತು. ಅಯೋಧ್ಯೆಯ ರಾಮ ದೇವಾಲಯದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ಈ ಟ್ರಸ್ಟ್ ಸ್ಥಾಪಿಸಲಾಗಿದೆ.


