Homeಮುಖಪುಟಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ- ಕಮಲ್ ಹಾಸನ್

ಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ- ಕಮಲ್ ಹಾಸನ್

ಚುನಾವಣಾ ಆಯೋಗದಲ್ಲಿ ಈಗಾಗಲೇ ನೋಂದಣಿಯಾಗಿರುವ ರಾಜಕೀಯ ಪಕ್ಷ ‘ಮಕ್ಕಳ್ ಸೇವೈ ಕಚ್ಚಿ’ ಎಂಬ ಹೆಸರನ್ನು ನಟ ರಜನಿಕಾಂತ್ ಬಳಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

- Advertisement -
- Advertisement -

ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ ಈಗಾಗಲೇ ಪ್ರಚಾರ ಕಾರ್ಯ ಶುರು ಮಾಡಿರುವ ನಟ, ಮಕ್ಕಳ್ ನೀದಿ ಮಯ್ಯಂ ಮುಖ್ಯಸ್ಥ ಕಮಲ್ ಹಾಸನ್, ರಜನಿಕಾಂತ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಸಕಾರಾತ್ಮಕವಾಗಿ ಮಾತನಾಡಿದ್ದಾರೆ. ಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಅವರೊಂದಿಗೆ ಕೈಜೋಡಿಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಕಮಲ್ ಹಾಸನ್ “ನಮ್ಮ ಸಿದ್ಧಾಂತವು ಹೋಲುತ್ತಿದ್ದರೆ, ನಮ್ಮ ಮೈತ್ರಿಯಿಂದ ಜನರಿಗೆ ಪ್ರಯೋಜನವಾಗುವಂತಿದ್ದರೇ, ನಮ್ಮ ಅಹಂಕಾರವನ್ನು ಬದಿಗಿಟ್ಟು ಪರಸ್ಪರ ಸಹಕರಿಸಲು ನಾವು ಸಿದ್ಧ ”ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಹಿಂದೆ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವಾದ ”ಮಕ್ಕಳ್ ನೀದಿ ಮಯ್ಯಂ” ಉತ್ತಮ ಜನರೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ. ಚುನಾವಣೆಯಲ್ಲಿ ನಟ ರಜನಿಕಾಂತ್ ಬೆಂಬಲವನ್ನು ಕೇಳುತ್ತೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ಇತ್ತ ಶೀಘ್ರದಲ್ಲೇ ತಮ್ಮ ಪಕ್ಷವನ್ನು ಅಧಿಕೃತವಾಗಿ ಘೋಷಣೆ ಮಾಡಲು ನಟ ರಜನಿಕಾಂತ್ ಸಜ್ಜಾಗಿದ್ದಾರೆ. ಆದರೂ ಸಹ ರಜನಿಕಾಂತ್ ಅವರೊಂದಿಗೆ ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವುದನ್ನು ಕಮಲ್ ಹಾಸನ್ ತಳ್ಳಿಹಾಕಿಲ್ಲ.

ನಟ ರಜನಿಕಾಂತ್‌ ತಮ್ಮ‌ ಹೊಸ ಪಕ್ಷ ಪ್ರಾರಂಭ ದಿನಾಂಕ ಮತ್ತು ಇತರ ವಿವರಗಳನ್ನು ಈ ತಿಂಗಳ 31 ರಂದು ತಿಳಿಸಲಾಗುವುದು ಎಂದು ಘೋಷಿಸಿದ್ದರು. ಈ ಹಿನ್ನಲೆಯಲ್ಲಿ, ಈಗಾಗಲೇ ಚುನಾವಣಾ ಆಯೋಗದಲ್ಲಿ ನೋಂದಾಯಿಸಿರುವ ರಾಜಕೀಯ ಪಕ್ಷ ‘ಮಕ್ಕಳ್ ಸೇವೈ ಕಚ್ಚಿ’ ಎಂಬ ಹೆಸರನ್ನು ನಟ ರಜನಿಕಾಂತ್ ಬಳಸಲಿದ್ದಾರೆ ತಮಿಳುನಾಡು ಮಾಧ್ಯಮಗಳು ವರದಿ ಮಾಡಿವೆ.

ನಟ ಕಮಲ್ ಹಾಸನ್ ಡಿಸೆಂಬರ್ 13 ರಂದು 2021 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ ಪ್ರಚಾರ ಕಾರ್ಯವನ್ನು ಪ್ರಾರಂಭಿಸಿದ್ದು, ಡಿಸೆಂಬರ್‌ 16 ರಂದು ಮೊದಲ ಹಂತದ ಪ್ರಚಾರ ಕಾರ್ಯ ಕೊನೆಗೊಳ್ಳಲಿದೆ.

ಈ ನಾಲ್ಕು ದಿನಗಳ ವೇಳಾಪಟ್ಟಿಯಲ್ಲಿ ಮಧುರೈ, ಥೇಣಿ, ದಿಂಡಿಗಲ್, ವಿರುಧುನಗರ್​, ತಿರುಣಲ್​ವೇಲಿ, ಟುಟುಕೊರಿನ್ ಹಾಗೂ ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಪ್ರಚಾರ ನಡೆಸಲು ಯೋಜನೆ ಹಾಕಿಕೊಳ್ಳಲಾಗಿತ್ತು. ತಮ್ಮ ಪ್ರಚಾರದಲ್ಲಿ ಮಧುರೈ ಅನ್ನು ಎರಡನೇ ರಾಜಧಾನಿ ಮಾಡುವ ಭರವಸೆ ನೀಡಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಕಮಲ್ ಹಾಸನ್ ಪಕ್ಷವು ಸುಮಾರು 4 ಶೇಕಡಾ ಮತಗಳನ್ನು ಗಳಿಸಿದೆ.

ಈಗಾಗಲೇ ತಮಿಳುನಾಡು ರಾಜಕೀಯದಲ್ಲಿ ನಟಿ, ರಾಜಕಾರಣಿ ಖುಷ್ಬೂ, ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿಗಳಾದ ಸಸಿಕಾಂತ್ ಸೆಂಥಿಲ್, ಅಣ್ಣಾಮಲೈ ಕೂಡ ರಾಜಕೀಯ ಅಖಾಡಕ್ಕೆ ಧುಮುಕಿದ್ದಾರೆ. ಬಿಜೆಪಿ ಕೂಡ ವೆಟ್ರಿವೇಲ್ ಯಾತ್ರೆ ನಡೆಸಿ ಜನರಲ್ಲಿ ಧರ್ಮದ ರಾಜಕಾರಣ ಮಾಡಲು ಪ್ರಯತ್ನಿಸುತ್ತಿದೆ.


ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...

ಸ್ಪೇನ್‌ನಲ್ಲಿ ಅತಿ ವೇಗದ ರೈಲುಗಳ ನಡುವೆ ಡಿಕ್ಕಿ; ಕನಿಷ್ಠ 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎರಡು ಅತಿ ವೇಗದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಪೇನ್‌ನ ಎಬಿಸಿ (ಎಬಿಸಿ) ಸುದ್ದಿ ಸಂಸ್ಥೆ ವರದಿ ಮಾಡಿದೆ....

ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್...