Homeಮುಖಪುಟಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

ಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

”2014, 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಒಂದು ವರ್ಷದಲ್ಲಿ 2 ಕೋಟಿ ಉದ್ಯೋಗಗಳು ನೀಡುವ ಭರವಸೆ ನೀಡಿದ್ದರು, 2 ಲಕ್ಷ ಉದ್ಯೋಗಗಳನ್ನಾದರೂ ನೀಡಿದ್ದಾರೆಯೇ..?’

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಕಳ್ಳರ ಪಕ್ಷವಾಗಿದ್ದು, ಸಮಾಜದಲ್ಲಿ ವಿವಿಧ ಗುಂಪುಗಳ ನಡುವೆ ಭಿನ್ನಾಭಿಪ್ರಾಯಗಳನ್ನು ಹುಟ್ಟುಹಾಕುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

“ನಾವು ರಾಜ್ಯದ ಜನರಿಗಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ಯಾವಾಗಲೂ ನಮ್ಮನ್ನು ಕಳ್ಳರು ಎಂದು ಆರೋಪಿಸುತ್ತಾರೆ. ಆದರೆ, ಬಿಜೆಪಿಗಿಂತ ದೊಡ್ಡ ಕಳ್ಳ ಯಾರು ಇಲ್ಲ. ಅವರು ದೊಡ್ಡ ದರೋಡೆಕೋರರು. ಇಡೀ ಜಲ್ಪೈಗುರಿ-ಅಲಿಪುರ್ದಾರ್ ಪ್ರದೇಶದಲ್ಲಿ ಅವರು ‘ದಂಗಾ’ ಎಂಬ ಹೊಸ ಧರ್ಮವನ್ನು ಪ್ರಾರಂಭಿಸಿದರು. ಇದು  ಸ್ವಾಮಿ ವಿವೇಕಾನಂದ ಅಥವಾ ರಾಮಕೃಷ್ಣ ಪರಮಹಂಸ ಸೂಚಿಸಿದಂತೆ ಹಿಂದೂ ಧರ್ಮವಲ್ಲ” ಎಂದು ಜಲ್ಪೈಗುರಿಯಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

“ಬಿಜೆಪಿಯವರು ಹಿಂದೂ, ಮುಸ್ಲಿಂ, ಸಿಖ್ಖರು ಮತ್ತು ಕ್ರಿಶ್ಚಿಯನ್ನರ ನಡುವೆ ದ್ವೇಷವನರ್‍ನು ಎತ್ತಿಕಟ್ಟುತ್ತಾರೆ.  ಬಂಗಾಳಿ-ರಾಜ್‌ಬೋನ್ಶಿ, ಬಂಗಾಳಿ-ಬೋಡೋ ಜನರ ನಡುವೆ, ಬೋಡಿ ಮತ್ತು ಮುಸ್ಲಿಮರ ನಡುವೆ, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ನಡುವೆ ಅಥವಾ ಕ್ರಿಶ್ಚಿಯನ್ನರು ಮತ್ತು ಆದಿವಾಸಿಗಳ ನಡುವೆ ದ್ವೇಷ ಬಿತ್ತುವುದೇ ಅವರ ಕೆಲಸವಾಗಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

’ಬಿಜೆಪಿಗಿಂತ ದೊಡ್ಡ ಕಳ್ಳರ ಪಕ್ಷ ಯಾವುದು ಇಲ್ಲ. ಅವರು ಚಂಬಲ್‌ನ ದರೋಡೆಕೋರರು ಎಂದಿರುವ ಮಮತಾ ಬ್ಯಾನರ್ಜಿ, ಬಿಜೆಪಿಗರು 2014, 2016, 2019 ರ ಚುನಾವಣೆಗಳಲ್ಲಿ ಜಲ್ಪೈಗುರಿ-ಅಲಿಪುರ್ದಾರ್ ಪ್ರದೇಶದಲ್ಲಿ ಏಳು ಚಹಾ ತೋಟಗಳನ್ನು ಮತ್ತೆ ತೆರೆಯಲಾಗುವುದು, ಕೇಂದ್ರವು ಅವುಗಳನ್ನು ವಹಿಸಿಕೊಳ್ಳಲಿದೆ ಎಂದು ಭರವಸೆ ನೀಡಿದ್ದರು. ಅವರು ತಮ್ಮ ಭರವಸೆಯನ್ನು ಪೂರೈಸಿದ್ದಾರೆಯೇ?’ ಎಂದು ಪ್ರಶ್ನೆಸಿದ್ದಾರೆ.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಒಂದು ವರ್ಷದಲ್ಲಿ 2 ಕೋಟಿ ಉದ್ಯೋಗಗಳು ನೀಡುವ ಭರವಸೆ ನೀಡಿದ್ದರು, ಆದರೆ ಅವರು ಕೇವಲ 2 ಲಕ್ಷ ಉದ್ಯೋಗಗಳನ್ನಾದರೂ ನೀಡಿದ್ದಾರೆಯೇ..? ಇನ್ನೂ, 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಪ್ರತಿ ಖಾತೆಯಲ್ಲೂ 15 ಲಕ್ಷ ರೂ. ಹಾಕುವ ಭರವಸೆ ನೀಡಿದರು. ಅವರು ಆ ಭರವಸೆಯನ್ನಾದರೂ ಉಳಿಸಿಕೊಂಡಿದ್ದಾರೆಯೇ? ಅವರು ಬರೀ ಸುಳ್ಳು ಭರವಸೆಗಳನ್ನು ಮಾತ್ರ ನೀಡುತ್ತಾರೆ” ಎಂದು ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: ಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ- ಕಮಲ್ ಹಾಸನ್

ಗೂರ್ಖಾಲ್ಯಾಂಡ್ ವಿಷಯದ ಕುರಿತು ಮಾತನಾಡಿದ ಮುಖ್ಯಮಂತ್ರಿ, “ಪ್ರತಿ ಚುನಾವಣೆಯಲ್ಲೂ ಅವರು ಗೂರ್ಖಾಲ್ಯಾಂಡ್‌ ಭರವಸೆ ನೀಡುತ್ತಾರೆ. ಆದರೆ ಈಡೇರಿಸುವುದಿಲ್ಲ. ಈ ವಿಷಯವನ್ನು ಡಾರ್ಜಿಲಿಂಗ್‌ನ ಜನರು ಈಗ ಅರಿತುಕೊಂಡಿದ್ದಾರೆ. ನಾವು ಮಾತ್ರ ಡಾರ್ಜಿಲಿಂಗ್‌ಗೆ ಶಾಶ್ವತ ಪರಿಹಾರವನ್ನು ನೀಡಬಲ್ಲೆವು’ ಎಂದು ಭರವಸೆ ನೀಡಿದ್ದಾರೆ.

ಗೂರ್ಖಾ ಜನಮುಕ್ತಿ ಮೋರ್ಚಾದ (GJM) ಹಿರಿಯ ನಾಯಕ ಬಿಮಲ್ ಗುರುಂಗ್ ಬಣದ ರೋಶನ್ ಗಿರಿ ಕೂಡ ಮುಂದಿನ ವರ್ಷದ ಪಶ್ಚಿಮ ಬಂಗಾಳ ವಿಧಾನಸಭ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಟಿಎಂಸಿ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

“ನಾವು ಬಿಜೆಪಿಯನ್ನು ನಂಬುವುದಿಲ್ಲ ಆದರೆ ತೃಣಮೂಲ ಕಾಂಗ್ರೆಸ್ ಮೇಲೆ ನಮಗೆ ನಂಬಿಕೆ ಇದೆ” ಎಂದು ಗೂರ್ಖಾ ಜನಮುಕ್ತಿ ಮೋರ್ಚಾದ  ರೋಶನ್ ಗಿರಿ ಹೇಳಿದ್ದರು.


ಇದನ್ನೂ ಓದಿ: ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...