Homeಮುಖಪುಟ'ನನ್ನನ್ನು ಹಣದಿಂದ ಖರೀದಿಸುವ ವ್ಯಕ್ತಿ ಇನ್ನೂ ಹುಟ್ಟಿಲ್ಲ' - ಮಮತಾಗೆ ತಿರುಗೇಟು ನೀಡಿದ ಓವೈಸಿ

‘ನನ್ನನ್ನು ಹಣದಿಂದ ಖರೀದಿಸುವ ವ್ಯಕ್ತಿ ಇನ್ನೂ ಹುಟ್ಟಿಲ್ಲ’ – ಮಮತಾಗೆ ತಿರುಗೇಟು ನೀಡಿದ ಓವೈಸಿ

ಇಲ್ಲಿನ ಮುಸಲ್ಮಾನರನ್ನು ವಿಭಜಿಸಲು ಹೈದರಾಬಾದ್‌ನಿಂದ ಒಂದು ಪಕ್ಷವನ್ನು ಕರೆತರಲು ಬಿಜೆಪಿ ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದರು

- Advertisement -
- Advertisement -

ಇಲ್ಲಿನ ಮುಸಲ್ಮಾನರನ್ನು ವಿಭಜಿಸಲು ಹೈದರಾಬಾದ್‌ನಿಂದ ಒಂದು ಪಕ್ಷವನ್ನು ಕರೆತರಲು ಬಿಜೆಪಿ ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿದ ಎಐಎಂಐಎಂ ಮುಖಂಡ ಅಸದುದ್ದೀನ್ ಓವೈಸಿ “ಓವೈಸಿಯನ್ನು ಹಣದಿಂದ ಖರೀದಿಸಬಲ್ಲ ವ್ಯಕ್ತಿ ಇನ್ನೂ ಹುಟ್ಟಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ವಿರೋಧಿ ಶಾಸನಗಳು ಮತ್ತು ಬಿಜೆಪಿಯ ಹತ್ತು ಸುಳ್ಳುಗಳು: ಶಿವಸುಂದರ್

“ಅಸದುದ್ದೀನ್ ಓವೈಸಿಯನ್ನು ಹಣದಿಂದ ಖರೀದಿಸಬಲ್ಲ ವ್ಯಕ್ತಿ ಹುಟ್ಟಿಲ್ಲ. ಆಕೆಯ ಆರೋಪ ಆಧಾರರಹಿತವಾಗಿದ್ದು, ಅವರು ಚಡಪಡಿಸುತ್ತಿದ್ದಾರೆ. ಅವರು ತನ್ನ ಸ್ವಂತ ಮನೆಯ ಬಗ್ಗೆ ಚಿಂತಿಸಬೇಕು. ಅವರ ಅನೇಕ ಜನರು ಬಿಜೆಪಿಗೆ ಹೋಗುತ್ತಿದ್ದಾರೆ. ನಮಗೆ ಮತ ಹಾಕಿದ ಬಿಹಾರದ ಮತದಾರರನ್ನು ಅವರು ಅವಮಾನಿಸಿದ್ದಾರೆ” ಎಂದು ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹಾದ್-ಉಲ್-ಮುಸ್ಲೀಮೀನ್ (ಎಐಐಎಂಐಎಂ) ಮುಖಂಡ ಓವೈಸಿ ಹೇಳಿದರು.

ಓವೈಸಿ ಅವರ ಪಕ್ಷವು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಸಾಧನೆ ತೋರಿದ ನಂತರ ಮುಂದಿನ ವರ್ಷದ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

ಇದನ್ನೂ ಓದಿ: ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ: ಎಡಪಕ್ಷಗಳ ಒಕ್ಕೂಟಕ್ಕೆ ಮುನ್ನಡೆ

ಪಶ್ಚಿಮ ಬಂಗಾಳದ ಗಡಿಯಲ್ಲಿರುವ ಬಿಹಾರದ ಮುಸ್ಲಿಂ ಪ್ರಾಬಲ್ಯದ ಸೀಮಾಂಚಲ್ ಪ್ರದೇಶದಲ್ಲಿ ಎಐಎಂಐಎಂ ಐದು ಸ್ಥಾನಗಳನ್ನು ಗೆದ್ದುಕೊಂಡಿತ್ತು.

“ಮುಸ್ಲಿಂ ಮತಗಳನ್ನು ವಿಭಜಿಸಲು, ಹೈದರಾಬಾದ್‌ನಿಂದ ಒಂದು ಪಕ್ಷವನ್ನು ತರಲು ಬಿಜೆಪಿ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಬಿಜೆಪಿ ಹಿಂದೂ ಮತಗಳನ್ನು ಪಡೆಯುತ್ತದೆ ಮತ್ತು ಈ ಹೈದರಾಬಾದ್ ಪಕ್ಷವು ಮುಸ್ಲಿಂ ಮತಗಳನ್ನು ಪಡೆಯುತ್ತದೆ ಎಂಬುದು ಅವರ ಯೋಜನೆಯಾಗಿದೆ. ಇತ್ತೀಚಿನ ಬಿಹಾರ ಚುನಾವಣೆಗಳಲ್ಲಿ ಈ ಪಕ್ಷವು ಬಿಜೆಪಿಯ ಬಿ-ತಂಡವಾಗಿದೆ” ಎಂದು ಮಮತಾ ಬ್ಯಾನರ್ಜಿ ಮಂಗಳವಾರ ಹೇಳಿದ್ದರು.

ಇದನ್ನೂ ಓದಿ: ಸಿದ್ದಾಂತ ಹೊಂದಿಕೆಯಾದರೆ ರಜನಿಕಾಂತ್‌ ಜೊತೆ ಮೈತ್ರಿಗೆ ಸಿದ್ದ: ಕಮಲ್ ಹಾಸನ್

ಮುಂದಿನ ವರ್ಷ ಬಂಗಾಳದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಓವೈಸಿ ಘೋಷಿಸಿದಾಗ, ಈ ಕ್ರಮವು ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸಬಹುದು ಮತ್ತು ತೃಣಮೂಲ ಕಾಂಗ್ರೆಸ್‌ಗೆ ಹೊಡೆತ ನೀಡಬಹುದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದರು.

ಮುಂದಿನ ವರ್ಷ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಪಶ್ಚಿಮ ಬಂಗಾಳದ 294 ಕ್ಷೇತ್ರಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.


ಇದನ್ನೂ ಓದಿ: ನಾವು ಹಿಂದುತ್ವವನ್ನು ಇನ್ನೂ ಬಿಟ್ಟು ಕೊಟ್ಟಿಲ್ಲ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿ.ಜೆ.ಪಿ.ಯ ವಿರೋಧಿ ಮತಗಳು ವಿಭಜನೆ ಆಗಬಾರದು ಎಂಬ ವಿವೇಕ ಎಲ್ಲಾ ವಿರೋಧ ಪಕ್ಷದವರಲ್ಲಿಯೂ ಇರಬೇಕು.

  2. ಎಲ್ಲಾ ರಾಜ್ಯಗಳ ಚುನಾವಣೆಯಲ್ಲಿ ಇದೇ ಗಿಮಿಕ್ ನಿಂದ BJP ಗೆಲ್ಲುತ್ತಿರುವುದು…
    BJP” B ” TEAM ಈ MIM..
    ಕರೆಕ್ಟ್.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...