“ರೈತರ ಪ್ರತಿಭಟನೆ ರಾಷ್ಟ್ರೀಯ ಸಮಸ್ಯೆಯಾಗಲಿದ್ದು, ಶೀಘ್ರವೇ ಮಾತುಕತೆಗಳ ಮೂಲಕ ಬಗೆಹರಿಸಿಕೊಳ್ಳಿ” ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಹೇಳಿದೆ. ರಾಷ್ಟ್ರರಾಜಧಾನಿಯಲ್ಲಿ ದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ.
ಈ ಪ್ರತಿಭಟನೆಯ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸರಣಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಇವುಗಳನ್ನು ವಿಚಾರಣೆ ನಡೆಸಿದ ಎ.ಎಸ್.ಬೋಬಡೆ ನೇತೃತ್ವದ ನ್ಯಾಯಪೀಠ, “ರೈತರ ಪ್ರತಿಭಟನೆ ರಾಷ್ಟ್ರೀಯ ವಿಷಯವಾಗುವ ಮುನ್ನ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಿ” ಎಂದು ಅರ್ಜಿದಾರರಿಗೆ ಹೇಳಿದೆ.
ಇದನ್ನೂ ಓದಿ: ರೈತ ಹೋರಾಟವನ್ನು ಹತ್ತಿಕ್ಕಲು ಹಿಂದೂ-ಸಿಖ್ಖರ ನಡುವೆ ಕೋಮುದ್ವೇಷ ಹರಡಲು ಪ್ರಯತ್ನ – ಸುಖ್‌ಬೀರ್ ಸಿಂಗ್
ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ, “ಮಾತುಕತೆಗಳು ಕೆಲಸಕ್ಕೆ ಬರುವುದಿಲ್ಲ. ಈಗಾಗಲೆ ಅವುಗಳೆಲ್ಲಾ ವಿಫಲವಾಗಿವೆ” ಎಂದು ಹೇಳಿದೆ.
ಹಾಗಾದರೆ ರೈತ ಪ್ರತಿನಿಧಿಗಳೂ ಸೇರಿದಂತೆ ಎಲ್ಲಾ ಭಾಗೀದಾರರ ಸಮಿತಿಯೊಂದನ್ನ ರಚಿಸಿ ಎಂದು ಹೇಳಿದ ನ್ಯಾಯಾಲಯ, ಈ ಕುರಿತು ಪ್ರತಿಕ್ರಿಯಿಸುವಂತೆ ದೆಹಲಿ, ಹರಿಯಾಣ ಮತ್ತು ಪಂಜಾಬ್ ಸರ್ಕಾರಗಳಿಗೆ ನೋಟಿಸ್ ನೀಡಿದ್ದು, ನಾಳೆಯೊಳಗೆ ಪ್ರತಿಕ್ರಿಯಿಸುವಂತೆ ಆದೇಶಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಸರ್ಕಾರದ ಪ್ರತಿನಿಧಿಗಳ ನಡುವೆ ಇದುವರೆಗೂ ಐದು ಸುತ್ತಿನ ಸಭೆಗಳು ನಡೆದಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ರೈತರನ್ನು ಭೇಟಿಯಾಗಿದ್ದರು. ಆದರೆ ಇವುಗಳೆಲ್ಲಾ ವಿಫಲವಾಗಿದ್ದವು.
ಇದನ್ನೂ ಓದಿ: ಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!
“ಸರ್ಕಾರ ಮಾತುಕತೆಗೆ ಸಿದ್ಧವಾಗಿದೆ. ಆದರೆ ರೈತರು ಕಾಯ್ದೆಗಳ ರದ್ದತಿಗೆ ಸಂಬಂಧಿಸಿದಂತೆ ‘ಹೌದು/ಇಲ್ಲ’ ಎನ್ನುವ ಉತ್ತರವನ್ನಷ್ಟೆ ಬಯಸಿದ್ದಾರೆ” ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿದೆ.
“ಈಗ ಕೆಲವು ಅನ್ಯ ಹಿತಾಸಕ್ತಿಗಳು ರೈತರ ಪ್ರತಿಭಟನೆಯನ್ನು ಕೈಗೆತ್ತಿಕೊಂಡಿದ್ದು, ಪ್ರತಿಭಟನೆಯನ್ನು ಮತ್ತು ರೈತರನ್ನು ಪ್ರಚೋದಿಸುತ್ತಿದೆ” ಎಂದು ಸರ್ಕಾರವು ಪ್ರತಿಪಕ್ಷಗಳನ್ನು ಹೆಸರಿಸದೆ ನ್ಯಾಯಾಲಯದಲ್ಲಿ ಆರೋಪಿಸಿದೆ.
ಇದನ್ನೂ ಓದಿ: ರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ – ದಿಲ್ಜಿತ್…


