Homeಚಳವಳಿರೈತರ ಹಕ್ಕೊತ್ತಾಯ ಬಗೆಹರಿಸುವ ಸ್ವತಂತ್ರ ಸಮಿತಿಯಲ್ಲಿ ಪಿ.ಸಾಯಿನಾಥ್, ಬಿಕೆಯು ಪ್ರತಿನಿಧಿಗಳು ಇರಲಿ: ಸುಪ್ರೀಂ ಕೋರ್ಟ್

ರೈತರ ಹಕ್ಕೊತ್ತಾಯ ಬಗೆಹರಿಸುವ ಸ್ವತಂತ್ರ ಸಮಿತಿಯಲ್ಲಿ ಪಿ.ಸಾಯಿನಾಥ್, ಬಿಕೆಯು ಪ್ರತಿನಿಧಿಗಳು ಇರಲಿ: ಸುಪ್ರೀಂ ಕೋರ್ಟ್

“ಸಮಾಜದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ. ರೈತರಿಗೂ ಪ್ರತಿಭಟಿಸುವ ಹಕ್ಕಿದ್ದು, ಅವರ ಹೋರಾಟ ಮುಂದುವರೆಯಬೇಕು. ಅಲ್ಲದೆ, ಯಾವುದೇ ಕಾರಣಕ್ಕೂ ರೈತರನ್ನು ಹೋರಾಟದ ಕಣದಿಂದ ತೆರವುಗೊಳಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ”

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ಮಾಡುತ್ತಿದ್ದು, ಈ ಕುರಿತು ಚರ್ಚಿಸಿ ಬಗೆಹರಿಸಲು ಸ್ವತಂತ್ರ ಸಮಿತಿಯೊಂದನ್ನು ರಚಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ. “ಈ ಸಮಿತಿಯಲ್ಲಿ ರೈತ ಸಂಘಟನೆಗಳ ಪ್ರತಿನಿಧಿಗಳು ಸೇರಿದಂತೆ ಖ್ಯಾತ ಚಿಂತಕ ಪಿ.ಸಾಯಿನಾಥ್ ಅವರನ್ನೂ ಒಳಗೊಳ್ಳಬಹುದು” ಎಂದು ಸಲಹೆ ನೀಡಿದೆ.

“ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಕಳೆದ 22 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ ಶಾಂತಿಯುತವಾಗಿ ಮುಂದುವರೆಯಲಿ, ಪೊಲೀಸರು ಏನು ಮಾಡಲಾಗುವುದಿಲ್ಲ. ಎಲ್ಲಿಯವರೆಗೆ ಆಸ್ತಿಪಾಸ್ತಿ ನಷ್ಟ ಅಥವಾ ಮನುಷ್ಯರ ಜೀವಕ್ಕೆ ಹಾನಿಯಾಗುವುದಿಲ್ಲವೋ ಅಲ್ಲಿಯವರೆಗೆ ರೈತರು ಪ್ರತಿಭಟಿಸುವ ಸಾಂವಿಧಾನಿಕ ಹಕ್ಕು ಹೊಂದಿದ್ದಾರೆ” ಎಂದು ಸಿಜೆಐ ಎಸ್.ಎ ಬೋಬ್ಡೆ ಹೇಳಿದ್ದಾರೆ.

ಇದನ್ನೂ ಓದಿ: ರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ 2 ಕ್ಕೆ ಮಾತ್ರ ರಾಹುಲ್ ಭಾಗಿ: ಕೇಂದ್ರ…

ಇದನ್ನೂ ಓದಿ: ರೈತರ ಹೋರಾಟ ಮುಂದುವರೆಯಲಿ. ಪ್ರತಿಭಟಿಸುವುದು ಸಾಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್

ರೈತರು ದೆಹಲಿ ತಲುಪುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಿರುವುದರಿಂದ ಔಷಧಿ ಪೂರೈಕೆಗೆ ತಡೆಯಾಗಿದೆ. ಹಾಗಾಗಿ ದೆಹಲಿ ಗಡಿಗಳಲ್ಲಿ ಹೋರಾಟ ನಿರತರನ್ನು ರೈತರನ್ನು ಇಲ್ಲಿಂದ ಹೊರಗೆ ಕಳಿಸಬೇಕೆಂದು ಸುಪ್ರೀಂನಲ್ಲಿ ದಾಖಲಾದ ಸರಣಿ ಪಿಐಎಲ್‌ಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ “ದೆಹಲಿಯ ರಸ್ತೆಗಳನ್ನು ನಿರ್ಬಂಧಿಸದೆ ರೈತರು ಪ್ರತಿಭಟನೆ ಮುಂದುವರೆಸಬಹುದು” ಎಂದಿದೆ.

ನಿನ್ನೆ ಈ ವಿಚಾರದ ಕುರಿತು ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಈ ಸಮಸ್ಯೆಯನ್ನು ನಿಭಾಯಿಸಲು ಸ್ವತಂತ್ರ ಸಮಿತಿಯೊಂದನ್ನು ರಚಿಸಿ, ಕೃಷಿಯ ಜ್ಞಾನ ಹೊಂದಿರುವ ಸ್ವತಂತ್ರ ಸದಸ್ಯರು ಮತ್ತು ಎರಡೂ ಕಡೆಯವರನ್ನು ಕೇಳಿ ಮತ್ತು ಏನು ಮಾಡಬೇಕೆಂಬುದರ ಬಗ್ಗೆ ವರದಿ ನೀಡಿ. ಈ ಸಮಿತಿಯಲ್ಲಿ ಪಿ.ಸಾಯಿನಾಥ್ ಸೇರಿದಂತೆ ರೈತ ಸಂಘಟನೆಗಳ ಪ್ರತಿನಿಧಿಗಳೂ ಇರಬಹುದು” ಎಂದು ಎಸ್‌.ಎ ಬೋಬ್ಡೆ ತಿಳಿಸಿದ್ದರು.

ಇದನ್ನೂ ಓದಿ: ಡಾ. ಕಫೀಲ್ ಖಾನ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ: ಯುಪಿ ಸರ್ಕಾರಕ್ಕೆ ಮುಖಭಂಗ

“ಸಮಾಜದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ. ರೈತರಿಗೂ ಪ್ರತಿಭಟಿಸುವ ಹಕ್ಕಿದ್ದು, ಅವರ ಹೋರಾಟ ಮುಂದುವರೆಯಬೇಕು. ಅಲ್ಲದೆ, ಯಾವುದೇ ಕಾರಣಕ್ಕೂ ರೈತರನ್ನು ಹೋರಾಟದ ಕಣದಿಂದ ತೆರವುಗೊಳಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.​

“ರೈತರಿಗೆ ಪ್ರತಿಭಟಿಸುವ ಹಕ್ಕಿದೆ. ಹಿಂಸಾಚಾರವಿಲ್ಲದೆ ಪ್ರತಿಭಟನೆಗಳು ಮುಂದುವರಿಯಬಹುದು. ಹೀಗಾಗಿ ಪೊಲೀಸರು ಈ ಹೋರಾಟವನ್ನು ನಿಗ್ರಹಿಸಲು ಮುಂದಾಗುವುದು ಸರಿಯಲ್ಲ. ರೈತರೂ ಸಹಾ ನಗರವೊಂದನ್ನು ಸುತ್ತುವರೆಯುವುದಾಗಲೀ, ಹಿಂಸೆಯನ್ನು ಪ್ರಚೋದಿಸುವುದನ್ನಾಗಲೀ ಮಾಡಬಾರದು” ಎಂದು ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೊಬ್ಡೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

“ಕೇವಲ ಪ್ರತಿಭಟನೆಗಾಗಿ ಪ್ರತಿಭಟನೆಗಳಾಗಬಾರದು. ಅವು ಕೃಷಿ ದೃಷ್ಟಿಕೋನದಿಂದ ಕೂಡಿರಬೇಕು ಎಂದು ಅರ್ಜಿದಾರರ ಪರವಾಗಿ ಹಿರಿಯ ವಕೀಲ ಹರೀಶ್​ ಸಾಳ್ವೆ ವಾದ ಮಂಡಿಸಿದಾಗ ಅದನ್ನೆ ನಾವು ಹೇಳುತ್ತಿರುವುದು ಎಂದು ಸುಪ್ರೀ ಕೋರ್ಟ್ ಹೇಳಿದೆ.

“ಪ್ರತಿಭಟನೆಯ ಉದ್ದೇಶವು ಅಹಿಂಸಾತ್ಮಕ ವಿಧಾನಗಳಿಂದ ಈಡೇರಬೇಕು. ಪ್ರತಿಭಟನೆಗಳು ಸಮಸ್ಯೆಗಳ ಬಗ್ಗೆ ಇರಬೇಕು. ಅನ್ಯಾಯಕ್ಕೊಳಗಾದವರಿಗೆ ಪ್ರತಿಭಟಿಸಲು ತಮ್ಮ ಪರವಾದ ನ್ಯಾಯವನ್ನು ಮಂಡಿಸಲು ಅವಕಾಶ ನೀಡಬೇಕು ಮತ್ತು ಸಮಸ್ಯೆಗೆ ಕಾರಣವಾದ ವ್ಯಕ್ತಿಗಳು ಅದಕ್ಕೆ ತಕ್ಕ ಉತ್ತರ ನೀಡಬೇಕು” ಎಂದು ಎಸ್‌.ಎ ಬೋಬ್ಡೆ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಸಿಐಡಿ ವಿಭಾಗದ ಡಿವೈಎಸ್ಪಿ ಲಕ್ಷ್ಮಿ(33) ಅಸಹಜ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...