Homeಮುಖಪುಟಬಿಜೆಪಿ ಸಂಸದರ ಮೇಲೆ ಮಾನಹಾನಿ ಪ್ರಕರಣ: ಸಮನ್ಸ್‌ ರದ್ದತಿ ಕೋರಿದ್ದ ಮನವಿ ತಿರಸ್ಕಾರ

ಬಿಜೆಪಿ ಸಂಸದರ ಮೇಲೆ ಮಾನಹಾನಿ ಪ್ರಕರಣ: ಸಮನ್ಸ್‌ ರದ್ದತಿ ಕೋರಿದ್ದ ಮನವಿ ತಿರಸ್ಕಾರ

ಮನೋಜ್ ತಿವಾರಿ ತಮ್ಮ ವಿರುದ್ಧ ಆಧಾರರಹಿತ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ ಎಂದು ಅವರ ಮೇಲೆ ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ದೆಹಲಿಯ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಮಾನಹಾನಿ ಪ್ರಕರಣ ದಾಖಲಿಸಿದ್ದರು.

- Advertisement -
- Advertisement -

ಬಿಜೆಪಿ ಸಂಸದ ಮನೋಜ್ ತಿವಾರಿ ವಿರುದ್ಧ ಕ್ರಿಮಿನಲ್ ಮಾನಹಾನಿಗೆ ಸಂಬಂಧಿಸಿದಂತೆ ಆಪ್ ಮುಖಂಡ ಮನಿಶ್ ಸಿಸೋಡಿಯಾ ಪ್ರಕರಣ ದಾಖಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಲಾಗಿತ್ತು. ಇದನ್ನು ರದ್ದುಗೊಳಿಸುವಂತೆ ಮನೋಜ್ ತಿವಾರಿ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಮನವಿಯನ್ನು ಕೋರ್ಟ್ ಇಂದು ತಿರಸ್ಕರಿಸಿದೆ.

ಮನೋಜ್ ತಿವಾರಿ ತಮ್ಮ ವಿರುದ್ಧ ಆಧಾರರಹಿತ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ ಎಂದು ಅವರ ಮೇಲೆ ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ದೆಹಲಿಯ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಮಾನಹಾನಿ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: ಟಿಆರ್‌ಪಿ ಹಗರಣ: BARC ನ ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್‌ ರಾಮ್‌ಗರ‍್ಹಿಯಾ ಬಂಧನ

ದೆಹಲಿ ಸರ್ಕಾರದ ‘ಶಾಲಾ ತರಗತಿ ಕೊಠಡಿಗಳ’ ಯೋಜನೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಕ್ಕಾಗಿ ಸಂಸದರಾದ ಮನೋಜ್ ತಿವಾರಿ, ಹನ್ಸ್ ರಾಜ್ ಹನ್ಸ್ ಮತ್ತು ಪ್ರವೀಶ್ ವರ್ಮಾ, ಶಾಸಕರಾದ ಮಂಜಿಂದರ್ ಸಿಂಗ್ ಸಿರ್ಸಾ ಮತ್ತು ವಿಜೇಂದರ್ ಗುಪ್ತಾ ಮತ್ತು ಬಿಜೆಪಿ ವಕ್ತಾರ ಹರೀಶ್ ಖುರಾನಾ ವಿರುದ್ಧ ಮನಿಶ್ ಸಿಸೋಡಿಯಾ ದೂರು ದಾಖಲಿಸಿದ್ದರು.

ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾದ ನಂತರ ಆರೋಪಿಗಳಿಗೆ ಜಾಮೀನು ನೀಡಲಾಗಿತ್ತು.

ಇದನ್ನೂ ಓದಿ: ರೈತರು ಮಾತು ಕೇಳಲು ಇನ್ನೆಷ್ಟು ರೈತರ ಬಲಿಬೇಕು?: ಕೃಷಿ ಮಸೂದೆ ಹರಿದು ಆಕ್ರೋಶ ಹೊರಹಾಕಿದ…

ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಮತ್ತು ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಐಪಿಸಿಯ ಸೆಕ್ಷನ್ 499 ಮತ್ತು 500 ರ ಸೆಕ್ಷನ್ 49 ಮತ್ತು 35 ಮತ್ತು ಸಿಆರ್‌ಪಿಸಿಯ ಸೆಕ್ಷನ್ 200 ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ.

ಈ ಪ್ರಕರಣದಲ್ಲಿ ಅಪರಾಧ ಸಾಬೀತಾದರೆ ಗರಿಷ್ಟ 2 ವರ್ಷಗಳವರೆಗೆ ಶಿಕ್ಷೆಗೆ ಗುರಿಯಾಗಬಹುದು. ಹಾಗಾಗಿ ತಮ್ಮ ವಿರುದ್ಧ ನೀಡಲಾಗಿರುವ ಸಮನ್ಸ್‌ ಅನ್ನು ರದ್ದುಗೊಳಿಸುವಂತೆ ಮನೋಜ್ ತಿವಾರಿ ಮನವಿ ಸಲ್ಲಿಸಿದ್ದರು.


ಇದನ್ನೂ ಓದಿ: ಜಿಯೋದಿಂದ ಹೊರನಡೆದ 26 ಲಕ್ಷ ಗ್ರಾಹಕರು: ರೈತರ ಬಾಯ್ಕಾಟ್ ಕರೆಗೆ Jio ಕಂಗಾಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...