Homeಚಳವಳಿಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಖ್ಯಾತ ಅರ್ಥಶಾಸ್ತ್ರಜ್ಞರು

ಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಖ್ಯಾತ ಅರ್ಥಶಾಸ್ತ್ರಜ್ಞರು

ಈ ಕಾನೂನುಗಳು ದೊಡ್ಡ ಕೃಷಿ ವ್ಯವಹಾರಗಳು ಕೃಷಿಯಲ್ಲಿ ಪ್ರಾಬಲ್ಯದ ಸಾಧಿಸುವ ಬಗ್ಗೆ ಕಳವಳ ಮೂಡಿಸುತ್ತವೆ. ಇಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರು ತಮ್ಮ ಹಿತಾಸಕ್ತಿಯನ್ನು ಬಲಿಕೊಡಬೇಕಾಗುತ್ತದೆ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಪಟ್ಟು ಹಿಡಿದಿರುವ ರೈತರ ಪ್ರತಿಭಟನೆ ಮೂರು ವಾರಗಳನ್ನು ಪೂರ್ಣಗೊಳಿಸಿದೆ. ಅನ್ನದಾತರ ಹೋರಾಟಕ್ಕೆ ರಾಜಕೀಯ ಪಕ್ಷಗಳು, ದೇಶದಾದ್ಯಂತ ಹಲವು ಸಂಘಟನೆಗಳು ಕೈ ಜೋಡಿಸಿವೆ. ಈಗ ಈ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ 10 ಹಿರಿಯ ಖ್ಯಾತ ಅರ್ಥಶಾಸ್ತ್ರಜ್ಞರು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ಗೆ ಪತ್ರ ಬರೆದಿದ್ದಾರೆ.

ದೇಶದ ಸಣ್ಣ ಮತ್ತು ಅಂಚಿನಲ್ಲಿರುವ ಅತಿಸಣ್ಣ ರೈತರ ಹಿತಾಸಕ್ತಿಗಳಿಲ್ಲದ ಕಾರಣ ಈ ಕಾನೂನುಗಳನ್ನು ರದ್ದುಗೊಳಿಸಬೇಕಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದು, ಕೃಷಿ ಕಾನೂನುಗಳ ಏಕೆ ರದ್ದಾಗಬೇಕು ಎಂಬುದಕ್ಕೆ 5 ಕಾರಣಗಳನ್ನು ನೀಡಿದ್ದಾರೆ.

“ದೇಶದ ಸಣ್ಣ ಮತ್ತು ಅತಿಸಣ್ಣ ರೈತರ ಹಿತದೃಷ್ಟಿ ಹೊಂದಿಲ್ಲದ ಇತ್ತೀಚಿನ ಕೃಷಿ ಕಾಯ್ದೆಗಳನ್ನು ಭಾರತ ಸರ್ಕಾರ ರದ್ದುಪಡಿಸಬೇಕು ಎಂದು ನಾವು ಆಗ್ರಹಿಸುತ್ತೇವೆ. ಈ ಕಾಯ್ದೆಗಳ ಬಗ್ಗೆ ರೈತ ಸಂಘಟನೆಗಳು ಭಾರಿ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿವೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕೃಷಿ ವ್ಯಾಪಾರೋದ್ಯಮವನ್ನು ಸುಧಾರಿಸುವ ಅವಶ್ಯಕತೆ ಇದೆ. ಆದರೆ, ಈ ಕಾನೂನುಗಳು ಆ ಉದ್ದೇಶವನ್ನು ಪೂರೈಸುವುದಿಲ್ಲ ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಈ ವಿವಾದಾತ್ಮಕ ಕೃಷಿ ಕಾನೂನುಗಳು ಸಣ್ಣ ರೈತರಿಗೆ ಮೂಲಭೂತವಾಗಿ ಹಾನಿಕಾರಕವಾಗಿರುವುದಕ್ಕೆ ಐದು ಕಾರಣಗಳನ್ನು ಅರ್ಥಶಾಸ್ತ್ರಜ್ಞರು ಪಟ್ಟಿ ಮಾಡಿದ್ದಾರೆ.

೧. ಈ ಕಾನೂನುಗಳು, ರಾಜ್ಯ ಸರ್ಕಾರಗಳ ಪಾತ್ರವನ್ನು ದುರ್ಬಲಗೊಳಿಸುತ್ತವೆ. ಆದರೆ, ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ರೈತರ ಹಿತಾಸಕ್ತಿಗಳಿಗೆ ಹೆಚ್ಚು ಬೇಗ ಸ್ಪಂದಿಸಬಹುದು ಮತ್ತು ಜವಾಬ್ದಾರಿ ಹೊಂದಿರುತ್ತದೆ.

೨. ಈ ಕಾನೂನುಗಳು ಎರಡು ನಿಯಮಗಳೊಂದಿಗೆ ಎರಡು ಮಾರುಕಟ್ಟೆಗಳ ರಚನೆಗೆ ಕಾರಣವಾಗುತ್ತವೆ. “ಎಪಿಎಂಸಿ ಮಾರುಕಟ್ಟೆ ಪ್ರಾಂಗಣಗಳಲ್ಲಿ ನಿಯಂತ್ರಿತ ಮಾರುಕಟ್ಟೆ ಮತ್ತು ವ್ಯಾಪಾರ ಪ್ರದೇಶದಲ್ಲಿ ಅನಿಯಂತ್ರಿತ ಮಾರುಕಟ್ಟೆ ಸೃಷ್ಟಿಯಾಗುತ್ತದೆ. ಎರಡು ಕೂಡ ವಿಭಿನ್ನ ಕಾರ್ಯಗಳಿಗೆ, ಮಾರುಕಟ್ಟೆ ಶುಲ್ಕದ ವಿಭಿನ್ನ ನಿಯಮಗಳು ಮತ್ತು ವಿಭಿನ್ನ ಗುಂಪುಗಳ ನಿಯಮಗಳ ಸೃಷ್ಟಿ ಈ ಕಾನೂನುಗಳು ಕಾರಣವಾಗುತ್ತವೆ.

೩. ಕಾನೂನುಗಳು ಛಿದ್ರಗೊಂಡ ಮಾರುಕಟ್ಟೆಗಳನ್ನು ಸೃಷ್ಟಿಸುತ್ತವೆ. ಉದಾಹರಣೆಗೆ ಬಿಹಾರ ರಾಜ್ಯವನ್ನು ತೆಗೆದುಕೊಳ್ಳಬಹುದು. ಬಿಹಾರದಲ್ಲಿ 2006 ರಲ್ಲಿ ಎಪಿಎಂಸಿ ಕಾಯ್ದೆಯನ್ನು ತೆಗೆದುಹಾಕಲಾಯಿತು. ಇದರಿಂದಾಗಿ ಅಲ್ಲಿ ರೈತರಿಗೆ ಕಡಿಮೆ ಖರೀದಿದಾರರು ಇದ್ದು ಬೇರೆ ರಾಜ್ಯಗಳಿಗೆ ಹೋಲಿಸಿದರೆ ಬೆಳೆಗಳ ಬೆಲೆಗಳು ಗಮನಾರ್ಹವಾಗಿ ಕಡಿಮೆಯಾಗಿವೆ.

ಇದನ್ನೂ ಓದಿ: ರೈತರ ಹೋರಾಟ ಮುಂದುವರೆಯಲಿ. ಪ್ರತಿಭಟಿಸುವುದು ಸಾಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್

PC : APN Live

೪. ಕೃಷಿಯ ಒಪ್ಪಂದದ ಕಾನೂನಿನ ಪ್ರಕಾರ ಮಾರುಕಟ್ಟೆ ಅಸಮಾನತೆ ಇರುವ ಇಬ್ಬರು ವ್ಯವಹಾರ ನಡೆಸುವಂತಾಗುತ್ತದೆ. ಕಾರ್ಪೊರೇಟರ್‌ ಕಂಪನಿಗಳು ಬರುತ್ತವೆ. ಇವರಿಂದ ರೈತರ ಹಿತಾಸಕ್ತಿಗಳನ್ನು ರಕ್ಷಿಸಲಾಗುವುದಿಲ್ಲ.

೫. ಅಂತಿಮವಾಗಿ, ಈ ಕಾನೂನುಗಳು ದೊಡ್ಡ ಕೃಷಿ ವ್ಯವಹಾರಗಳು ಕೃಷಿಯಲ್ಲಿ ಪ್ರಾಬಲ್ಯದ ಸಾಧಿಸುವ ಬಗ್ಗೆ ಕಳವಳ ಮೂಡಿಸುತ್ತವೆ. ಇಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರು ತಮ್ಮ ಹಿತಾಸಕ್ತಿಯನ್ನು ಬಲಿಕೊಡಬೇಕಾಗುತ್ತದೆ.

ಇದನ್ನೂ ಓದಿ: ಡಾ. ಕಫೀಲ್ ಖಾನ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ: ಯುಪಿ ಸರ್ಕಾರಕ್ಕೆ ಮುಖಭಂಗ

ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಪ್ರೊ.ಡಿ.ನರಸಿಂಹ ರೆಡ್ಡಿ, ನವದೆಹಲಿಯ ಸಾಮಾಜಿಕ ವಿಜ್ಞಾನ ಸಂಸ್ಥೆಯ ನಿವೃತ್ತ ಪ್ರೊ.ಕಮಲ್ ನಯನ್ ಕಬ್ರಾ,  ತಿರುವನಂತಪುರಂನ ಅಭಿವೃದ್ಧಿ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಮತ್ತು ಕೇರಳ ರಾಜ್ಯ ಯೋಜನಾ ಮಂಡಳಿಯ ಸದಸ್ಯರಾದ ಪ್ರೊ.ಕೆ.ಎನ್. ಹರಿಲಾಲ್, ರೋಹ್ಟಕ್‌ನ ಎಂ.ಡಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಪ್ರೊ.ರಜಿಂದರ್ ಚೌಧರಿ, ಚಂಡೀಗಢದ ಸಿಆರ್‌ಆರ್‌ಐಡಿಯ ಪ್ರೊ.ಸುರಿಂದರ್ ಕುಮಾರ್ ಪತ್ರಕ್ಕೆ ಸಹಿ ಮಾಡಿದ್ದಾರೆ.

ಇನ್ನೂ, ನವದೆಹಲಿಯ ಸಾಮಾಜಿಕ ವಿಜ್ಞಾನ ಸಂಸ್ಥೆಯ ಮಾಲ್ಕಮ್ ಎಸ್. ಆದಿಶೇಶಿಯ ಚೇರ್ ಪ್ರೊಫೆಸರ್  ಪ್ರೊ.ಅರುಣ್ ಕುಮಾರ್, ಅಮೃತಸರದ ಗುರುನಾನಕ್ ದೇವ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಚಂಡೀಗಢದ CRRIDಯಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕ ಪ್ರೊ.ರಂಜಿತ್ ಸಿಂಗ್ ಘುಮನ್, ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನಲ್ಲಿ ನಬಾರ್ಡ್ ಚೇರ್ ಪ್ರೊಫೆಸರ್ ಪ್ರೊ.ಆರ್.ರಾಮಕುಮಾರ್, ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸೆಂಟರ್ ಫಾರ್ ಎಕನಾಮಿಕ್ ಸ್ಟಡೀಸ್ ಅಂಡ್ ಪ್ಲಾನಿಂಗ್ (CESP) ಯಲ್ಲಿ ಅರ್ಥಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾದ ವಿಕಾಸ್ ರಾವಲ್ ಮತ್ತು ಹಿಮಾಂಶು ಅರ್ಥಶಾಸ್ತ್ರಜ್ಞರು ಸಹಿ ಮಾಡಿ ಪತ್ರ ಬರೆದಿದ್ದಾರೆ.

ಈ ಹೊಸ ವಿವಾದಾತ್ಮಕ ಕಾನೂನುಗಳನ್ನು ತಿದ್ದುಪಡಿ ಮಾಡುವುದು ಸಾಕಾಗುವುದಿಲ್ಲ, ಅವುಗಳನ್ನು ಹಿಂತೆಗೆದುಕೊಳ್ಳಬೇಕು. ರೈತರ ನಿಜವಾದ ಕಾಳಜಿಯನ್ನು ದಾರಿ ತಪ್ಪಿಸಲಾಗಿದೆ ಎಂದು ಚಿತ್ರಿಸಬಾರದು ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಾರೆ.

ಯಾವ ಕ್ರಮಗಳು ರೈತರಿಗೆ ಮತ್ತು ಆರ್ಥಿಕತೆಗೆ ಸಮನಾದ ಮತ್ತು ಸುಸ್ಥಿರ ಲಾಭವನ್ನು ತರುತ್ತವೆ ಎಂಬುದರ ಕುರಿತು ರೈತ ಸಂಘಟನೆಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸರ್ಕಾರ ವ್ಯಾಪಕವಾದ ಚರ್ಚೆ ನಡೆಸಬೇಕೆಂದು ಅರ್ಥಶಾಸ್ತ್ರಜ್ಞರು ಕರೆ ನೀಡುತ್ತಾರೆ. ಜೊತೆಗೆ  “ಇದು ನಿಜವಾದ ಪ್ರಜಾಪ್ರಭುತ್ವದ ಕೆಲಸ” ಎಂದು ಪತ್ರದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...