HomeಮುಖಪುಟIPS ಅಧಿಕಾರಿಗಳ ವರ್ಗಾವಣೆ: ಮಮತಾ ಬ್ಯಾನರ್ಜಿ ಬೆನ್ನಿಗೆ ನಿಂತ ಕೇಜ್ರೀವಾಲ್

IPS ಅಧಿಕಾರಿಗಳ ವರ್ಗಾವಣೆ: ಮಮತಾ ಬ್ಯಾನರ್ಜಿ ಬೆನ್ನಿಗೆ ನಿಂತ ಕೇಜ್ರೀವಾಲ್

’ಕೇಂದ್ರ ಸರ್ಕಾರ ರಾಜ್ಯಗಳ ಹಕ್ಕುಗಳನ್ನು ಅತಿಕ್ರಮಿಸಿ, ಒಕ್ಕೂಟ ವ್ಯವಸ್ಥೆ ಮೇಲೆ ಆಕ್ರಮಣ ಮಾಡಿ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ’- ಅರವಿಂದ್ ಕೇಜ್ರಿವಾಲ್

- Advertisement -
- Advertisement -

‌ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯ ಹಿನ್ನಲೆಯಲ್ಲಿ ಐಪಿಎಸ್ ಅಧಿಕಾರಿಗಳನ್ನು ವಿಚಾರಣೆಗೆ ಕಳುಹಿಸದ ಪಶ್ಚಿಮ ಬಂಗಾಳ ಸರ್ಕಾರದ ಕ್ರಮಕ್ಕೆ ಕೇಂದ್ರ ಗೃಹ ಸಚಿವಾಲಯ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಈ ವರ್ಗಾವಣೆಯನ್ನು ಕೇಂದ್ರದ ನಿರ್ದಯ ಹಸ್ತಕ್ಷೇಪ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಂಡಿಸಿದ್ದರು. ಈಗ ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೇಂದ್ರದ ಕ್ರಮವನ್ನು ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನೇಮಕಗೊಂಡ ಮೂವರು ಐಪಿಎಸ್ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಬಂಗಾಳದಲ್ಲಿ ಕೇಂದ್ರದ ನಿರ್ದಯ ಹಸ್ತಕ್ಷೇಪವನ್ನು ಖಂಡಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ನಡ್ಡಾ ಕಾರಿಗೆ ಕಲ್ಲು ಪ್ರಕರಣ: 3 ಐಪಿಎಸ್ ಅಧಿಕಾರಿಗಳನ್ನು ಡೆಪ್ಯೂಟೇಷನ್ ಮಾಡಿದ ಕೇಂದ್ರ

 

“ಪಶ್ಚಿಮ ಬಂಗಾಳದ ಆಡಳಿತದಲ್ಲಿ ಕೇಂದ್ರದ ನಿರ್ದಯ ಹಸ್ತಕ್ಷೇಪವನ್ನು ನಾನು ಖಂಡಿಸುತ್ತೇನೆ. ಚುನಾವಣೆ ಹತ್ತಿರುವಿರುವಾಗ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೇಂದ್ರಕ್ಕೆ ವರ್ಗಾಯಿಸಲು ಪ್ರಯತ್ನಿಸುವ ಮೂಲಕ ರಾಜ್ಯಗಳ ಹಕ್ಕುಗಳನ್ನು ಅತಿಕ್ರಮಿಸುತ್ತಿದೆ. ಈ ಮೂಲಕ ಒಕ್ಕೂಟ ವ್ಯವಸ್ಥೆ ಮೇಲೆ ಆಕ್ರಮಣ ಮಾಡಿ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ” ಎಂದು ಟ್ವೀಟ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

ಟ್ವೀಟ್ ಜೊತೆಗೆ ಮಮತಾ ಬ್ಯಾನರ್ಜಿಯವರು ನಿನ್ನೆ ಕೇಂದ್ರದ ಕ್ರಮವನ್ನು ಟೀಕಿಸಿ ಮಾಡಿದ್ದ ಟ್ವೀಟ್ ಅನ್ನು ಟ್ಯಾಗ್ ಮಾಡಿದ್ದಾರೆ. ಈ ಮೂಲಕ ಮಮತಾ ಬ್ಯಾನರ್ಜಿ ಮತ್ತು ಕೇಂದ್ರ ಸರ್ಕಾರದ ನಡುವೆ ನಡೆಯುತ್ತಿರುವ ಗುದ್ದಾಟದಲ್ಲಿ ಮಮತಾ ಬ್ಯಾನರ್ಜಿ ಪರ ನಿಂತಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯ ಹಿನ್ನಲೆಯಲ್ಲಿ, ಪೊಲೀಸ್ ಮಹಾ ನಿರ್ದೇಶಕ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ವಿಚಾರಣೆಗೆ ಹಾಜರಾಗಬೇಕು ಎಂದು 2 ಬಾರಿ ನೋಟಿಸ್ ನೀಡಿತ್ತು. ಆದರೆ ಪಶ್ಚಿಮ ಬಂಗಾಳ ಸರ್ಕಾರ ಯಾರನ್ನೂ ವಿಚಾರಣೆಗಾಗಿ ಕಳುಹಿಸಿರಲಿಲ್ಲ. ನಾವು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಘಟನೆ ಕುರಿತು ವಿವರಣೆ ನೀಡಿದ್ದೇವೆ ಎಂದು ಹೇಳಿ ಸುಮ್ಮನಾಗಿತ್ತು. ಈ ಹಿನ್ನೆಲೆ ಕೇಂದ್ರ ಗೃಹ ಸಚಿವಾಲಯ ಈಗ ಮೂವರು ಐಪಿಎಸ್ ಅಧಿಕಾರಿಗಳಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.

ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸರ್ಕಾರ, ಕಳೆದ ಕೆಲವು ತಿಂಗಳಿನಿಂದ ಹಲವು ರ್‍ಯಾಲಿಗಳನ್ನು ಆಯೋಜಿಸುತ್ತಿದೆ. ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ, ಸಂಸದ ತೇಜಸ್ವಿ ಸೂರ್ಯ ಅನೇಕ ಸಾರ್ವಜನಿಕ ಸಭೆ, ರ್‍ಯಾಲಿಗಳನ್ನು ಆಯೋಜಿಸಿ, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಜೊತೆಗೆ ಟಿಎಂಸಿಯ ಮುಖಂಡರನ್ನು ತಮ್ಮ ಪಕ್ಷದತ್ತ ಸೆಳೆಯುತ್ತಾ ಆಪರೇಷನ್ ಕಮಲ ಶುರು ಮಾಡಿದೆ.


ಇದನ್ನೂ ಓದಿ: ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...