Homeಚಳವಳಿರೈತ ಹೋರಾಟ: ಅನ್ನದಾತರಿಗೆ ಆಹಾರ ವಿತರಿಸಿದ ಬಾಕ್ಸರ್‌ ವಿಜೇಂದರ್ ಸಿಂಗ್

ರೈತ ಹೋರಾಟ: ಅನ್ನದಾತರಿಗೆ ಆಹಾರ ವಿತರಿಸಿದ ಬಾಕ್ಸರ್‌ ವಿಜೇಂದರ್ ಸಿಂಗ್

ಕರಾಳ ಕೃಷಿ ಕಾನೂನುಗಳನ್ನು ಹಿಂಪಡೆಯದಿದ್ದರೆ ತನಗೆ ಸಿಕ್ಕಿರುವ ಕ್ರೀಡಾ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನವನ್ನು ಹಿಂದಿರುಗಿಸುವುದಾಗಿ ವಿಜೇಂದರ್ ಸಿಂಗ್ ಘೋಷಿಸಿದ್ದಾರೆ.

- Advertisement -
- Advertisement -

ದೆಹಲಿಯ ಟಿಕ್ರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರಿಗೆ ಜಮೀನ್ದಾರ ವಿದ್ಯಾರ್ಥಿ ಸಂಸ್ಥೆ (ಜೆಎಸ್‌ಒ) ಆಯೋಜಿಸಿದ್ದ ವತಿಯಿಂದ ಕಾಂಗ್ರೆಸ್ ಮುಖಂಡ ಮತ್ತು ಬಾಕ್ಸರ್ ವಿಜೇಂದರ್ ಸಿಂಗ್ ರೈತರಿಗೆ ಆಹಾರ ವಿತರಿಸಿದ್ದಾರೆ.

ರೈತ ವಿರೋಧಿ ಕಾನೂನುಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟಕ್ಕೆ ಬಾಕ್ಸಿಂಗ್ ಚಾಂಪಿಯನ್ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ವಿಜೇಂದರ್‌ ಸಿಂಗ್ ಬೆಂಬಲ ನೀಡಿದ್ದಾರೆ.

“ನಾವು ನಮ್ಮ ದೇಶದ ರೈತರಿಗೆ ಸೇವೆ ಸಲ್ಲಿಸಲು ನಾವು ಇಲ್ಲಿದ್ದೇವೆ. ನಮ್ಮ ಹೋರಾಟವು ಸರ್ಕಾರದ ವಿರುದ್ಧವಲ್ಲ. ಆದರೆ, ಆ ಮೂರು ಕರಾಳ ಕಾನೂನುಗಳ ವಿರುದ್ಧ” ಎಂದು ವಿಜೇಂದರ್‌ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ರೈತರ ಹೋರಾಟ ಮುಂದುವರೆಯಲಿ. ಪ್ರತಿಭಟಿಸುವುದು ಸಾಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್

ರೈತರ ಪ್ರತಿಭಟನೆಗೆ ಬೆಂಬಲ ಕೊಟ್ಟ ಕ್ರೀಡಾಪಟುಗಳಲ್ಲಿ ಒಲಂಪಿಯನ್ ವಿಜೇಂದರ್‌ ಸಿಂಗ್ ಕೂಡ ಒಬ್ಬರು. ಕರಾಳ ಕೃಷಿ ನೀತಿಯನ್ನು ಹಿಂಪಡೆಯದಿದ್ದರೆ ತನಗೆ ಸಿಕ್ಕಿರುವ ಕ್ರೀಡಾ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನವನ್ನು ಹಿಂದಿರುಗಿಸುವುದಾಗಿ ಅವರು ಘೋಷಿಸಿದ್ದಾರೆ.

ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿಜೇಂದರ್‌ ಸಿಂಗ್ “ನಾನು ಪಂಜಾಬ್‌ನಲ್ಲಿ ತರಬೇತಿ ಪಡೆದಿದ್ದೇನೆ ಮತ್ತು ಅಲ್ಲಿನ ರೊಟ್ಟಿ ತಿಂದಿದ್ದೇನೆ. ಇಂದು ರೈತರು ಚಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗಾಗಿ ನಾನು ಅವರ ಸೋದರನಾಗಿ ಬಂದಿದ್ದೇನೆ. ಹರಿಯಾಣದ ಇತರ ಕ್ರೀಡಾಪಟುಗಳು ಕೂಡಾ ಪ್ರತಿಭಟನಾ ಸ್ಥಳಕ್ಕೆ ಬರಲು ಬಯಸಿದ್ದರು. ಆದರೆ ಅವರಿರುವ ಸರ್ಕಾರಿ ಉದ್ಯೋಗಳು ಅವರಿಗೆ ಬರದಂತೆ ತಡೆಯುತ್ತಿವೆ. ಅವರೂ ರೈತರ ಪರವಿದ್ದಾರೆ” ಎಂದು ಹೇಳಿದ್ದಾರೆ.

ಹರಿಯಾಣದ ವಿಜೇಂದರ್ ಸಿಂಗ್ ಅವರು ಒಲಿಂಪಿಕ್‌ನ ಬಾಕ್ಸಿಂಗ್‌ ವಿಭಾಗದಲ್ಲಿ ಭಾರತಕ್ಕೆ ಪದಕ ಗೆದ್ದ ಮೊದಲ ಬಾಕ್ಸರ್. ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‌ ಟಿಕೆಟ್‌‌ನಲ್ಲಿ ದಕ್ಷಿಣ ದೆಹಲಿಯಿಂದ ಸ್ಪರ್ಧಿಸಿ ಸೋತಿದ್ದರು.


ಇದನ್ನೂ ಓದಿ: ಕೃಷಿ ಕಾನೂನು ಹಿಂಪಡೆಯದಿದ್ದರೆ ಖೇಲ್ ರತ್ನ ಪ್ರಶಸ್ತಿ ವಾಪಾಸ್: ಬಾಕ್ಸರ್‌ ವಿಜೇಂದರ್‌ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...