Homeಕರ್ನಾಟಕಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ಧರ್ಮದ ಅಮಲಿನಲ್ಲಿ ತೇಲಾಡ್ತಾ ಇರೋ ಕನ್ನಡಿಗರೆ, ಇವತ್ತು ಕನ್ನಡ ನಾಡಿನಲ್ಲಿ ಕನ್ನಡ ವಿವಿಗೆ ಬಂದ ಗತಿಯೇ, ನಾಳೆ ಕನ್ನಡ ನಾಡಿನ ಕನ್ನಡಿಗರಿಗೆ ಬರುತ್ತದೆ, ಎಚ್ಚರ ಎಂದು ಟ್ವಿಟ್ಟರಿಗರು ಎಚ್ಚರಿಸಿದ್ದಾರೆ.

- Advertisement -
- Advertisement -

ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಅನುದಾನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕರೆ ಕೊಟ್ಟಿದ್ದ ಟ್ವಿಟರ್ ಅಭಿಯಾನಕ್ಕೆ ಭಾರಿ ಬೆಂಬಲ ವ್ಯಕ್ತವಾಗುತ್ತಿದ್ದು, ಟ್ವಿಟ್ಟರ್‌ನಲ್ಲಿ ಈಗಾಗಲೇ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡ್ ಆಗುತ್ತಿದೆ.

ಈ ಬಗ್ಗೆ ನಿನ್ನೆ ಟ್ವಿಟ್ಟರ್‌ ಮುಖಾಂತರ ಕರೆ ನೀಡಿದ್ದ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ರಾಜ್ಯಾಧ್ಯಕ್ಷ ನಾರಾಯಣ ಗೌಡ್ರು ಟಿ.ಎ “ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಒದಗಿಸದೆ ರಾಜ್ಯ ಸರ್ಕಾರ ನಿಧಾನ ವಿಷವುಣಿಸಿ ಕೊಲ್ಲುತ್ತಿದೆ. ನಾವು ಒಟ್ಟಾಗಿ ನಿಂತು ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಬೇಕಿದೆ. ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿರುವ ಟ್ವಿಟರ್ ಅಭಿಯಾನದಲ್ಲಿ ಈ ಕುರಿತು ಮಾತನಾಡೋಣ. ಸರ್ಕಾರವನ್ನು ಎಚ್ಚರಿಸೋಣ” ಎಂದು ಹೇಳಿದ್ದರು.

ಇದನ್ನೂ ಓದಿ: ‘ಹಂಪಿ ವಿವಿಗೆ ಅನುದಾನ ಬಿಡುಗಡೆ ಮಾಡಿ’ – ನಾಳೆ #ಕನ್ನಡವಿವಿಉಳಿಸಿ ಟ್ವಿಟರ್ ಅಭಿಯಾನ: ಕರವೇ

ಟ್ವಿಟ್ಟರ್‌ನಲ್ಲಿ #ಕನ್ನಡವಿವಿಉಳಿಸಿ ಟ್ರೆಂಡ್ ಆಗುತ್ತಿದ್ದು ಹಲವಾರು ಕನ್ನಡಾಭಿಮಾನಿಗಳು ಕರವೇ ಕರೆಯನ್ನು ಬೆಂಬಲಿಸಿ ಟ್ವೀಟ್ ಮಾಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಕರವೆ ರಾಜ್ಯಾಧ್ಯಕ್ಷ ನಾರಾಯಣ ಗೌಡ್ರು ಟಿ.ಎ ಸರಣಿ ಟ್ವೀಟ್ ಮಾಡಿದ್ದು, “ಹಂಪಿ ಕನ್ನಡ ವಿಶ್ವವಿದ್ಯಾಲಯದ ಪರಿಸ್ಥಿತಿ ಶೋಚನೀಯವಾಗಿದೆ. ವಿಶ್ವವಿದ್ಯಾಲಯದಲ್ಲಿ ಎರಡು ವರ್ಷಗಳಿಂದ ಸಂಶೋಧನೆ, ಬೋಧನೆ ಹೆಚ್ಚು ಕಡಿಮೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಇದರ ಪರಿಣಾಮವಾಗಿಯೇ ನ್ಯಾಕ್ ಗುಣಮಟ್ಟದಲ್ಲಿ ಎ+ ಇದ್ದ ಶ್ರೇಣಿ ಮೂರು ಮೆಟ್ಟಿಲು ಕೆಳಗಿಳಿದು ಬಿ ಶ್ರೇಣಿಗೆ ಇಳಿದಿದೆ. ಕಳೆದ ಎರಡು ವರ್ಷಗಳಿಂದ ಕನ್ನಡ ವಿವಿಯಲ್ಲಿ ಯಾವುದೇ ಅಭಿವೃದ್ಧಿ ಚಟುವಟಿಕೆಗಳು ನಡೆಯುತ್ತಿಲ್ಲ. ಸಂಶೋಧನಾ ಕಾರ್ಯಗಳು ಸ್ಥಗಿತಗೊಂಡಿವೆ ಅಥವಾ ವೇಗ ಕಳೆದುಕೊಂಡಿವೆ. ದೂರಶಿಕ್ಷಣ ಕೋರ್ಸ್ ಗಳು ಮುಚ್ಚಿಕೊಳ್ಳುತ್ತಿವೆ. ಇದೆಲ್ಲವನ್ನೂ ಸರಿಪಡಿಸಬೇಕಾದ ಆಡಳಿತ ಮಂಡಳಿ ನಿಷ್ಕ್ರಿಯವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕನ್ನಡದಲ್ಲಿ ಕಲಿಸಿದ ಶಿಕ್ಷಕ ರಂಜಿತ್‌ಸಿಂಹ ದಿಸಾಳೆಗೆ ‘ಗ್ಲೋಬಲ್‌ ಟೀಚರ್‌ ಪ್ರೈಜ್‌- 2020’

ಪ್ರಸಾದ್ ಅವರು, “ಎಲ್ಲ ಶಿಕ್ಷಣವೂ ಕನ್ನಡದಲ್ಲಿಯೇ ಸಿಗಲಿ ಎಂಬ ಚರ್ಚೆ ಆರಂಭವಾಗುತ್ತಿರುವಾಗ, ಹೆಮ್ಮರವಾಗಿ ಸಾವಿರಾರು ಜನರ ಭವಿಷ್ಯ ರೂಪಿಸುವ ವಿವಿಗೆ ಅನುದಾನ ಕಡಿತ ಮಾಡುತ್ತಾರೆ. ಗಿಲ್ಕಿ ತೋರಿಸಿ ಹೊಟ್ಟೆ ಮೇಲೆ ಹೊಡೆಯುವ ಹುನ್ನಾರವಲ್ಲವೇ ಇದು?” ಎಂದು ಕಿಡಿ ಕಾರಿದ್ದಾರೆ.

ಕಿಶೋರ್‌ ಅವರು, “ಧರ್ಮದ ಅಮಲಿನಲ್ಲಿ ತೇಲಾಡ್ತಾ ಇರೋ ಕನ್ನಡಿಗರೆ, ಇವತ್ತು ಕನ್ನಡ ನಾಡಿನಲ್ಲಿ ಕನ್ನಡ ವಿವಿಗೆ ಬಂದ ಗತಿಯೇ, ನಾಳೆ ಕನ್ನಡ ನಾಡಿನ ಕನ್ನಡಿಗರಿಗೆ ಬರುತ್ತದೆ. ಎಚ್ಚರ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಬೀಜಗಳನ್ನು ತೊರೆದು ಬಹುತ್ವದ ಕನ್ನಡ ರಾಷ್ಟ್ರೀಯತೆ ಕಟ್ಟುವ ಸವಾಲುಗಳು

ರಾಘು ಅವರು, “ಸರ್ಕಾರ ಅಧಿಕಾರ,ಪ್ರಾಧಿಕಾರ ಎನ್ನುತ್ತಾ ಉನ್ನತ ಮಟ್ಟದ ಶಿಕ್ಷಣ ವ್ಯವಸ್ಥೆಗೆ ಒತ್ತು ನೀಡುತ್ತಿಲ್ಲ. ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ನೀಡುವ ಅನುದಾನವನ್ನು ಬಿಜೆಪಿ ಸರ್ಕಾರ ವರ್ಷದಿಂದ ವರ್ಷಕ್ಕೆ ಕಡಿತಗೊಳಿಸುತ್ತಿದೆ ಇದಕ್ಕೆ ನನ್ನ ಧಿಕ್ಕಾರವಿದೆ, ಇದು ಖಂಡನೀಯ” ಎಂದು ಹೇಳಿದ್ದಾರೆ.

ಭರತ್‌. ಪಿ ಅವರು, “ಖಾಸಗಿಯವರು ಬೇಡಿಕೆ ಇದೆ ಎಂದು ಹೇಳಿ ಹೊಸದಾಗಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳನ್ನ ತೆರೆದರೆ,ಈ ಸರ್ಕಾರದವರು ಒಂದೊಂದು ಕುಂಟು ನೆಪ ಹೇಳಿ ಇರುವ ವಿಶ್ವವಿದ್ಯಾಲಯವನ್ನ ಮುಚ್ಚಲು ಹುನ್ನಾರಮಾಡುತ್ತಿದ್ದಾರಲ್ಲ..!ಏನು ಸ್ವಾಮಿ ಕಥೆ ಇದು ಯಡಿಯೂರಪ್ಪನವರೆ” ಎಂದು ಮುಖ್ಯಮಂತ್ರಿಯವರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....