Homeಮುಖಪುಟ’ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾದುದು’: ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ

’ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾದುದು’: ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ

ಮಹಿಳೆಯರನ್ನು ಅಧೀನದಲ್ಲಿಟ್ಟುಕೊಳ್ಳುವ ಉದ್ದೇಶದಿಂದ ಖಾಪ್ ಪಂಚಾಯಿತಿಗಳು ಇದೇ ರೀತಿಯ ತತ್ವಶಾಸ್ತ್ರವನ್ನು ಅನುಸರಿಸುತ್ತವೆ ಎಂದು ಎಪಿ ಶಾ ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

“ಲವ್ ಜಿಹಾದ್” ಪ್ರಕರಣಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಉತ್ತರ ಪ್ರದೇಶದ ಹೊಸ ಮತಾಂತರ ವಿರೋಧಿ ಸುಗ್ರೀವಾಜ್ಞೆಯು ಖಾಪ್ ಪಂಚಾಯತ್‌ನ ತತ್ತ್ವಶಾಸ್ತ್ರವನ್ನು ಪ್ರತಿಬಿಂಬಿಸುತ್ತದೆ. ಈ ಕಾಯ್ದೆಯ ಮುಖ್ಯ ಉದ್ದೇಶವೇ ಮುಖ್ಯವಾಗಿ ಮಹಿಳೆಯರನ್ನು ವಶಪಡಿಸಿಕೊಳ್ಳುವುದು ಎಂದು ದೆಹಲಿ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ ಹೇಳಿದ್ದಾರೆ.

ಎನ್‌ಡಿಟಿವಿ ಜೊತೆಗೆ ಮಾತನಾಡಿದ ನಿವೃತ್ತ ನ್ಯಾಯಾಧೀಶರು, ಈ ಕಾಯ್ದೆಯ ಹಲವಾರು ನಿಬಂಧನೆಗಳು  ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಜೀವನ ಹಕ್ಕು ಮತ್ತು ಸ್ವಾತಂತ್ರ್ಯದ ಮೂಲವನ್ನು ಹೊಡೆದು ಹಾಕುತ್ತವೆ. ಈ ಸುಗ್ರೀವಾಜ್ಞೆಯು ಸಾರ್ವಜನಿಕ ಕಿಡಿಗೇಡಿತನಕ್ಕೆ ಸಮರ್ಥನೆಯಾಗಿದ್ದು, ಸಂವಿಧಾನದಿಂದ ನಿಯಂತ್ರಿಸಲ್ಪಡುವ ಈ ದೇಶದಲ್ಲಿ ಇಂತಹ ಕಾನೂನನ್ನು ಸರ್ಕಾರವು ಅಂಗೀಕರಿಸಿದೆ ಎಂದು ನಂಬಲು ಕಷ್ಟವಾಯಿತು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕಾನೂನು ಆಯೋಗದ ಮಾಜಿ ಅಧ್ಯಕ್ಷರೂ ಆಗಿದ್ದ ನ್ಯಾಯಮೂರ್ತಿ ಎಪಿ ಶಾ ಅವರು, ಈ ಸುಗ್ರೀವಾಜ್ಞೆಯ ಹಲವಾರು ನಿಬಂಧನೆಗಳು 25 ನೇ ವಿಧಿ ಖಾತರಿಪಡಿಸಿದಂತೆ ಯಾವುದೇ ಧರ್ಮವನ್ನು ಅನುಸರಿಸುವ ಮೂಲಭೂತ ಹಕ್ಕನ್ನು ಗಂಭೀರವಾಗಿ ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಮತ್ತೊಬ್ಬರ ಬಂಧನ

“ಈ ಸುಗ್ರೀವಾಜ್ಞೆಯಲ್ಲಿ, ಪ್ರತಿಯೊಂದು ಧಾರ್ಮಿಕ ಮತಾಂತರವೂ ಕಾನೂನುಬಾಹಿರವೆಂದು ಭಾವಿಸಲಾಗಿದೆ.  ಆದ್ದರಿಂದ ಕಾನೂನಿನಲ್ಲಿ ಅಪರಾಧದ ಊಹೆಯಿದೆ. ಅಪರಾಧವು ಅರಿವಿನಿಂದ ಕೂಡಿದೆ. ಇದು ಜಾಮೀನು ರಹಿತವಾಗಿದೆ. ಜೊತೆಗೆ ಪೊಲೀಸರು ಯಾರನ್ನೂ ಬೇಕಾದರೂ ಬಂಧಿಸಬಹುದು” ಎಂದು ನ್ಯಾಯಮೂರ್ತಿ ಶಾ ಹೇಳಿದ್ದಾರೆ.

ಈ ಸುಗ್ರೀವಾಜ್ಞೆ ಪ್ರಕಾರ ಮತಾಂತರವು ಆಮಿಷವನ್ನು ಆಧರಿಸಿದ್ದರೆ, ಅದು ಕಾನೂನುಬಾಹಿರವಾಗಿದೆ. ಆದರೆ, ಇಲ್ಲಿನ ಸಮಸ್ಯೆಯೆಂದರೆ, ಆಮಿಷ ಎಂಬ ಪದವನ್ನು ವಿಶಾಲವಾಗಿ ಬಳಸಲಾಗಿದೆ. ಅಂದರೆ, ಒಂದು ಗಡಿಯಾರ, ಬಳೆ, ಅಥವಾ ಉಂಗುರ, ಮದುವೆಯ ಉಡುಗೊರೆಗಳನ್ನು ಕೂಡ ಮತಾಂತರದ ಆಕರ್ಷಣೆಗೆ ಸಮನಾಗಿರುತ್ತದೆ’ ಎಂಬುವಂತಿದೆ ಎಂದು ಮಾಜಿ ನ್ಯಾಯಾಧೀಶರು ವ್ಯಂಗ್ಯವಾಡಿದ್ದಾರೆ.

ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ಇನ್ನು “ಮತಾಂತರಕ್ಕೆ ಒಳಗಾದವರು ಅಪ್ರಾಪ್ತ ವಯಸ್ಕರು ಅಥವಾ ಮಹಿಳೆ, ಅಥವಾ ಎಸ್‌ಸಿ / ಎಸ್‌ಟಿ ಸಮುದಾಯದವರಾಗಿದ್ದರೇ 10 ವರ್ಷಗಳವರೆಗೆ ಜೈಲು ಶಿಕ್ಷೆ ನೀಡಲಾಗುತ್ತದೆ. ಮಹಿಳೆ ವಿದ್ಯಾವಂತಳಾಗಿದ್ದು, ತಾನೇ ಮತಾಂತರಗೊಂಡರೂ 10 ವರ್ಷ ಶಿಕ್ಷೆಯಿದೆ. ಆದರೆ ನೀವು ಅನಕ್ಷರಸ್ಥ ಪುರುಷನನ್ನು ಮತಾಂತರಗೊಳಿಸಿದರೇ 5 ವರ್ಷ ಶಿಕ್ಷೆಯಿದೆ” ಎಂದು ಕಾನೂನನ್ನು ಬಳಸಿಕೊಂಡು ಹೇಗೆ ಮಹಿಳೆಯ ಮೇಲೆ ನಿಯಂತ್ರಣ ಹೇರಲು ಬಳಸಲಾಗುತ್ತಿದೆ ಎಂದು ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

“ಕುತೂಹಲಕಾರಿಯಾಗಿ, ಈ ಕಾಯ್ದೆ ಪ್ರಕಾರ ಮರುಮತಾಂತರ ಕಾನೂನುಬಾಹಿರವಲ್ಲ. ಅದು ವಂಚನೆ ಅಥವಾ ಬಲದಿಂದ ಕೂಡಿದ್ದರೂ ಶಿಕ್ಷೆಯಿಲ್ಲ. ಆದರೆ, ಒಬ್ಬ ವ್ಯಕ್ತಿಯನ್ನು ಸ್ವಯಂಪ್ರೇರಣೆಯಿಂದ ಮತಾಂತರಗೊಳಿಸಿದರೆ, ಆತನನ್ನು ಬಂಧಿಸಬಹುದು ಎಂಬ ಎರಡು ವಿಭಿನ್ನ ರೂಪವನ್ನು ಸುಗ್ರಿವಾಜ್ಞೆ ಹೊಂದಿರುವ ಬಗ್ಗೆ ಗಮನಸೆಳೆದರು.

“ಹಿಂದೂ ಮಹಾಸಭಾ, ಮುಸ್ಲಿಂ ಪುರುಷರು ಭಾರತದಲ್ಲಿ ಜಿಹಾದ್ ನಡೆಸುತ್ತಿದ್ದಾರೆ ಎಂಬ ವಿಚಾರವನ್ನು ಮಹಿಳೆಯರಲ್ಲಿ ತುಂಬಲು ಪ್ರಯತ್ನಿಸಿದರು” ಎಂದು ನ್ಯಾಯಮೂರ್ತಿ ಎಪಿ ಶಾ ಹೇಳಿದ್ದಾರೆ. “ಹೊರಗಿನವರ ಬಗ್ಗೆ ಮಹಿಳೆಯರಿಗೆ ಎಚ್ಚರಿಕೆ ನೀಡಲಾಗುತ್ತದೆ, ಅದರಲ್ಲೂ ವಿಶೇಷವಾಗಿ ಧರ್ಮದ ಹೊರಗಿನವರು ಅಥವಾ ಕೆಳಜಾತಿಯವರ ಬಗ್ಗೆ ಎಚ್ಚರಿಕೆಯಂದಿರುವಂತೆ ತಿಳಿಸಲಾಗುತ್ತದೆ’ ಎಂದು ಹೇಳಿದರು.

ಮಹಿಳೆಯರನ್ನು ಅಧೀನದಲ್ಲಿಟ್ಟುಕೊಳ್ಳುವ ಉದ್ದೇಶದಿಂದ ಖಾಪ್ ಪಂಚಾಯಿತಿಗಳು ಇದೇ ರೀತಿಯ ತತ್ವಶಾಸ್ತ್ರವನ್ನು ಅನುಸರಿಸುತ್ತವೆ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕೌಂಟರ್: ಅಂತರ್‌ಧರ್ಮೀಯ ವಿವಾಹಿತರಿಗೆ ಪ್ರೋತ್ಸಾಹ ಧನ ಘೋಷಿಸಿದ ಉತ್ತರಾಖಂಡ್‌!

ವಾಸ್ತವವಾಗಿ, ಅಂತರ್ ಧರ್ಮದ ವಿವಾಹಗಳು ಭಾರತದಲ್ಲಿ ಇನ್ನೂ ಅಪರೂಪ. ಭಾರತದಲ್ಲಿ 90% ಕ್ಕೂ ಹೆಚ್ಚು ವಿವಾಹಗಳನ್ನು ಮನೆಯಲ್ಲಿಯೇ ನಿರ್ಧರಿಸಲಾಗುತ್ತದೆ ಮತ್ತು ಪೋಷಕರಿಂದ ಅಂಗೀಕರಿಸಲ್ಪಟ್ಟಿವೆ. ಕೆಲವೇ ಕೆಲವು ವಿವಾಹಗಳು ಅಂತರ್ಜಾತಿ ವಿವಾಹಗಳಾಗಿವೆ. ಅಂತರ್ಜಾತಿಯ ಶೇಕಡಾವಾರು ಪ್ರಮಾಣವು 5% ಆಗಿದೆ. ಅಂತರ್-ಧರ್ಮಿಯ ವಿವಾಹಗಳು 2-3%, ಇದೆ ಎಂದು ಹೇಳಿದ್ದಾರೆ.

“ಭಾರತದಲ್ಲಿ ದಶಕಗಳಿಂದ, ನಾವು ಕೋಮು ಸೌಹಾರ್ದತೆಯನ್ನು ಸಾಧಿಸಲು ಅಂತರ್-ರಾಜ್ಯ, ಅಂತರ್ಜಾತಿ ಮತ್ತು ಅಂತರ್ ಧರ್ಮದ ವಿವಾಹಗಳನ್ನು ಪ್ರತಿಪಾದಿಸಿದ್ದೇವೆ. ಅಂಬೇಡ್ಕರ್ ಇದರ ದೊಡ್ಡ ಪ್ರತಿಪಾದಕರಾಗಿದ್ದರು. ಅವರ ಅನಿಹಿಲೇಷನ್ ಆಫ್ ಕಾಸ್ಟ್ ಎಂಬ ಪುಸ್ತಕದಲ್ಲಿ ಈ ಕುರಿತು ದೃಢವಾಗಿ ದಾಖಲಿಸಿದ್ದಾರೆ.” ಎಂದು ಎಪಿ ಶಾ ಹೇಳಿದ್ದಾರೆ.

“ಇಂತಹ ಸುಗ್ರೀವಾಜ್ಞೆಯನ್ನು ತಕ್ಷಣವೇ ಹೊಡೆದುರುಳಿಸಬೇಕು ಎಂಬುದು ಸ್ಪಷ್ಟವಾಗಿದೆ. ದೇಶದಲ್ಲಿ ಖಂಡಿತವಾಗಿಯೂ ಇಂತಹ ಕಾನೂನು ಜಾರಿಗೆ ತರಲು ಅನುಮತಿ ನೀಡಬಾರದು. ಸಂವಿಧಾನವು ಖಾತರಿಪಡಿಸಿದ ಈ ಸ್ವಾತಂತ್ರ್ಯಗಳು ನಾಶವಾಗಲು ಬಿಡಬಾರದು. ಇದು ನ್ಯಾಯಾಂಗದಿಂದ ಮಾತ್ರ ಸಾಧ್ಯ ಎಂದಿದ್ದಾರೆ ನಿವೃತ್ತ ನ್ಯಾಯಮೂರ್ತಿ ಎಪಿ ಶಾ.


ಇದನ್ನೂ ಓದಿ: ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...