Homeಮುಖಪುಟಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ಕುಮಾರಸ್ವಾಮಿಗೆ ವಿಶ್ ಮಾಡಿದ ನರೇಂದ್ರ ಮೋದಿಯಿಂದ ಹಿಡಿದು ಬಹುತೇಕ ಬಿಜೆಪಿ ಮುಖಂಡರು ತಮ್ಮದೇ ಪಕ್ಷದ ಮುಖಂಡರಾದ ಜಗದೀಶ್ ಶೆಟ್ಟರ್‌ರವರ ಜನ್ಮದಿನಕ್ಕೆ ವಿಶ್ ಮಾಡಿಲ್ಲ!

- Advertisement -
- Advertisement -

ಮೊನ್ನೆ ಡಿಸೆಂಬರ್ 16 ರಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿಯವರು ತಮ್ಮ 62 ನೇ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಂಡರು. ಸಾಮಾನ್ಯವಾಗಿ ಗಣ್ಯ ವ್ಯಕ್ತಿಗಳ ಹುಟ್ಟುಹಬ್ಬವಿದ್ದಾಗ ಪಕ್ಷಬೇಧ ಮರೆತು ಎಲ್ಲರೂ ಅಭಿನಂದನೆ ಸಲ್ಲಿಸುವುದು ವಾಡಿಕೆ. ಆದರೆ ಈ ಬಾರಿಯ ಕುಮಾರಸ್ವಾಮಿಯವರ ಜನ್ಮದಿನಕ್ಕೆ ಯಾರು ಯಾರು ಅಭಿನಂದನೆ ಸಲ್ಲಿಸಿದರು ಮತ್ತು ಯಾರು ಯಾರು ಅಭಿನಂದನೆ ಹೇಳಲಿಲ್ಲ ಎನ್ನುವುದನ್ನು ಗಮನಿಸಿದರೆ ವಾಡಿಕೆ ಮೀರಿ ಮತ್ತೇನೂ ನಡೆಯುತ್ತಿದೆ ಅನಿಸದೇ ಇರಲಾರದು.

ಈ ಬಾರಿಯ ಕುಮಾರಸ್ವಾಮಿಯವರ ಜನ್ಮದಿನಕ್ಕೆ ಕಾಂಗ್ರೆಸ್ ನಾಯಕರ್ಯಾರೂ ಅಭಿನಂದನೆ ಸಲ್ಲಿಸಿಲ್ಲ. ಜೆಡಿಎಸ್‌ನ ಕೆಲವರು ಮಾತ್ರ ಅಭಿನಂದಿಸಿದರೆ ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯದ ಬಹುತೇಕ ಸಚಿವರು, ಶಾಸಕರು ಮತ್ತು ಸಂಸದರು ಅಭಿನಂದನೆ ಸಲ್ಲಿಸಿದ್ದಾರೆ. ಅಷ್ಟು ಮಾತ್ರವಲ್ಲದೆ, ಹೊರರಾಜ್ಯದ ಬಿಜೆಪಿ ಸಂಸದರು, ಬಿಜೆಪಿ ನಾಯಕರು ಸಹ ಮೊದಲ ಬಾರಿಗೆ ಕುಮಾರಸ್ವಾಮಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ ಎಂದರೆ ಏನರ್ಥ? ಸರಿ ಯಾರು ಯಾರು ಅಭಿನಂದಿಸಿದ್ದಾರೆ ಮೊದಲು ನೋಡಿ ಬಿಡೋಣ.

ಬಿಜೆಪಿ ಪಕ್ಷವು 2018ರ ಮೇ ತಿಂಗಳಿನಿಂದ 2020ರ ಅಕ್ಟೋಬರ್‌ವರೆಗೂ ಕುಮಾರಸ್ವಾಮಿಯವರನ್ನು ಟೀಕಿಸುತ್ತಲೆ ಇದೆ. ಹಲವು ವಿಚಾರಗಳಿಗೆ ಟ್ರೋಲ್ ಮಾಡುತ್ತಲೆ ಇದೆ. ಅದೇ ಬಿಜೆಪಿ ಪಕ್ಷದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಸದಾನಂದ ಗೌಡ, ಜಗದೀಶ್ ಶೆಟ್ಟರ್, ಉಪಮುಖ್ಯಮಂತ್ರಿಗಳಾದ ಡಾ.ಅಶ್ವಥ್ ನಾರಾಯಣ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ರಾಜ್ಯ ಸಚಿವರಾದ ಡಾ.ಕೆ ಸುಧಾಕರ್, ಬಿ.ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಸಿ.ಟಿ ರವಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ನಂತರ ಸಂಸದರಾದ ಪ್ರತಾಪ್ ಸಿಂಹ, ಶೋಭಾ ಕರಂದ್ಲಾಚೆ, ಪಿ.ಸಿ ಮೋಹನ್, ಬಿ.ವೈ ರಾಘವೇಂದ್ರ, ಶಶಿಕಲಾ ಜೊಲ್ಲೆ ಅಭಿನಂದನೆ ತಿಳಿಸಿದ್ದಾರೆ.

ವಿಶೇಷವೆಂದರೆ ರಾಜಸ್ಥಾನದ ರಾಜ್‌ಸಮಂದ್‌ನ ಬಿಜೆಪಿ ಸಂಸದರಾದ ದಿಯಾ ಕುಮಾರಿ, ಹರಿಯಾಣದ ಬಿಜೆಪಿ ಸಂಸದ ಸಂಜಯ್ ಭಾಟಿಯಾ ಮತ್ತು ಮಹಾರಾಷ್ಟ್ರದ ಬಿಜೆಪಿ ರಾಜ್ಯಸಭಾ ಸದಸ್ಯ ಸುರೇಶ್ ಪ್ರಭುರವರು ಸಹ ಕರ್ನಾಟಕ ಮಾಜಿ ಸಿಎಂಗೆ ಟ್ವೀಟ್‌ ಮೂಲಕ ಶುಭ ಹಾರೈಸಿರುವುದು ಅಚ್ಚರಿ ಮೂಡಿಸಿದೆ.

ಇನ್ನು ಜೆಡಿಎಸ್ ವತಿಯಿಂದ ಎಚ್.ಡಿ ರೇವಣ್ಣ, ಸಿ.ಎಸ್ ಪುಟ್ಟರಾಜು, ಬಂಡೆಪ್ಪ ಕಾಶೆಂಪೂರ್, ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ, ಸಾ.ರ ಮಹೇಶ್, ವೈಎಸ್‌ವಿ ದತ್ತ, ಡಿ.ಸಿ ಗೌರಿಶಂಕರ್, ಆರ್ ಮಂಜುನಾಥ್ ಟ್ವೀಟ್ ಮೂಲಕ ಶುಭಹಾರೈಸಿದ್ದಾರೆ. ಆದರೆ ಒಂದು ವರ್ಷ ಜೆಡಿಎಸ್‌ ಜೊತೆ ಮೈತ್ರಿ ಸರ್ಕಾರ ನಡೆಸಿದ್ದ ಕಾಂಗ್ರೆಸ್‌ನ ಯಾವೊಬ್ಬ ಮುಖಂಡರು ಟ್ವೀಟ್ ಮೂಲಕ ಶುಭಾಶಯ ತಿಳಿಸಿಲ್ಲ.

ಇನ್ನು ತಮಗೆ ಹುಟ್ಟು ಹಬ್ಬದ ಶುಭಾಶಯ ಕೋರಿದವರಿಗೆ ಧನ್ಯವಾದ ತಿಳಿಸುತ್ತಾ ಕುಮಾರಸ್ವಾಮಿಯವರು “ತತ್ವ-ಸಿದ್ಧಾಂತಗಳೆಂಬುದು ಕ್ಲಿಷೆಯ ಮಾತಾಗಿರುವ ಈ ದಿನಗಳಲ್ಲಿ ನಾಡಿನ ಜನರ ಒಳಿತಿಗಾಗಿ ದುಡಿವುದಷ್ಟೆ ಒಂದು ಸಿದ್ಧಾಂತವಾಗಬೇಕು” ಎಂಬ ಮಾತುಗಳನ್ನಾಡಿದ್ದಾರೆ. ತಮ್ಮ ಪಕ್ಷ ಜಾತ್ಯಾತೀತ ಜನತಾದಳವೆಂದೂ, ತಾವು ರೈತಪರವೆಂದು ಘೋಷಿಸಿಕೊಂಡಿದ್ದ ಕುಮಾರಸ್ವಾಮಿಯವರು ನಿಧಾನವಾಗಿ ತಮ್ಮ ಸಿದ್ದಾಂತದ ಅರ್ಥವನ್ನು ಬದಲಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ.

ತನ್ನನ್ನು ಸಿಎಂ ಕುರ್ಚಿಯಿಂದ ಇಳಿಸಿದ ಬಿಜೆಪಿ ಬಗ್ಗೆ ಕುಮಾರಸ್ವಾಮಿಯವರಿಗೆ ಸಿಟ್ಟಿಲ್ಲ. ಕಳೆದ ಆರು ತಿಂಗಳುಗಳಿಂದ ಕುಮಾರಸ್ವಾಮಿಯವರು ಬಿಜೆಪಿ ಜೊತೆ ಸಖ್ಯವನ್ನು, ಅದೇ ಸಮಯದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆಯನ್ನು ಮುಂದುವರೆಸಿದ್ದಾರೆ. ನೇರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಪ್ರತಿದಿನ ಟೀಕಿಸುತ್ತಿದ್ದಾರೆ. ತಾನು ಸಿಎಂ ಸ್ಥಾನದಿಂದ ಕೆಳಗಿಳಿಯಲು ಸಿದ್ದರಾಮಯ್ಯ ಕಾರಣ ಎಂದು ಇಂದೂ ಸಹ ಆರೋಪಿಸಿದ್ದಾರೆ.

ಎಲ್ಲಕ್ಕಿಂತ ಮುಖ್ಯವಾಗಿ ತಮ್ಮ ಹುಟ್ಟು ಹಬ್ಬಕ್ಕೂ ಒಂದು ವಾರ ಮುಂಚಿತವಾಗಿ ಡಿಸೆಂಬರ್ 08 ರಂದು ರಾಜ್ಯ ವಿಧಾನ ಮಂಡಲದ ವಿಧಾನ ಪರಿಷತ್‌ನಲ್ಲಿ ಬಿಜೆಪಿಯು ಕರ್ನಾಟಕ ಭೂಸುಧಾರಣೆ ತಿದ್ದುಪಡಿ ವಿಧೇಯಕ 2020 ಅನ್ನು ಮಂಡಿಸಿತು. ರೈತರ ಪಕ್ಷ ಎಂದು ಹೇಳಿಕೊಳ್ಳುವ ಜೆಡಿಎಸ್ ಮೂರು ತಿಂಗಳ ಹಿಂದೆ ತಾನೇ ಅದನ್ನು ವೀರಾವೇಷದಿಂದ ವಿರೋಧಿಸಿತ್ತು. ಆದರೆ ಡಿಸೆಂಬರ್ 08 ರಂದು ಮಾತ್ರ ಸದ್ದಿಲ್ಲದೆ ಭೂಸುಧಾರಣೆ ವಿಧೇಯಕದ ಪರವಾಗಿ ಮತಹಾಕಿ ಪರಿಷತ್‌ನಲ್ಲಿ ಅದು ಅಂಗೀಕಾರವಾಗಲು ಕಾರಣವಾಯಿತು! ಆ ಮೂಲಕ ಬಿಜೆಪಿಯೊಂದಿಗೆ ಬಹಿರಂಗ ದೋಸ್ತಿ ಘೋಷಿಸಿತು.

ಅದಾದ ಒಂದು ವಾರದ ನಂತರ ಒಂದು ದಿನದ ವಿಧಾನಪರಿಷತ್ ಅಧಿವೇಶನ ಕರೆಯಲಾಯಿತು. ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಮತ್ತು ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಆಡಳಿತರೂಢ ಬಿಜೆಪಿ ಪಕ್ಷ ಎಣಿಸಿತ್ತು. ಆಗ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿಯವರನ್ನು ಪದಚ್ಯುತಿಗೊಳಿಸಲು ಕುಮಾರಸ್ವಾಮಿಯವರು ಬಿಜೆಪಿಗೆ ಬೇಷರತ್ ಬೆಂಬಲ ನೀಡಿದರು. ಸಭಾಪತಿಗಳಾದ ಪ್ರತಾಪ್ ಚಂದ್ರಶೆಟ್ಟಿಯವರು ಆಸೀನರಾಗುವ ಮೊದಲೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟುಸೇರಿ ಉಪಸಭಾಪತಿ ಧರ್ಮೇಗೌಡ ಅವರನ್ನು ಕುಳ್ಳಿರಿಸಿ ಭಾರೀ ಗದ್ದಲ ನಡೆಯಲು ಕಾರಣರಾದರು!

ಇನ್ನು ಕರ್ನಾಟಕದಲ್ಲಿ ದಿನೇ ದಿನೇ ಜೆಡಿಎಸ್ ಬಲ ಕುಗ್ಗುತ್ತಿರುವುದರಿಂದ ಕುಮಾರಸ್ವಾಮಿಯವರು ಬಿಜೆಪಿಯಲ್ಲಿ ತಮ್ಮ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಅದಕ್ಕೆ ಅನುಗುಣವಾಗಿಯೇ ಕುಮಾರಸ್ವಾಮಿಯವರು ಬಿಜೆಪಿಯವರೊಡನೆ ಸೌಮ್ಯವಾಗಿಯೂ, ಕಾಂಗ್ರೆಸ್‌ನವರೊಡನೆ ಉಗ್ರವಾಗಿಯೂ ನಡೆದುಕೊಳ್ಳುತ್ತಿದ್ದಾರೆ. ಅದಕ್ಕೆ ಪುಷ್ಠಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಬಿಜೆಪಿಯ ರಾಜ್ಯದ ಎಲ್ಲಾ ಮುಖಂಡರು, ಹೊರರಾಜ್ಯದ ಸಂಸದರು, ಮುಖಂಡರು ಸಹ ಕುಮಾರಸ್ವಾಮಿಯವರ ಜನ್ಮದಿನಕ್ಕೆ ಶುಭಾಶಯ ಕೋರಿ ಪಕ್ಷಕ್ಕೆ ಬರಮಾಡಿಕೊಳ್ಳಲು ಸಿದ್ದರಾಗಿದ್ದಾರೆ.

ಅಚ್ಚರಿಯ ಮತ್ತು ನೀವು ನಂಬಲೇಬೇಕಾದ ಮತ್ತೊಂದು ಅಂಶವೆಂದರೆ ಕುಮಾರಸ್ವಾಮಿಯವರ ಜನ್ಮದಿನದ ಎರಡು ದಿನದ ನಂತರ ಅಂದರೆ ಡಿಸೆಂಬರ್ 17ರಂದು ಬಿಜೆಪಿ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಸಹ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಆದರೆ ಕುಮಾರಸ್ವಾಮಿಯವರಿಗೆ ವಿಶ್ ಮಾಡಿದ್ದ ಬಿಜೆಪಿಯ ನರೇಂದ್ರ ಮೋದಿ ಆದಿಯಾಗಿ ಸುರೇಶ್ ಪ್ರಭು, ದಿಯಾ ಕುಮಾರಿ, ಸಂಜಯ್ ಭಾಟಿಯಾ ಸೇರಿ ಬಹುತೇಕರು ತಮ್ಮದೇ ಪಕ್ಷದ ಮುಖಂಡರಾದ ಜಗದೀಶ್ ಶೆಟ್ಟರ್‌ರವರಿಗೆ ಜನ್ಮದಿನದ ಶುಭಾಶಯ ತಿಳಿಸಲಿಲ್ಲ ಏಕೆ? ಈ ಪ್ರಶ್ನೆಗೆ ಉತ್ತರ ಸ್ಪಷ್ಟ. ಬಿಜೆಪಿಯು ಕುಮಾರಸ್ವಾಮಿಯವರನ್ನು ಸೆಳೆದುಕೊಳ್ಳಲು ಪ್ರಯತ್ನಿಸುತ್ತಿದೆ. ಹಾಗಾಗಿ ಅವರ ಪಕ್ಷದ ನಿರ್ಣಯದಂತೆ ಕುಮಾರಸ್ವಾಮಿಯವರಿಗೆ ವಿಶ್ ಮಾಡಿ ಸಂಬಂಧ ವೃದ್ದಿಸಿಕೊಳ್ಳಲು ನೋಡುತ್ತಿದೆ. ಕುಮಾರಸ್ವಾಮಿಯವರಿಗೂ ಅದೇ ಬೇಕಿತ್ತು ಎನ್ನುವಂತೆ ವರ್ತಿಸುತ್ತಿದ್ದಾರೆ ಅಷ್ಟೇ.

ಇನ್ನು ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸಾರಿಗೆ ನೌಕರರು ಬಸ್‌ ಸೇವೆ ನಿಲ್ಲಿಸಿ ಹೋರಾಟ ಆರಂಭಿಸಿದ್ದರು. ಅದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆಯ ಪರವಾಗಿ ವಿಧಾನ ಪರಿಷತ್ತಿನಲ್ಲಿ ಮತ ಹಾಕಿದ ಜೆಡಿಎಸ್‌ ವಿರುದ್ಧ ಕೆಂಡಾಮಂಡಲವಾಗಿದ್ದರು. “ಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡಲು” ಎಂದು ಕೋಡಿಹಳ್ಳಿ ಆಕ್ರೋಶ ಹೊರಹಾಕಿದ್ದರು. ಆಗ ಸಿಎಂ ಬಿ.ಎಸ್ ಯಡಿಯೂರಪ್ಪನವರು ತಮ್ಮ ಪ್ರಕಟಣೆಯಲ್ಲಿ “ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿಯವರ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್‌ರವರು ಲಘುವಾಗಿ ಮಾತನಾಡಿರುವುದು ಖಂಡನೀಯ” ಎಂದು ಬರೆದು ಎಚ್‌ಡಿಕೆ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದರು.

ಒಟ್ಟಿನಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿಗೆ ಕಾಲ ಕೂಡಿಬರುತ್ತಿದೆಯೇ? ಅಥವಾ ಕುಮಾರಸ್ವಾಮಿಯವರೆ ಬಿಜೆಪಿಯತ್ತ ನಡೆಯುತ್ತಿದ್ದಾರೆಯೇ? ಈ ಪ್ರಶ್ನೆಗಳಿಗೆ ಕಾಲವೇ ಉತ್ತರಿಸಲಿದೆ.


ಇದನ್ನೂ ಓದಿ: ವಿಸ್ಟ್ರಾನ್ ಬಿಕ್ಕಟ್ಟು – ಕಾರ್ಮಿಕರ ಬಳಿ ಕ್ಷಮೆಯಾಚಿಸಿದ ಕಂಪೆನಿ; ಉಪಾಧ್ಯಕ್ಷನ ವಜಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...