Homeಕರ್ನಾಟಕಟೊಯೋಟಾ ಬಿಕ್ಕಟ್ಟು ಶಮನಕ್ಕೆ ಸರ್ಕಾರ ಮಧ್ಯಪ್ರವೇಶಿಸಬೇಕು: ಕುಮಾರಸ್ವಾಮಿ

ಟೊಯೋಟಾ ಬಿಕ್ಕಟ್ಟು ಶಮನಕ್ಕೆ ಸರ್ಕಾರ ಮಧ್ಯಪ್ರವೇಶಿಸಬೇಕು: ಕುಮಾರಸ್ವಾಮಿ

ನಮ್ಮ ನೆಲ, ಜಲ, ಗಾಳಿ, ಸೌಕರ್ಯ ಬಳಸಿಕೊಂಡು ನಡೆಯುತ್ತಿರುವ ಸಂಸ್ಥೆಗಳೂ ನಮ್ಮವರ ವಿಷಯದಲ್ಲಿ ಇಷ್ಟು ಕ್ರೂರವಾಗಿರುವುದು ಸರಿಯಲ್ಲ. ಸಂಸ್ಥೆ ಮುಖ್ಯಸ್ಥರು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯವಾಗಿ ವರ್ತಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

- Advertisement -
- Advertisement -

ಬಿಡದಿ ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆಯಾದರೂ, ಪರಿಹಾರ ಕಾಣಿಸುತ್ತಿಲ್ಲ. ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವಿನ ವ್ಯವಸ್ಥಾಪಕರ ಭಿನ್ನಾಭಿಪ್ರಾಯಗಳು, ಪ್ರತಿಷ್ಠೆ, ಸರ್ಕಾರದ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿರಬಹುದು. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಈಗಿನ ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಟೊಯೊಟಾ ಕಿರ್ಲೋಸ್ಕರ್‌‌ ಕಂಪೆನಿಯ ಆಡಳಿತ ಮಂಡಳಿಯ ದುರ್ವರ್ತನೆ ವಿರುದ್ದ ಕಾರ್ಮಿಕರು ನಡೆಸುತ್ತಿರುವ ಹೋರಾಟ ಇಂದಿಗೆ 42 ನೇ ದಿನಕ್ಕೆ ಕಾಲಿಟ್ಟಿದೆ. ಶುಕ್ರವಾರದಂದು ಕಾರ್ಮಿಕ ಸಂಘಟನೆಗಳು ರೈತ-ದಲಿತ-ಕನ್ನಡಪರ ಸಂಘಟನೆಗಳ ಬೆಂಬಲದಲ್ಲಿ ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ್ದರು.

ಇದನ್ನೂ ಓದಿ: ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಟೊಯೋಟಾ ಕಾರ್ಮಿಕರು

ಜಿಲ್ಲಾಧಿಕಾರಿ,toyota

ಬಿಡದಿಯಲ್ಲಿ ನಡೆಯುತ್ತಿರುವ ಕಾರ್ಮಿಕರ ಹೋರಾಟದ ಬಗ್ಗೆ ಇಂದು ಸರಣಿ ಟ್ವೇಟ್ ಮಾಡಿರುವ ಕುಮಾರಸ್ವಾಮಿ, ” ವ್ಯವಸ್ಥಾಪಕರ ಮಾತು ಕೇಳಿಯೋ, ಕಾರ್ಮಿಕರ ಮೇಲಿನ ಕ್ಷುಲ್ಲಕ ಆರೋಪಗಳಿಗೋ ಸಂಸ್ಥೆ 3000 ಕಾರ್ಮಿಕರನ್ನು ಬೀದಿಗೆ ತಳ್ಳಿದೆ. ನಮ್ಮ ನೆಲ, ಜಲ, ಗಾಳಿ, ಸೌಕರ್ಯ ಬಳಸಿಕೊಂಡು ನಡೆಯುತ್ತಿರುವ ಸಂಸ್ಥೆಗಳೂ ನಮ್ಮವರ ವಿಷಯದಲ್ಲಿ ಇಷ್ಟು ಕ್ರೂರವಾಗಿರುವುದು ಸರಿಯಲ್ಲ. ಸಂಸ್ಥೆ ಮುಖ್ಯಸ್ಥರು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯವಾಗಿ ವರ್ತಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಕಾರ್ಮಿಕರ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಸ್ವತಃ ನಾನೇ ಹಲವು ಸಭೆಗಳನ್ನು ನಡೆಸಿದ್ದೇನೆ. ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವೆ ಇರುವ ವ್ಯವಸ್ಥಾಪಕ ವರ್ಗ ಗೊಂದಲ ಸೃಷ್ಟಿ ಮಾಡುತ್ತಿರುವುದು ನನಗೆ ಮೇಲ್ನೋಟಕ್ಕೆ ಗೊತ್ತಾಗಿದೆ. ಈ ವ್ಯವಸ್ಥಾಪಕ ವರ್ಗ ಸಾಮಾನ್ಯವಾಗಿ ಈ ಪ್ರದೇಶ, ಪ್ರಾಂತ್ಯದವರಾಗಲಿ, ರಾಜ್ಯದವರಾಗಲಿ ಅಲ್ಲ ಎಂಬುದು ಗಮನಾರ್ಹ” ಎಂದುಅವರು ಹೇಳಿದ್ದಾರೆ.

“ಕೋಲಾರದ ‘ವಿಸ್ಟ್ರಾನ್‌’ ಘಟನೆಗೆ ಸಂಸ್ಥೆಯ ವ್ಯವಸ್ಥಾಪನೆಯಲ್ಲಿ ಆಗಿದ್ದ ಲೋಪವೇ ಕಾರಣ ಎಂದೂ, ಕಾರ್ಮಿಕರು, ನೌಕರರನ್ನು ಘನತೆಯಿಂದ ಕಾಣುವುದಾಗಿಯೂ ಆಪಲ್‌ ಸಂಸ್ಥೆ ಹೇಳಿದೆ. ವಿಸ್ಟ್ರಾನ್‌ ಕಂಪನಿಯೂ ತನ್ನ ಉಪಾಧ್ಯಕ್ಷನನ್ನು ಇದೇ ಉದ್ದೇಶಕ್ಕೆ ಕಿತ್ತು ಹಾಕಿದೆ. ಟೊಯೋಟಾ ಕೂಡ ತನ್ನ ಆಂತರಿಕ ವಿಚಾರಗಳ ಬಗ್ಗೆ ಒಮ್ಮೆ ಪಾರಾಮರ್ಶೆ ಮಾಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದರ್ಪ ಮುಂದುವರೆಸಿದ ಟೊಯೋಟಾ ಕಿರ್ಲೋಸ್ಕರ್; ಮತ್ತೇ 20 ಕಾರ್ಮಿಕರ ಅಮಾನತು

“ಸಮಸ್ಯೆಯನ್ನು ಸರ್ಕಾರವೂ ಆದ್ಯತೆ ಮೇಲೆ ಬಗೆಹರಿಸಲು ಮುಂದಾಗಬೇಕು. ಅದರಿಂದ ರಾಜ್ಯಕ್ಕೂ ಲಾಭವಿದೆ ಎಂಬುದನ್ನು ಸರ್ಕಾರ ಗಮನಿಸಬೇಕು. ಕಾರ್ಮಿಕರ ಪ್ರತಿಭಟನೆ, ದಾಂಧಲೆ, ಮುಷ್ಕರಗಳಂಥ ಘಟನೆಗಳು ಹೂಡಿಕೆದಾರರಲ್ಲಿ ಅಪನಂಬಿಕೆ ಹುಟ್ಟು ಹಾಕಲು ಕಾರಣವಾಗುತ್ತದೆ. ರಾಜ್ಯದಲ್ಲಿ ಸುಲಲಿತ ಉದ್ದಿಮೆ ನಡೆಸಲು ಅವಕಾಶಗಳಿಲ್ಲ ಎಂಬ ಭಾವನೆ ಮೂಡಿಸುತ್ತವೆ” ಎಂದಿದ್ದಾರೆ.

“ಈ ಎಲ್ಲ ಕಾರಣಗಳಿಂದಾಗಿ ಸರ್ಕಾರವೂ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ನಾನು ಒತ್ತಾಯಿಸುತ್ತೇನೆ. ಸಂಸ್ಥೆಯ ಪ್ರತಿಭಟನಾ ನಿರತ ಕಾರ್ಮಿಕರು, ಸಂಸ್ಥೆಯ ಮುಖ್ಯಸ್ಥರನ್ನು ನೇರಾನೇರವಾಗಿ ಸಂಧಾನಕ್ಕೆ ಕೂರಿಸಬೇಕು. ಈ ವಿಚಾರದಲ್ಲಿ ಸರ್ಕಾರ ಸಂಪರ್ಕ ಸೇತುವಾಗಿ ನಡೆದುಕೊಳ್ಳಬೇಕು. ರಾಜ್ಯದ ಔದ್ಯಮಿಕ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಕೂಡ” ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಟೊಯೋಟಾ ಕಾರ್ಮಿಕರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...