Homeಮುಖಪುಟಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಬಲಿಷ್ಠ, ವೈವಿಧ್ಯ ಭಾರತವನ್ನು ಪ್ರತಿನಿಧಿಸುತ್ತದೆ: ಪ್ರಧಾನಿ ಮೋದಿ

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಬಲಿಷ್ಠ, ವೈವಿಧ್ಯ ಭಾರತವನ್ನು ಪ್ರತಿನಿಧಿಸುತ್ತದೆ: ಪ್ರಧಾನಿ ಮೋದಿ

ಈ ನೂರು ವರ್ಷಗಳ ಎಎಂಯು ಇತಿಹಾಸದಲ್ಲಿ ವಿವಿಧ ದೇಶಗಳೊಂದಿಗಿನ ಭಾರತದ ಸಂಬಂಧ ವೃದ್ದಿಸಿದೆ ಮತ್ತು ಉತ್ತಮ ಸಂಶೋಧನೆಗಳಿಂದ ಇಡೀ ಇಸ್ಲಾಮಿಕ್ ಪ್ರಪಂಚದೊಂದಿಗೆ ಭಾರತದ ಸಾಂಸ್ಕೃತಿಕ ಸಂಬಂಧಗಳಿಗೆ ಹೊಸ ಶಕ್ತಿಯನ್ನು ನೀಡಿದೆ.

- Advertisement -
- Advertisement -

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯವು ವೈವಿಧ್ಯಮಯ ಭಾರತ ಮತ್ತು ಶಕ್ತಿಯುತ ಭಾರತವನ್ನು ಪ್ರತಿನಿಧಿಸುತ್ತದೆ. ಇಡೀ ವಿಶ್ವಕ್ಕೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸಿರುವ ಮತ್ತು ಕೊರೊನಾ ವಿರುದ್ಧದ ಹೋರಾಟದಲ್ಲಿ ಗಣನೀಯ ಕೊಡುಗೆ ಈ ವಿವಿಯ ಬಗ್ಗೆ ಹೆಮ್ಮೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕೊರೊನಾ ಸಮಯದಲ್ಲಿ ಈ ವಿವಿಯ ಸಾವಿರಾರು ವಿದ್ಯಾರ್ಥಿಗಳು ಸ್ವಯಂಪ್ರೇರಿತವಾಗಿ ಉಚಿತ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಡೀ ವಿವಿಯನ್ನು ಐಸೋಲೇಷನ್ ವಾರ್ಡ್‌ಗಳಾಗಿ ಬಳಸಿಕೊಳ್ಳಲಾಯಿತು. ಪ್ಲಾಸ್ಮಾ ದಾನ ಮಾಡುವ ಬ್ಯಾಂಕುಗಳಾಗಿ ಕೆಲಸ ಮಾಡಿದ ಈ ವಿವಿಯು ಪಿಎಂ ಕೇರ್ಸ್‌ ನಿಧಿಗೆ ಹೆಚ್ಚಿನ ಹಣ ನೀಡುವ ಮೂಲಕ ಸಮಾಜದ ಬಗ್ಗೆ ತನಗಿರುವ ಬದ್ಧತೆಯನ್ನು ತೋರಿಸಿದೆ” ಎಂದಿದ್ದಾರೆ.

ಈ ನೂರು ವರ್ಷಗಳ ಎಎಂಯು ಇತಿಹಾಸದಲ್ಲಿ ವಿವಿಧ ದೇಶಗಳೊಂದಿಗಿನ ಭಾರತದ ಸಂಬಂಧ ವೃದ್ದಿಸುವಲ್ಲಿ ಅದು ಮಹತ್ತರ ಪಾತ್ರವಹಿಸಿದೆ. ಉರ್ದು, ಅರೇಬಿಕ್ ಮತ್ತು ಪರ್ಷಿಯನ್ ಭಾಷೆಗಳ ಬಗೆಗಿನ ಸಂಶೋಧನೆ ಮತ್ತು ಇಸ್ಲಾಮಿಕ್ ಸಾಹಿತ್ಯದ ಕುರಿತಾದ ಸಂಶೋಧನೆಗಳಿಂದ “ಇಡೀ ಇಸ್ಲಾಮಿಕ್ ಪ್ರಪಂಚದೊಂದಿಗೆ ಭಾರತದ ಸಾಂಸ್ಕೃತಿಕ ಸಂಬಂಧಗಳಿಗೆ ಹೊಸ ಶಕ್ತಿಯನ್ನು ನೀಡಿದೆ” ಎಂದು ಮೋದಿ ಹೇಳಿದರು.

ಜಾತಿ ಮತಗಳ ಬೇದವಿಲ್ಲದೆ ದೇಶದ ಎಲ್ಲರ ಒಳಿತಿಗಾಗಿ, ಎಲ್ಲರ ಸಾಂವಿಧಾನಿಕ ಹಕ್ಕುಗಳಿಗಾಗಿ ದೇಶ ಮುನ್ನಡೆಯುತ್ತಿದೆ. ಯಾವ ಸಮುದಾಯವನ್ನು ಹಿಂದೆ ಉಳಿಯಲು ನಾವು ಬಿಡುವುದಿಲ್ಲ ಎಂದು ಮೋದಿ ಘೋಷಿಸಿದ್ದಾರೆ. ಸರ್ಕಾರದ ಯೋಜನೆಗಳು ಯಾವುದೇ ಧಾರ್ಮಿಕ ಬೇಧವಿಲ್ಲದೆ ಎಲ್ಲಾ ವರ್ಗದ ಬಡವರಿಗೆ ದೊರಕುತ್ತಿವೆ. ರಾಷ್ಟ್ರದ ಪ್ರಗತಿ ಮತ್ತು ಅಭಿವೃದ್ದಿಯ ವಿಚಾರಕ್ಕೆ ಬಂದರೆ ನಾವು ಸೈದ್ದಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತುತ್ತೇವೆ ಎಂದು ಅವರು ಹೇಳಿದ್ದಾರೆ.

ನಾವು ಯಾವು ಸಮುದಾಯದಲ್ಲಿ ಹುಟ್ಟಿದರೂ ಸರಿಯೆ, ನಮ್ಮ ಆಲೋಚನೆಗಳು ರಾಷ್ಟ್ರೀಯ ಗುರಿಗೆ ಪೂರಕವಾಗಿರಬೇಕು. ನಮ್ಮಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರುವುದು ನಿಜ. ಆದರೆ ರಾಷ್ಟ್ರದ ಪ್ರಗತಿಯ ವಿಚಾರಕ್ಕೆ ಬಂದರೆ ಅವು ಎರಡನೇ ಸ್ಥಾನಕ್ಕೆ ಹೋಗುತ್ತವೆ. ರಾಷ್ಟ್ರದ ವಿಚಾರದಲ್ಲಿ ಯಾವುದೇ ಸೈದ್ದಾಂತಿಕ ಭಿನ್ನತೆಗೆ ಆಸ್ಪದವಿಲ್ಲ. ಏಕೆಂದರೆ ಎಎಂಯು ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಆಗಲೂ ಅವರಿಗೆ ಸೈದ್ದಾಂತಿಕ ಭಿನ್ನಾಭಿಪ್ರಾಯವಿದ್ದರೂ ಅವರ ಗುರಿ ಸ್ವಾತಂತ್ರ್ಯವಾಗಿತ್ತು. ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಅವರು ಒಂದಾದಂತೆ ನಾವು ನವ ಭಾರತಕ್ಕಾಗಿ ಒಂದಾಗಬೇಕಿದೆ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯ ಪೂರ್ವದಲ್ಲಿ 1887 ರಲ್ಲಿ ಸೈಯದ್ ಅಹ್ಮದ್ ಖಾನ್‌ ಮುಹಮ್ಮಡನ್ ಆಂಗ್ಲೋ ಓರಿಯೆಂಟಲ್ ಕಾಲೇಜ್ ಸ್ಥಾಪಿಸಿದ್ದರು. ನಂತರ 1920ರಲ್ಲಿ ಅದನ್ನು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ಎಂದು ಬದಲಾಯಿಸಲಾಯಿತು. 1920ರ ಡಿಸೆಂಬರ್ 17 ರಂದು ಅದನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ಇಂದಿನ ಕಾರ್ಯಕ್ರಮದಲ್ಲಿ ಮೋದಿಯವರು “ಎಎಂಯು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಕೊಂಡು ಭಾರತದ 75ನೇ ಸ್ವಾತಂತ್ರ್ಯ ದಿನದ ವೇಳೆಗೆ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದ ಹೋರಾಟಗಾರರನ್ನು ಮುನ್ನೆಲೆಗೆ ತರಬೇಕೆಂದು” ಕರೆ ನಿಡಿದ್ದಾರೆ.

ಈ ಎಂಎಯು ವಿಶ್ವವಿದ್ಯಾಲಯವು ಕಳೆದ ವರ್ಷ ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟಗಳಿಗೆ ಸಾಕ್ಷಿಯಾಗಿತ್ತು. ಅಲ್ಲಿನ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರು. ನಂತರ ಇದೇ ವಿವಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಯುಪಿಯ ಖ್ಯಾತ ವೈದ್ಯ ಡಾ.ಕಫೀಲ್ ಖಾನ್‌ರನ್ನು ಬಂಧಿಸಲಾಗಿತ್ತು.


ಇದನ್ನೂ ಓದಿ: ಆಧುನಿಕ ಶಿಕ್ಷಣದ ಪ್ರವಾದಿ ಸೈಯದ್ ಅಹ್ಮದ್ ಖಾನ್‌ರನ್ನು ಏಕೆ ನೆನೆಯಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...