Homeಕರ್ನಾಟಕಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ಹಿಂಬಡ್ತಿ ಹೊಂದುವ ಭೀತಿಯಿಂದ ಸುಮಾರು 15 ಕ್ಕೂ ಹೆಚ್ಚು ಜನ ಈ ವರ್ಗಗಳ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -
- Advertisement -

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ನೌಕರರ ಬಡ್ತಿಗೆ ಸಂಬಂಧಿಸಿದಂತೆ ಸದರಿ ನೌಕರರ ಸಂಘದ ಪದಾಧಿಕಾರಿಗಳ ಸಭೆಯನ್ನು ಕರೆದು, ಅನ್ಯಾಯಕ್ಕೊಳಗಾಗಿರುವ ನೌಕರರ ಹಿತರಕ್ಷಿಸಬೇಕು ಮತ್ತು ಬಾಕಿ ಇರುವ ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಒತ್ತಾಯಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಬಡ್ತಿ ವಿಚಾರವು ಹಲವು ವರ್ಷಗಳಿಂದ ಬಿಡಿಸಲಾಗದ ಸಮಸ್ಯೆಯಾಗಿತ್ತು. ಹಿಂದೆ ಇದ್ದ ಕಾಯ್ದೆಗಳಲ್ಲಿನ ಕೆಲವು ನ್ಯೂನ್ಯತೆಗಳಿಂದಾಗಿ ನ್ಯಾಯಾಲಯಗಳೂ ಸಹ ಈ ಸಮಸ್ಯೆಯನ್ನು ಪರಿಹರಿಸಲು ದಶಕಗಟ್ಟಲೆ ಕಾಲಾವಧಿ ತೆಗೆದುಕೊಂಡಿದ್ದವು. ಕಡೆಗೆ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ಹಿಂಬಡ್ತಿ ಹೊಂದುವ ಭೀತಿಯಿಂದ ಸುಮಾರು 15 ಕ್ಕೂ ಹೆಚ್ಚು ಜನ ಈ ವರ್ಗಗಳ ನೌಕರರು ಆತ್ಮಹತ್ಯೆ ಮಾಡಿಕೊಂಡರು ಮತ್ತು ಅನ್ಯಾಯದ ಸಾವಿಗೀಡಾದರು ಎಂದು ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ವರ್ಗಗಳ ಹಿತಾಸಕ್ತಿಯನ್ನು ಸಂರಕ್ಷಿಸುವ ಉದ್ದೇಶದಿಂದ 2017 ರಲ್ಲಿ “ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಬಡ್ತಿ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಯಿತು. ಈ ಕಾಯ್ದೆಗೆ ರಾಷ್ಟ್ರಪತಿಗಳೂ ಅಂಕಿತ ಹಾಕಿದರು, ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವೂ ಈ ಕಾಯ್ದೆಯನ್ನು ಎತ್ತಿ ಹಿಡಿಯಿತು. ಇದರಿಂದಾಗಿ ಒಂದು ಲಕ್ಷಕ್ಕೂ ಹೆಚ್ಚು ನೌಕರರು ತುಸುಮಟ್ಟಿಗೆ ನಿರಾಳವಾದರು. ಆದರೆ ಪ್ರಸ್ತುತ ನಿಮ್ಮ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಾಗೂ ಹಿಂದುಳಿದ ವರ್ಗಗಳ ನೌಕರರ ಕುರಿತಾದ ನಿರ್ಲಕ್ಷ್ಯ ಧೋರಣೆಯಿಂದಾಗಿ ಮತ್ತು ಹಲವು ಇಲಾಖೆಗಳ ಅಧಿಕಾರಿಗಳ ಉದ್ಧಟತನದಿಂದಾಗಿ ಮತ್ತೆ ಅದೇ ರೀತಿಯ ಸಮಸ್ಯೆಗಳು ಉದ್ಭವಿಸುತ್ತಿವೆ. ಮುಖ್ಯವಾಗಿ ಲೋಕೋಪಯೋಗಿ, ಜಲಸಂಪನ್ಮೂಲ, ಅಬಕಾರಿ, ಪೊಲೀಸ್, ಅರಣ್ಯ ಸಾರಿಗೆ, ನಗರಾಭಿವೃದ್ಧಿ, ಔಷಧ ನಿಯಂತ್ರಣ, ಕೆಪಿಟಿಸಿಎಲ್, ಅಗ್ನಿ ಶಾಮಕ, ಕೃಷಿ, ಶಿಕ್ಷಣ ಮುಂತಾದ ಇಲಾಖೆಗಳಲ್ಲಿ ಕಿರಿಯರಿಗೆ ಬಡ್ತಿ ನೀಡಿ, ಹಿರಿಯರನ್ನು ಕಡೆಗಣಿಸಲಾಗಿದೆ. ಉದಾಹರಣೆಗೆ ಜಲಸಂಪನ್ಮೂಲ ಇಲಾಖೆಯಲ್ಲಿ 2009 ರಲ್ಲಿ ನೇಮಕವಾದವರನ್ನು ಬಿಟ್ಟು 2003 ಮತ್ತು 2007 ರ ಬ್ಯಾಚ್‌ಗಳಲ್ಲಿ ನೇಮಕಗೊಂಡ ಎಂಜಿನಿಯರುಗಳಿಗೆ ಬಡ್ತಿ ನೀಡಲಾಗಿದೆ. ಈ ರೀತಿಯ ಹಲವು ಸಮಸ್ಯೆಗಳು ಉದ್ಭವವಾಗಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನೇರ ನೇಮಕಾತಿ ಆದವರಿಗೆ ಮತ್ತು ಬ್ಯಾಕ್‌ಲಾಗ್ ಮೂಲಕ ನೇಮಕಾತಿ ಆದವರಿಗೂ ಹಲವು ಸಮಸ್ಯೆಗಳಿವೆ. ಪ.ಜಾತಿ, ಪ.ಪಂಗಡಗಳಿಗೆ ಸೇರಿದ ಅಭ್ಯರ್ಥಿಗಳು ನೇಮಕಾತಿಯಲ್ಲಿ ಮೆರಿಟ್‌ನ ಕಾರಣಕ್ಕೆ ಸಾಮಾನ್ಯ ಕೋಟಾದಡಿ ಆಯ್ಕೆ ಆಗಿದ್ದರೆ ಅಂತವರಿಗೆ ಬಡ್ತಿ ನಿರಾಕರಿಸುವುದು ಅಸಂವಿಧಾನಿಕ ವರ್ತನೆಯಾಗುತ್ತದೆ. ಆದ್ದರಿಂದ, ಸ್ವತಃ ಮುಖ್ಯಮಂತ್ರಿಗಳೇ ಈ ಕುರಿತು ಗಮನ ಹರಿಸಬೇಕಾದ ಅಗತ್ಯವಿದೆ. ಈ ವರ್ಗಗಳ ನೌಕರರ ಸಮಸ್ಯೆಗಳ ನಿವಾರಣೆಗೋಸ್ಕರವೇ ಸರ್ಕಾರದ ಮಟ್ಟದಲ್ಲಿ ಹಿರಿಯ ಸಚಿವರ ಮುಂದಾಳತ್ವದಲ್ಲಿ ಶಾಶ್ವತ ಸಮಿತಿಯೊಂದನ್ನು ರಚಿಸಿ, ಕಾಲ ಕಾಲಕ್ಕೆ ಉದ್ಭವವಾಗುವ ಸಮಸ್ಯೆಗಳನ್ನು ಬಗೆಹರಿಸಬೇಕಾಗಿದೆ. ಪ್ರಸ್ತುತ ಉದ್ಭವವಾಗಿರುವ ಸಮಸ್ಯೆಗಳ ಕುರಿತು ಪ.ಜಾತಿ, ಪ.ಪಂಗಡಗಳ ನೌಕರರ ಸಂಘದ ಪದಾಧಿಕಾರಿಗಳ ಸಭೆಯನ್ನು ತುರ್ತಾಗಿ ಕರೆದು ಸಹಾನುಭೂತಿಯಿಂದ ಪರಿಶೀಲಿಸಿ ಅನ್ಯಾಯಕ್ಕೊಳಗಾಗಿರುವ ನೌಕರರ ಹಿತರಕ್ಷಣೆಯನ್ನು ರಕ್ಷಿಸಬೇಕು ಮತ್ತು ಬಾಕಿ ಇರುವ ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಚುನಾವಣೆ: ಫಾರೂಕ್ ಅಬ್ದುಲ್ಲಾರ ಗುಪ್ಕರ್ ಒಕ್ಕೂಟಕ್ಕೆ ಮುನ್ನಡೆ – ಎರಡನೇ ಸ್ಥಾನಕ್ಕೆ ಕುಸಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...